ಸಚಿವರ ಮುಂದೆ ಅಕ್ರಮ ಮರಳುಗಾರಿಕೆ ಅನಾವರಣ

ಹರಿಹರದ ಸ್ಟಾಕ್‌ ಯಾರ್ಡ್‌ಗೆ ಭೇಟಿ ನೀಡಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಬಿ. ಪಾಟೀಲ್

Team Udayavani, Jul 3, 2019, 10:12 AM IST

3-July-4

ದಾವಣಗೆರೆ: ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಬಿ. ಪಾಟೀಲ್ ಮಂಗಳವಾರ ರಾಜನಹಳ್ಳಿ ಸಮೀಪದ ತುಂಗಭದ್ರಾ ನದಿ ಪಾತ್ರದ ಸ್ಟಾಕ್‌ ಯಾರ್ಡ್‌ಗೆ ಭೇಟಿ ನೀಡಿದಾಗ ಅಕ್ರಮ ಮರಳುಗಾರಿಕೆ ಬಗ್ಗೆ ಗಮನ ಸೆಳೆದ ಸಂದರ್ಭ.

ದಾವಣಗೆರೆ: ತುಂಗಭದ್ರಾ ನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಗೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಬಿ. ಪಾಟೀಲ್ ಗಮನ ಸೆಳೆದ ಘಟನೆ ಮಂಗಳವಾರ ನಡೆದಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಂತರ ಸಚಿವರು, ಹರಿಹರ ತಾಲ್ಲೂಕಿನ ರಾಜನಹಳ್ಳಿ ಬಳಿಯ ತುಂಗಭದ್ರಾ ನದಿ ಪಾತ್ರದಲ್ಲಿನ ಗುತ್ತಿಗೆದಾರರ ಸ್ಟಾಕ್‌ ಯಾರ್ಡ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್‌ ಎಂಬುವರು, ಅಲ್ಲಿನ ಅಕ್ರಮ ಮರಳುಗಾರಿಕೆ ಕುರಿತು ದೂರಿದರು.

ನದಿ ಪಾತ್ರದಲ್ಲಿ ಒಂದು ಮೀಟರ್‌ಗಿಂತ ಹೆಚ್ಚು ಆಳ ಗುಂಡಿ ತೆಗೆಯಬಾರದೆಂಬ ನಿಯಮವಿದ್ದರೂ ಗುತ್ತಿಗೆದಾರರು 10 ಅಡಿ ಆಳ ಗುಂಡಿ ತೆಗೆದು ಮರಳು ಎತ್ತುತ್ತಿದ್ದಾರೆ. ಹುಡುಗರು, ದನಗಾಹಿಗಳು ಓಡಾಡುತ್ತಿರುತ್ತಾರೆ. ಮನುಷ್ಯರಿಗೇ ತಿಳಿಯದ ಗುಂಡಿಗಳ ಆಳ ದನ ಕರುಗಳಿಗೆ ಹೇಗೆ ಗೊತ್ತಾಗುತ್ತದೆ. ಅಮಾಯಕರ ಬಲಿ ಪಡೆದು ಸರ್ಕಾರ ಆದಾಯ ಪಡೆಯಬೇಕೆ?. ಯಾವುದೇ ಅನಾಹುತ ಸಂಭವಿಸುವ ಮುನ್ನ ಕ್ರಮ ಕೈಗೊಳ್ಳಿ ಎಂದು ಸಚಿವರನ್ನು ಕೋರಿದರು.

ನೀರಲ್ಲಿ ಮರಳು ಎತ್ತಬಾರದೆಂಬ ನಿಯಮವಿದ್ದರೂ ನದಿಯಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇಲ್ಲಿ ನಡೆಯುವ ಮರಳುಗಾರಿಗೆ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ಅಧಿಕಾರಿಗಳು ತರುವುದೇ ಇಲ್ಲ. ಇಲ್ಲಿನ ಮರಳುಗಾರಿಕೆಯಿಂದ ನಮ್ಮ ಗ್ರಾಮ ಪಂಚಾಯಿತಿಗೂ ಆದಾಯ ಸಿಗಲಿದೆ. ಆದರೆ, ಆದಾಯ ಬರಲಿದೆ ಎಂಬ ಉದ್ದೇಶದಿಂದ ಅಕ್ರಮಕ್ಕೆ ದಾರಿ ಮಾಡಿಕೊಡುವುದು ಬೇಡ. ಅಂತಹ ಆದಾಯವೂ ಬೇಡ ಎಂದು ಹೇಳಿದರು.

