ರಾಜಕಾರಣಿಗೆ ಸರ್ವಮಂಗಳಮ್ಮನಂಥ ಸತಿ ಸಿಗಲಿ: ಶಿಮುಶ


Team Udayavani, Nov 23, 2019, 5:08 PM IST

23-November-30

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜೆ.ಎಚ್‌.ಪಟೇಲ್‌ ಮತ್ತು ಅವರ ಪತ್ನಿ ಸರ್ವಮಂಗಳಮ್ಮನವರ ಜೀವ ಬೇರೆಯಾದರೂ ಭಾವಗಳು ಮಾತ್ರ ಒಂದೇ ಎನ್ನುವಂತೆ ಬದುಕಿದ್ದರು ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾ ಶರಣರು ಬಣ್ಣಿಸಿದ್ದಾರೆ.

ಗುರುವಾರ, ಚನ್ನಗಿರಿ ತಾಲೂಕಿನ ಕಾರಿಗನೂರಿನ ಪಟೇಲ್‌ ಹಾಲಪ್ಪ ಕಲ್ಯಾಣ ಮಂಟಪದ ಆವರಣದಲ್ಲಿ ಹಮ್ಮಿಕೊಂಡಿದ್ದ ಶ್ರೀಮತಿ ಸರ್ವಮಂಗಳಮ್ಮ ಜೆ.ಎಚ್‌.ಪಟೇಲರ ಶಿವಗಣಾರಾಧನೆ ಮತ್ತು ಸರ್ವ ಶರಣರ ಸಮ್ಮೇಳನದ ಸಾನ್ನಿಧ್ಯ ವಹಿಸಿ, ಅವರು ಮಾತನಾಡಿದರು.

ಜೆ.ಎಚ್‌.ಪಟೇಲ್‌ ಮತ್ತು ಅವರ ಕುಟುಂಬವನ್ನು ನಾವು ಹತ್ತಿರದಿಂದ ನೋಡಿದ್ದೇವೆ. ಪಟೇಲರ ಬಗ್ಗೆ ಅಪಾರ ಕಾಳಜಿ ವಹಿಸುತಿದ್ದ ಸರ್ವಮಂಗಳಮ್ಮ ತಮ್ಮ ಮನೆತನದ ಸಂಸ್ಕಾರ, ಸಂಸ್ಕೃತಿ ಕಾಪಾಡಿದವರು ಎಂದರು.

ಚುನಾವಣೆಯಲ್ಲಿ ಸೋತು ಹತಾಶರಾಗಿದ್ದ ಜೆ.ಎಚ್‌.ಪಟೇಲರನ್ನು ಅವರ ಪತ್ನಿ ಸರ್ವಮಂಗಳಮ್ಮ ಮುರುಘಾ ಮಠಕ್ಕೆ ಕರೆತಂದಿದ್ದರು. ಆ ಸಂದರ್ಭದಲ್ಲಿ ನಾವು ಮುಂದಿನ ಚುನಾವಣೆಯಲ್ಲಿ ನೀವು ಗೆಲ್ಲುತ್ತೀರಿ ಎಂದೇಳಿದ್ದೆವು. ನಾವು ನುಡಿದಂತೆ ಪಟೇಲರು ಗೆದ್ದು ಈ ನಾಡಿನ ಮುಖ್ಯಮಂತ್ರಿಯಾದರು ಎಂದು ಸ್ಮರಿಸಿದರು.

