ಬದಲಾಗಿ ಬದಲಾವಣೆ ಬಯಸೋಣ: ಬೀಳಗಿ

Team Udayavani, Nov 27, 2019, 11:32 AM IST

27-November-4

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕುಂದುವಾಡ ಕೆರೆ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ನಾಗರಿಕರಾಗಿ ನಮ್ಮ ಜವಾಬ್ದಾರಿಯನ್ನು ಇಲ್ಲಿ ಭಾಗವಹಿಸುವುದರೊಂದಿಗೆ ಕೈಜೋಡಿಸಿ… ಎಂಬ ಧ್ಯೇಯ ವಾಕ್ಯದೊಂದಿಗೆ ನಮ್ಮ ನಗರ-ನಮ್ಮ ಕೆರೆ ಸ್ವಚ್ಛತಾ ಆಂದೋಲನದಲ್ಲಿ ಚುಮು ಚುಮು ಚಳಿಯಲ್ಲೂ ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ನಗರಪಾಲಿಕೆ ಆಯುಕ್ತ ಮಂಜುನಾಥ್‌ ಬಳ್ಳಾರಿ ಇತರೆ ಅಧಿಕಾರಿಗಳು, ಸಾರ್ವಜನಿಕರು ಕುಂದುವಾಡ ಕೆರೆ ಏರಿ ಸ್ವಚ್ಛ ಮಾಡಿದರು.

ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಮಾತನಾಡಿ, ನಮ್ಮ ಸುತ್ತಮುತ್ತ ಬದಲಾವಣೆ ಬಯಸುವ ನಾವು ಮೊದಲು ನಮ್ಮಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಆಗ ಮಾತ್ರ ಧನಾತ್ಮಕ ಬದಲಾವಣೆ ಸಾಧ್ಯ. ನಾಗರಿಕರು ತಮ್ಮ ಮನೆ ಸುತ್ತಮುತ್ತಲಿನ ವಾತಾರವಣ, ಚರಂಡಿ ಇತರೆ ಸ್ವಚ್ಛವಾಗಿಟ್ಟುಕೊಳ್ಳುವ ಸಂಕಲ್ಪ ತೊಡಬೇಕು. ಆಗ ಇಡೀ ನಗರ ಸ್ವಚ್ಛವಾಗಿ ಕಂಗೊಳಿಸುತ್ತದೆ. ನಾವು ಎಷ್ಟು ಲೋಡ್‌ ಕಸ ಸಂಗ್ರಹಿಸಿದೆವು ಎನ್ನುವುದಕ್ಕಿಂತ ಮುಖ್ಯವಾಗಿ ಎಷ್ಟು ಹಸಿರೀಕರಣ ಮಾಡಿದೆವು ಎನ್ನುವುದು ಮುಖ್ಯವಾಗುತ್ತದೆ ಎಂದರು.

ಸರ್ಕಾರವೇ ಸ್ವಚ್ಛತೆ ಮಾಡಬೇಕು ಎಂದು ದೂರುವ ಬದಲಾಗಿ ಎಲ್ಲರೂ ಕೂಡಿ ಕೆಲಸ ಮಾಡೋಣ ಎಂಬ ಮನಸ್ಥಿತಿ ನಿರ್ಮಾಣ ಆಗಬೇಕು. ಆಗ ಮಾತ್ರ ಬದಲಾವಣೆ ಸಾಧ್ಯ. ಒಬ್ಬೊಬ್ಬರು ಒಂದು ಕಳೆಯ ಗಿಡವನ್ನು ಕಿತ್ತರೂ ಸಾಕು, ನಗರ ಸ್ವಚ್ಛವಾಗುತ್ತದೆ. ನಾಗರಿಕರು ಮನಸ್ಸು ಮಾಡಿದರೆ 10 ಕೆರೆಯನ್ನು ಸ್ವಚ್ಛಗೊಳಿಸಬಹುದು. ಸ್ವಚ್ಛತೆ ಕಾರ್ಯ ನಿರಂತರವಾಗಿ ಸಾಗಲಿದೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ನಗರಪಾಲಿಕೆ ಸೇರಿದಂತೆ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕರು, ವಾಯು ವಿಹಾರ ಬಳಗದವರು ಸಂತೋಷದಿಂದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವುದು ಒಂದು ದಿನಕ್ಕೆ ಮಾತ್ರ ಸೀಮಿತವಲ್ಲ.

ನಿರಂತರವಾಗಿ ನಡೆಯುವಂತಹ ಕೆಲಸ. ಆಸಕ್ತರೆಲ್ಲರೂ ದಿನವೂ ತಮ್ಮ ಶ್ರಮದಾನ ಮಾಡಬಹುದು. ಕುಂದುವಾಡ ಕೆರೆ ಸುತ್ತಮುತ್ತ ಉತ್ತಮ ಗಿಡ, ಮರಗಳಿದ್ದು ಒಳ್ಳೆಯ ಪರಿಸರ ಏರ್ಪಟ್ಟಿದೆ. ಮನಸ್ಸಿಗೆ ಮತ್ತು ಆರೋಗ್ಯಕ್ಕೆ ಚೇತೋಹಾರಿಯಾಗಿದ್ದು, ಎಲ್ಲರೂ ಶ್ರಮದಾನದ ಮೂಲಕ ನಮ್ಮ ನಗರದ ಸ್ವತ್ಛತೆಯ ಕಾಪಾಡಿಕೊಳ್ಳೋಣ ಎಂದು ಮನವಿ ಮಾಡಿದರು.

ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್‌ ಆರ್‌.ಬಳ್ಳಾರಿ, ದೂಡಾ ಆಯುಕ್ತ ಆದಪ್ಪ, ಹೆಚ್ಚುವರಿ ಅಧೀಕ್ಷಕ ಎಂ. ರಾಜೀವ್‌, ನಗರ ಡಿವೈಎಸ್‌ಪಿ ನಾಗೇಶ್‌ ಐತಾಳ್‌, ಗ್ರಾಮಾಂತರ ಡಿವೈಎಸ್‌ಪಿ ಎಂ.ಕೆ. ಗಂಗಲ್‌ ಇದ್ದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.