ಕರ್ನಾಟಕದ ವೈಶಿಷ್ಟ್ಯ ಅನಾವರಣ

ಮಕ್ಕಳಿಂದ ವಿವಿಧ ಜಿಲ್ಲೆಗಳ ಆಹಾರ ಪದಾರ್ಥ-ಸಂಸ್ಕೃತಿ ಪ್ರದರ್ಶನ

Team Udayavani, Nov 24, 2019, 10:55 AM IST

24-November-3

ದಾವಣಗೆರೆ: ಅಲ್ಲಿ ಮಿನಿ ಕರ್ನಾಟಕವೇ ಅನಾವರಣಗೊಂಡಿತ್ತು. ಒಂದೊಂದು ಜಿಲ್ಲೆಯ ವೈಶಿಷ್ಟ್ಯಗಳನ್ನು ಮಕ್ಕಳು ತಮ್ಮದೇ ಆದ ಪರಿಕಲ್ಪನೆಯಲ್ಲಿ ಅರಳಿಸಿದ್ದರು. ನಾಡಿಗಾಗಿ ಬದುಕನ್ನೇ ಮುಡಿಪಾಗಿಟ್ಟ ಮಹನೀಯರ ವೇಷಭೂಷಣ ತೊಟ್ಟು ಚಿಣ್ಣರು ಗಮನ ಸೆಳೆದರು.

ಶನಿವಾರ ಈ ದೃಶ್ಯ ಕಂಡು ಬಂದಿದ್ದು, ನಗರದ ಬಿ.ಇ.ಎ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಆವರಣದಲ್ಲಿ. ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ದಕ್ಷಿಣ ವಲಯ, ನೇತಾಜಿ ಸ್ಕೌಟ್‌ ಗ್ರೂಪ್‌ ಮತ್ತು ಚೇತನ ಗೈಡ್‌ ಗ್ರೂಪ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೆಲವು ಪರಿಕರಗಳನ್ನು ಬಳಸಿ ಮಾದರಿಗಳನ್ನು ಪ್ರದರ್ಶಿಸಿದರು. ಭಾವಚಿತ್ರಗಳೂ ಇದ್ದವು. ಆಯಾ ಜಿಲ್ಲೆಗಳ ವಿಶೇಷ ಆಹಾರ ಪದಾರ್ಥಗಳನ್ನು ಇಡಲಾಗಿತ್ತು. ಒಟ್ಟಿನಲ್ಲಿ ನೋಡುಗರಿಗೆ ಕರ್ನಾಟಕದ ಪ್ರವಾಸ ಮಾಡಿಬಂದ ಅನುಭವ ಆಗುವಂತಿತ್ತು.

ಶಿವಮೊಗ್ಗದ ಜೋಗ ಜಲಪಾತ, ಬೆಂಗಳೂರಿನ ವಿಮಾನ ನಿಲ್ದಾಣ, ಕಬ್ಬನ್‌ ಪಾರ್ಕ್‌, ಮೆಟ್ರೋ, ಮೈಸೂರಿನ ಅರಮನೆ, ಮೃಗಾಲಯ, ಬಾಗಲಕೋಟೆ ಜಿಲ್ಲೆಯ ಬಾದಾಮಿ ಗುಹೆಗಳು, ಐಹೊಳೆ, ಪಟ್ಟದಕಲ್ಲು ದೇವಾಲಯಗಳು, ಕೂಡಲಸಂಗಮ, ಆ ಜಿಲ್ಲೆಯ ಆಹಾರ ಪದಾರ್ಥಗಳು, ಪ್ರಮುಖ ವ್ಯಕ್ತಿಗಳ ಭಾವಚಿತ್ರಗಳು ಅಲ್ಲಿದ್ದವು.

ಧಾರವಾಡದ ಗಿರ್‌ಮಿಟ್‌, ಧಾರವಾಡ ಪೇಡಾ, ವಿಮಾನ ನಿಲ್ದಾಣ, ಹುಬ್ಬಳ್ಳಿಯ ಕಿತ್ತೂರು ಚನ್ನಮ್ಮ ವೃತ್ತ, ಹೈಕೋರ್ಟ್‌ ಪೀಠ, ಜಿಲ್ಲೆಯ ನದಿಗಳು, ಕವಿಗಳ ಭಾವಚಿತ್ರಗಳು. ತುಮಕೂರಿನ ಸಿದ್ಧಗಂಗಾ ಮಠ, ಕಲಬುರಗಿಯ ರೈಲು ನಿಲ್ದಾಣ, ಜೋಳದ ರೊಟ್ಟಿ, ಬಳ್ಳಾರಿ ಜಿಲ್ಲೆಗೆ ಸಂಬಂಧಿಸಿದಂತೆ ಹಂಪಿಯ ಕಲ್ಲಿನ ರಥ, ಯಾದಗಿರಿಯ ಕೋಟೆ, ಬೆಳಗಾವಿಯ ಸುರ್ವರ್ಣ ಸೌಧ, ಕುಂದಾ, ಉಡುಪಿಯ ಕೃಷ್ಣಮಠ, ಚಿಕ್ಕಮಗಳೂರಿನ ಕಾಫಿ ಮತ್ತು ಟೀ ಎಸ್ಟೇಟ್‌ಗಳು, ದಾವಣಗೆರೆ ಸ್ಪೆಷಲ್‌ ಬೆಣ್ಣೆದೋಸೆ ಹೀಗೆ ಇಡೀ ನಾಡಿನ ವಿಶೇಷಗಳ ಸಂಕ್ಷಿಪ್ತ ರೂಪ ಅಲ್ಲಿ ನೋಡಲು ಸಿಕ್ಕಿತು.

ಸಾಂಸ್ಕೃತಿಕ ಹಿರಿಮೆ ಪರಿಚಯ… ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ದೇಶ ಸುತ್ತಬೇಕು, ಕೋಶ ಓದಬೇಕು. ಇಂಥ ಕಾರ್ಯಕ್ರಮಗಳ ಮೂಲಕ ನಾಡಿನ ಸಾಂಸ್ಕೃತಿಕ ಹಿರಿಮೆಯ ಪರಿಚಯವಾಗುತ್ತದೆ ಎಂದರು.

ಬಾಪೂಜಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಕಿರುವಾಡಿ ಗಿರಿಜಮ್ಮ ಮಾತನಾಡಿ, ಶಾಲೆಯಲ್ಲಿ ಕಲಿಯುವ ವಿಷಯಗಳ ಜತೆಗೆ ಇಂಥ ಕಾರ್ಯಕ್ರಮಗಳು ಮಕ್ಕಳಿಗೆ ಹೊಸ ಅನುಭವ ನೀಡುತ್ತವೆ ಎಂದು ತಿಳಿಸಿದರು. ಸ್ಕೌಟ್‌ ದಕ್ಷಿಣ ವಲಯ ಅಧ್ಯಕ್ಷ ಎ.ಆರ್‌. ಉಜ್ಜನಪ್ಪ, ಗೈಡ್ಸ್‌ ಸಂಸ್ಥೆಯ ರಾಜ್ಯ ತರಬೇತಿ ಸದಸ್ಯೆ ಶಕುಂತಲಾ, ಸ್ಕೌಟ್‌ ಮಾಸ್ಟರ್‌ ವಿಜಯ್‌, ಚೇತನಾ ಗೈಡ್‌ ಗ್ರೂಪ್‌ನ ಮಧುಶ್ರೀ ಇದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.