ಯಾವುದೇ ರಾಜಕಾರಣಿಗಳಿಗೆ ಸರ್ವಮಂಗಳಮ್ಮ ಅವರಂಥಹ ಧರ್ಮಪತ್ನಿ ಸಿಗಬೇಕು. ಅಂತಹ ಉದಾತ್ತ ಗುಣಗಳನ್ನು ಹೊಂದಿದ್ದ ಅವರನ್ನು ಸರ್ವಾರ್ಥ ಸಾಧಕಿ ಎಂದರೆ ತಪ್ಪಾಗಲಾರದು. ಪಟೇಲರು ನಿಧನರಾದಾಗ ತಾಳಿ, ಬಳೆ, ಕುಂಕಮ ತೆಗೆಯದೇ ಪಟೇಲರ ನೆನಪು ತಮ್ಮ ಜೀವಿತದ ಕಡೆ ಘಳಿಗೆಯವರಿಗೆ ಇರುವಂತೆ ನೋಡಿಕೊಂಡ ಶ್ರೇಷ್ಠ ಮಹಿಳೆ ಅವರಾಗಿದ್ದರು ಎಂದು ವರ್ಣಿಸಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮಾತನಾಡಿ, ಜೆ.ಎಚ್‌.ಪಟೇಲರು ರಾಜಕೀಯಕ್ಕೆ ಬರಲು ಸರ್ವಮಂಗಳಮ್ಮನವರು ಸ್ಫೂ ರ್ತಿಯಾಗಿದ್ದರು. ಹಾಗಾಗಿಯೇ ಅವರು ರಾಜಕೀಯದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯವಾಯಿತು ಎಂದರು.

ಹರಿಹರ ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌ ಮಾತನಾಡಿ, ಪಟೇಲರ ಪುತ್ರ ಮಹಿಮಾ ಪಟೇಲ್‌ ಮತ್ತು ನಾನು ಬೇರೆ ಬೇರೆ ಎನ್ನುವುದಕ್ಕಿಂತ ಇಬ್ಬರೂ ಒಂದಾಗಿ ಹೋದರೆ ಹಿರಿಯರ ಆತ್ಮಕ್ಕೆ ಶಾಂತಿ ದೊರೆಯಲಿದೆ. ಮಹಿಮಾ ಪಟೇಲ್‌ ಮತ್ತೆ ಜಿಲ್ಲೆಯ ರಾಜಕಾರಣದಲ್ಲಿ ಮುಂಚೂಣಿಗೆ ಬರಬೇಕಾದ ಅಗತ್ಯವಿದೆ. ನಾವಿಬ್ಬರು ಜೋಡೆತ್ತಿನ ರೀತಿ ರಾಜಕಾರಣದಲ್ಲಿ ಮುಂದುವರಿಯಬೇಕಿದೆ ಎಂದು ಆಶಿಸಿದರು.

ಚನ್ನಗಿರಿ ಕ್ಯಾಥೋಲಿಕ್‌ ಚರ್ಚ್‌ನ ಫಾದರ್‌ ಸಂತೋಷ್‌, ಮಂಗಳೂರಿನ ಮೌಲಾನ ಉಮ್ಮರುಲ್‌ ಫಾರೂಕ್‌ ಸಖಾಫಿ, ಹೊಸದುರ್ಗ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ, ಚಿತ್ರದುರ್ಗ ಭೋವಿ ಮಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಯರಗುಂಟೆಯ ಶ್ರೀ ಪರಮೇಶ್ವರ ಸ್ವಾಮೀಜಿ, ಹಗರಿಬೊಮ್ಮನಹಳ್ಳಿ ಮಠದ ಶ್ರೀ ಮಹಾಂತ ಸ್ವಾಮೀಜಿ, ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಬೆಂಗಳೂರು ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಚಂದ್ರಕಾಂತ್‌ ಬೆಲ್ಲದ್‌, ಯಜಮಾನ್‌ ಮೋತಿ ವೀರಣ್ಣ, ಡಿ.ಜಿ.ಶಾಂತನಗೌಡ, ಕೆ.ಶಿವಮೂರ್ತಿ ನಾಯ್ಕ, ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಶಂಕರ್‌ ಬಿದರಿ, ಡಾ| ವೈ.ರಾಮಪ್ಪ, ಎನ್‌ .ಜಿ.ಪುಟ್ಟಸ್ವಾಮಿ, ಜಿಪಂ ಸದಸ್ಯರಾದ ಕೆ.ಎಸ್‌. ಬಸವಂತಪ್ಪ , ಎನ್‌.ಲೋಕೇಶ್ವರಪ್ಪ, ಇತರರು ಭಾಗವಹಿಸಿದ್ದರು. ಮಾಜಿ ಶಾಸಕ ಮಹಿಮಾ ಪಟೇಲ್‌ ಸ್ವಾಗತಿಸಿದರು. ತೇಜಸ್ವಿ ವಿ. ಪಟೇಲ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.