ಹೊಸ ಪಿಂಚಣಿ ಯೋಜನೆ ಬೇಡವೇ ಬೇಡ

ವಿವಿಧ ಸರ್ಕಾರಿ ನೌಕರರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ-ಮನವಿ

Team Udayavani, Dec 8, 2019, 11:24 AM IST

8-December-3

ದಾವಣಗೆರೆ: ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ, ಹಳೇ ಪಿಂಚಣಿ ಪದ್ಧತಿ ಜಾರಿಗೊಳಿಸಲು ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ನೌಕರರು ರಕ್ತ ಕೊಟ್ಟೇವು ಪಿಂಚಣಿ ಬಿಡೆವು…ಶೀರ್ಪಿಕೆಯಡಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಸರ್ಕಾರಿ ನೌಕರರು ನಿವೃತ್ತಿಯ ನಂತರ ವೃದ್ಧಾಪ್ಯದ ಕಾಲದಲ್ಲಿ ಪಿಂಚಣಿ ಬಂದಲ್ಲಿ ಮಾತ್ರ ಮಕ್ಕಳು, ಸಂಬಂಧಿಕರು, ಪೋಷಕರನ್ನು ಪೋಷಣೆ ಮಾಡಲು ಸಾಧ್ಯವಾಗುತ್ತದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರ ಎನ್‌ಪಿಎಸ್‌ ಜಾರಿಗೊಳಿಸಿರುವುದರಿಂದ ವೃದ್ಧಾಶ್ರಮಗಳು ಹೆಚ್ಚು ಮಾಡಲು ಅವಕಾಶವಾಗುತ್ತದೆ. ಆದ್ದರಿಂದ ನಿವೃತ್ತಿ ವೇತನದಿಂದ ಕಷ್ಟದಲ್ಲಿ ಬದುಕನ್ನು ಕಟ್ಟಿಕೊಳ್ಳುವುದಕ್ಕೆ ಸಹಾಯ ಮಾಡಬೇಕೆಂದು ಒತ್ತಾಯಿಸಿದರು.

ನಂತರ, ಪ್ರತಿಭಟನಾಕಾರರು ಕಾಲ್ನಡಿಗೆ ಜಾಥಾ ಹೊರಟು ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಜಯದೇವ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಬಳಿಕ ಮೆರವಣಿಗೆ ಮೂಲಕ ಗಾಂಧಿ ವೃತ್ತದ ಮಾರ್ಗವಾಗಿ ಸಾಗಿ ಮಹಾನಗರ ಪಾಲಿಕೆ ಮುಂಭಾಗದಲ್ಲಿರುವ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಅಲ್ಲಿ ರಕ್ತದಾನ ಮಾಡಿ, ಎನ್‌ಪಿಎಸ್‌ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನೌಕರರ ವಂತಿಗೆ ಹಣಕ್ಕೆ ಯಾವುದೇ ಭದ್ರತೆ ನೀಡಿಲ್ಲ. ಇದು ನೌಕರರ ಸಂಧ್ಯಾಕಾಲದ ಜೀವನವನ್ನು ಅಭದ್ರತೆಗೆ ತಳ್ಳಲು ಕಾರಣವಾಗಿದೆ. ಪಿಂಚಣಿ ಎಂಬುದು ನೌಕರರು ಮಾಡಿದ ಸೇವೆಗಾಗಿ ಇಳಿವಯಸ್ಸಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ನೀಡುವ ಹಕ್ಕಿನಂಶದ ಹಣವೆಂದು ಪರಿಗಣಿಸುವಂತೆ ಸರ್ವೋಚ್ಛ ನ್ಯಾಯಾಲಯ ಸಹ ಹೇಳಿದೆ. ಹಾಗಾಗಿ ಅವೈಜ್ಞಾನಿಕ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೇ ಪಿಂಚಣಿ ಪದ್ಧತಿ ಜಾರಿಗೊಳಿಸಲು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ. ಶಿವಕುಮಾರ್‌, ಪ್ರಧಾನ ಕಾರ್ಯದರ್ಶಿ ಮೋಹನ್‌.ಎಚ್‌.ಆರ್‌., ಪಾಲಿಕೆ ಪೌರಸೇವಾ ನೌಕರರ ಸಂಘದ ಅಧ್ಯಕ್ಷ ಕೆ.ಎಸ್‌.ಗೋವಿಂದರಾಜ್‌, ರಾಜ್ಯ ಸಮಿತಿ ಸದಸ್ಯ ಜಿ.ಎನ್‌. ಮಂಜಪ್ಪ, ಸಂಘದ ಮುಖಂಡರಾದ ಬಸವರಾಜ್‌ ಎಚ್‌.ಜಿ.ಎಂ., ಶಿವಣ್ಣ ಬಿ., ವಿಶ್ವನಾಥ್‌, ಗುರುಮೂರ್ತಿ, ಮಾರುತಿ ಇತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ರಾಷ್ಟ್ರವ್ಯಾಪಿ ಏಕ ಕಾಲದಲ್ಲಿ ಕರೆ ನೀಡಲಾದ ಈ ಹೋರಾಟದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಅಖೀಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ, ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಿಕ್ಷಕರು, ಲಿಪಿಕ, ವಾಹನ ಚಾಲಕ ಹಾಗೂ ಗ್ರೂಪ್‌ ಡಿ ನೌಕರರ ಸಂಘ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ, ಬೆಸ್ಕಾಂ ನೌಕರರ ಒಕ್ಕೂಟ, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ನೌಕರರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.