ಕಾನೂನು ಸಾಕ್ಷರತಾ ರಥಯಾತ್ರೆಗೆ ಚಾಲನೆ

ತಜ್ಞರಿಂದ ದಾವಣಗೆರೆ ತಾಲೂಕಿನ ವಿವಿಧೆಡೆ ಕಾನೂನು ವಿಷಯಗಳ ಉಪನ್ಯಾಸ

Team Udayavani, Jul 8, 2019, 10:19 AM IST

ದಾವಣಗೆರೆ: ತಾಲೂಕು ಕಾನೂನು ಸಾಕ್ಷರತಾ ರಥಯಾತ್ರೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ್‌ ಜಿ. ಚಾಲನೆ ನೀಡಿದರು.

ದಾವಣಗೆರೆ: ತಾಲೂಕಿನಲ್ಲಿ ಕಾನೂನು ಅರಿವು ಮೂಡಿಸುವ ಕಾನೂನು ಸಾಕ್ಷರತಾ ರಥಯಾತ್ರೆಗೆ ಹಸಿರು ನಿಶಾನೆ ತೊರಿಸುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ್‌.ಜಿ. ಚಾಲನೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ತಾಲೂಕು ಮತ್ತು ಗ್ರಾಪಂ, ಆರಕ್ಷಕ ಮತ್ತು ಸರ್ಕಾರಿ ಅಭಿಯೋಜಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ದೇವರಾಜ ಅರಸು ಬಡಾವಣೆಯ ನ್ಯಾಯಾಲಯಗಳ ಸಂಕೀರ್ಣ ಆವರಣದಲ್ಲಿ ಕಾನೂನು ಸಾಕ್ಷರತಾ ರಥಯಾತ್ರೆಗೆ ಅವರು ಚಾಲನೆ ನೀಡಿದರು.

ಈ ವೇಳೆ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಬಡಿಗೇರ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್‌.ಟಿ. ಮಂಜುನಾಥ್‌, ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಎಲ್.ಎಚ್. ಅರುಣ್‌ಕುಮಾರ್‌, ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಗಬಾಲಯ್ಯ, ಜಿಲ್ಲಾ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಚಂದ್ರಕಲಾ, ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ್‌ ನವಲೆ, ಜಿಲ್ಲಾ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧಿಧೀಶ ಹಾಗೂ ಸಿಜೆಎಂ ಸಾಬಪ್ಪ, ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಬಿ.ಎಲ್. ಜಿನರಾಲ್ಕರ್‌, ಜಿಲ್ಲಾ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರಶ್ಮಿ ಎಸ್‌. ಮರಡಿ, ನ್ಯಾಯಾಧಿಧೀಶರಾದ ನಾಗಶ್ರೀ, ನಂದಿನಿ, ಜಿ.ಕಿರಣ್‌ ಸೇರಿದಂತೆ ವಕೀಲರ ಸಂಘದ ಸದಸ್ಯರು ಹಾಜರಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