ಪ್ರವಾಸಿ ತಾಣಗಳಿಗೆ ಅಗತ್ಯ ಸೌಲಭ್ಯ

ಸೌಲಭ್ಯಗಳ ಡಿಮ್ಯಾಂಡ್‌ ಸರ್ವೇಗೆ ಸಚಿವ ಸಿ.ಟಿ. ರವಿ ಸೂಚನೆಜಿಲ್ಲೆಯಲ್ಲಿ ರಾಜ್ಯಮಟ್ಟದ 5 ಪ್ರವಾಸಿ ತಾಣ

Team Udayavani, Sep 25, 2019, 11:31 AM IST

25-Spectember-4

ದಾವಣಗೆರೆ: ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ, ಸಂಪರ್ಕ, ಹೋಟೆಲ್‌ ಇತರೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬೇಡಿಕೆ ಆಧಾರಿತ ಸಮೀಕ್ಷೆ(ಡಿಮ್ಯಾಂಡ್‌ ಸರ್ವೇ) ಕೈಗೊಳ್ಳುವಂತೆ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳವಾರ ಅಪರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸಿ ತಾಣಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಡಿಮ್ಯಾಂಡ್‌ ಸರ್ವೇ ಅತೀ ಮುಖ್ಯ. ಅದರ ಆಧಾರದಲ್ಲಿ ಹಂತ ಹಂತವಾಗಿ ಸೌಲಭ್ಯ ಒದಗಿಸಲಾಗುವುದು. ಪ್ರವಾಸಿ ತಾಣಗಳಲ್ಲಿ ಹೋಟೆಲ್‌ ಪ್ರಾರಂಭಿಸುವುದಕ್ಕೂ ಡಿಮ್ಯಾಂಡ್‌ ಸರ್ವೇ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಹರಿಹರೇಶ್ವರ, ಕೊಂಡಜ್ಜಿ ಮತ್ತು ಕೆರೆ, ಶಾಂತಿಸಾಗರ, ಸಂತೇಬೆನ್ನೂರಿನ ಪುಷ್ಕರಣಿ, ತೀರ್ಥ ರಾಮೇಶ್ವರ ದೇವಾಲಯಗಳನ್ನು ರಾಜ್ಯ ಮಟ್ಟದ 5 ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ. ಇಲಾಖೆಯಿಂದ 20 ತಾಣಗಳನ್ನು ಗುರುತಿಸಿ, ಅಭಿವೃದ್ದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2019ರಲ್ಲಿ ಜನವರಿಯಿಂದ ಈವರೆಗೆ 48 ವಿದೇಶಿಯರು ಒಳಗೊಂಡಂತೆ 8,65,276 ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ ತಿಳಿಸಿದರು.

ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಶಾಂತಿಸಾಗರ ( ಸೂಳೆಕೆರೆ ) ಯನ್ನು ವಿಶ್ವ ದರ್ಜೆ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶಿ ದರ್ಶನ ಯೋಜನೆ.. ಮಾರ್ಗಸೂಚಿಗಳನ್ವಯ 18.60 ಕೋಟಿ ವೆಚ್ಚದ ವಿಸ್ತೃತ ವರದಿ ಸಿದ್ಧಪಡಿಸಿ, ರಾಜ್ಯ ಸರ್ಕಾರದ ಮೂಲಕ ಕಳೆದ ಫೆ. 12 ರಂದು ಕೇಂದ್ರಕ್ಕೆ ಕಳಿಸಿಕೊಡಲಾಗಿದೆ. ಈ ಸಂಬಂಧ ಎರಡು ಬಾರಿ ಸಭೆ ಸಹ ನಡೆದಿದೆ. ಆದಷ್ಟು ಬೇಗ ಅನುಮೋದನೆ, ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ ಎಂದು ತಿಪ್ಪೇಸ್ವಾಮಿ ತಿಳಿಸಿದರು.

2013-14ರಿಂದ ಈವರೆಗೆ 576 ಜನರಿಗೆ ಪ್ರವಾಸಿ ಟ್ಯಾಕ್ಸಿ ನೀಡುವ ಗುರಿಯಲ್ಲಿ 492 ಜನರಿಗೆ ನೀಡಲಾಗಿದೆ. ಕೆಲವಾರು ಕಾರಣದಿಂದ 84 ಜನರಿಗೆ ವಿತರಣೆ ಮಾಡಿಲ್ಲ ಎಂದು ತಿಪ್ಪೇಸ್ವಾಮಿ ತಿಳಿಸಿದರು.ಯಾವುದೇ ಕಾರಣಕ್ಕೂ ಎಸ್ಸಿ, ಎಸ್ಟಿ ಫಲಾನುಭವಿಗಳಿಗೆ ನೀಡಬೇಕಾದ ಸೌಲಭ್ಯ ನಿಲ್ಲಿಸುವಂತೆಯೇ ಇಲ್ಲ. ನಿಲ್ಲಿಸುವುದು ಅಪರಾಧ. ಹಾಗಾಗಿ ಕೂಡಲೇ ಬಾಕಿ ಇರುವರಿಗೆ ಟ್ಯಾಕ್ಸಿ ವಿತರಣೆ ಮಾಡುವಂತೆ ಸಚಿವ ಸಿ.ಟಿ. ರವಿ ಸೂಚಿಸಿದರು.

ಕರ್ನಾಟಕ ದರ್ಶನ ಯೋಜನೆಡಯಡಿ 2013-14 ರಿಂದ ಈವರೆಗೆ 6,950 ವಿದ್ಯಾರ್ಥಿಗಳಿಗೆ ಪ್ರವಾಸದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ ತಿಳಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಕರ್ನಾಟಕ ದರ್ಶನ ಯೋಜನೆಯ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಾಂಧೀಜಿಯವರು ಭೇಟಿ ನೀಡಿದ್ದ, ತಂಗಿದ್ದ ಇತರೆ ಪ್ರದೇಶಗಳಿಗೆ ಕಡ್ಡಾಯವಾಗಿ ಕರೆದೊಯ್ಯಬೇಕು ಎಂದು ಸಚಿವರು ಸೂಚಿಸಿದರು.

ಶಾಸಕರಾದ ಪ್ರೊ| ಎನ್‌. ಲಿಂಗಣ್ಣ, ಮೋಹನ್‌ ಕೊಂಡಜ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಜಾನಕಿ, ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪದ್ಮಾ ಬಸವಂತಪ್ಪ, ನಗರಪಾಲಿಕೆ ಆಯುಕ್ತ ಮಂಜುನಾಥ್‌ ಆರ್‌. ಬಳ್ಳಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.