ಮರಳು ಅಧಿಕ ಪ್ರಮಾಣದಲ್ಲಿ ಸಾಗಿಸಲಾಗುತ್ತಿದೆ. 5 ಮೆಟ್ರಿಕ್‌ ಟನ್‌ ಪರವಾನಿಗೆ ಪಡೆದು 10 ಮೆಟ್ರಿಕ್‌ ಟನ್‌ ಮರಳು ಸಾಗಣೆ ನಡೆಯುತ್ತಿದೆ. ಎಲ್ಲವೂ ಗೊತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಾರೆ. ನಾವೂ ಸಹ ಸಾಕಷ್ಟು ಬಾರಿ ತಹಶೀಲ್ದಾರ್‌ ಗಮನಕ್ಕೆ ತಂದಿದ್ದೇವೆ. ಅದರಿಂದ ಯಾವುದೇ ಪ್ರಯೋಜನ ಆಗಿಲ್ಲ. ಗ್ರಾಮ ಪಂಚಾಯಿತಿ ಸಭೆಗೆ ಅಧಿಕಾರಿಗಳು ಬರುವುದೇ ಇಲ್ಲ. ಎಲ್ಲಾ ಮಾಹಿತಿ ಮುಚ್ಚಿಡಲಾಗುತ್ತಿದೆ. ಹಲವಾರು ಬಾರಿ ಅಧಿಕಾರಿಗಳಿಗೆ ಫೋನ್‌ ಮಾಡಿದರೆ ಅವರು ಸ್ಪಂದಿಸುವುದೇ ಇಲ್ಲ. ಮರಳುಗಾರಿಕೆಯೇ ಬೇಡ ಎಂದು ವಿರೋಧಿಸುತ್ತಿಲ್ಲ. ಅದು ಕಾನೂನು ಪ್ರಕಾರ ನಡೆಯಲು ಕ್ರಮ ವಹಿಸಿ ಎಂದು ಸಚಿವರ ಗಮನ ಸೆಳೆದರು.

ಆಗ ಸಚಿವರು, ನಾನು ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಾಗ ಈ ಸಮಸ್ಯೆ ಬಗ್ಗೆ ಯಾರೂ ಗಮನ ಸೆಳೆಯಲಿಲ್ಲ. ಇಲ್ಲಿ ಹೇಳುತ್ತಿದ್ದೀರಿ ಎಂದರಲ್ಲದೆ, ಸ್ಥಳದಲ್ಲಿದ್ದ ಹರಿಹರ ತಹಶೀಲ್ದಾರ್‌ಗೆ ಬೌಂಡರಿ ಫಿಕ್ಸ್‌ ಮಾಡಿ. ಜನರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸೂಚಿಸಿದರು.

ಕಾನೂನುಬಾಹಿರ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ. ಮರಳುಗಾರಿಗೆ ಸಂಬಂಧ ಬರೀ ಗ್ರಾಮ ಪಂಚಾಯಿತಿಗಲ್ಲ ಸಾರ್ವಜನಿಕರಿಗೂ ಮಾಹಿತಿ ತಿಳಿಯಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲೆಯಲ್ಲಿ ಮರಳುಗಾರಿಕೆಯಿಂದ ಸರ್ಕಾರಕ್ಕೆ 20 ಕೋಟಿ ರಾಯಲ್ಟಿ ಬರುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಈ ಸಂದರ್ಭದಲ್ಲಿ ಹರಿಹರ ತಹಶೀಲ್ದಾರ್‌ ರೆಹಾನ ಪಾಷ, ರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾಂತೇಶ್‌, ಪಿಡಿಓ ವಿಜಯಲಕ್ಷ್ಮಿ, ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.