ಜೆಸ್ಕಾಂಗೆ 12 ಕೋಟಿ ನಷ್ಟ

ಕುಡಿಯುವ ನೀರು ಪೂರೈಸಲು ಐಪಿಎಸ್‌ಟಿ ಮಾರ್ಗ ಮೂಲಕ ತಾತ್ಕಾಲಿಕ ವಿದ್ಯುತ್‌ ಸಂಪರ್ಕ

Team Udayavani, Aug 17, 2019, 10:48 AM IST

17-Agust-9

ದೇವದುರ್ಗ: ಹೂವಿನಹೆಡಗಿ ಗ್ರಾಮದ ಗದ್ದೆಯಲ್ಲಿ ಬಾಗಿರುವ ವಿದ್ಯುತ್‌ ಕಂಬ.

ದೇವದುರ್ಗ: ಸಾಕಷ್ಟು ಪ್ರಮಾಣದಲ್ಲಿ ಹಾನಿ ಮಾಡಿರುವ ಕೃಷ್ಣಾ ನದಿ ಪ್ರವಾಹ ಈಗ ಜೆಸ್ಕಾಂಗೂ ಶಾಕ್‌ ನೀಡಿದೆ.

ನಾರಾಯಣಪುರ ಬಸವಸಾಗರ ಜಲಾಶಯ ಭರ್ತಿಯಾಗಿ 6 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತೀರದ 22 ಗ್ರಾಮಗಳಲ್ಲಿ 480 ವಿದ್ಯುತ್‌ ಪರಿವರ್ತಕಗಳು ಮುಳುಗಡೆಯಾಗಿದ್ದು, 2 ಸಾವಿರ ಕಂಬಗಳು ಬಿದ್ದಿವೆ. 800 ಕಂಬಗಳು ನೀರಿನಲ್ಲಿ ಮುರಿದು ಹೋಗಿವೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಪ್ರವಾಹದಿಂದಾಗಿ ಜೆಸ್ಕಾಗೆ 12 ಕೋಟಿ ರೂ. ನಷ್ಟ ಉಂಟಾಗಿದೆ. ನೆರೆ ಹಾವಳಿಯಿಂದ ಹಾನಿಯಾದ ವರದಿ ಈಗಾಗಲೇ ಜೆಸ್ಕಾ ಮೇಲಾಧಿಕಾರಿಗಳಿಗೆ ನೀಡಲಾಗಿದೆ. ಪರಿಹಾರ ಕೇಂದ್ರಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ಹಿನ್ನೆಲೆಯಲ್ಲಿ 16 ಕಂಬಗಳು ಮತ್ತು 2 ವಿದ್ಯುತ್‌ ಪರಿವರ್ತಕಗಳನ್ನು ಅಳವಡಿಸಲಾಗಿದೆ. ಅಂಜಳ, ಮೇದಿನಾಪುರಕ್ಕೆ ಟಿಸಿ ಅಳವಡಿಸಿ ವಿದ್ಯುತ್‌ ಅನುಕೂಲ ಮಾಡಿಕೊಡಲಾಗಿದೆ.

ನಾರಾಯಣಪುರ ಬಸವಸಾಗರ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಬಿಟ್ಟಿದ್ದರಿಂದ ಕೃಷ್ಣಾ ನದಿ ಉಕ್ಕಿ ಹರಿದ ಪರಿಣಾಮ ನದಿ ತೀರದಲ್ಲಿರುವ 450 ಟಿಸಿಗಳು ಜಲಾವೃತವಾಗಿವೆ. 2 ಸಾವಿರ ಕಂಬಗಳು ನೀರಿನಲ್ಲಿ ಮುಳುಗಡೆಯಾಗಿದ್ದು, 800 ಕಂಬಗಳು ನೀರಿನ ಒಳಗೆ ಮುರಿದಿವೆ ಎಂದು ಜೆಸ್ಕಾಂ ಅಧಿಕಾರಿಗಳು ಅಂದಾಜಿಸಿದ್ದಾರೆ. ಒಟ್ಟಾರೆ ಜೆಸ್ಕಾಂಗೆ 12 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ.

ಪ್ರವಾಹದಿಂದ ಮುಳುಗಡೆಯಾದ ಗ್ರಾಮಗಳಿಗೆ ಇದೀಗ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ನೀರಿನ ಪ್ರಮಾಣ ಕಡಿಮೆಯಾದ ನಂತರ ಸಮರ್ಪಕವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 100 ವಿದ್ಯುತ್‌ ಪರಿವರ್ತಕಗಳು, 250 ಕಂಬಗಳು ತುರ್ತಾಗಿ ಬೇಕು ಎಂದು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಬೇಡಿಕೆ ತಕ್ಕಂತೆ ಇದೀಗ ಪೂರೈಸಲಾಗಿದೆ. ಕಚೇರಿ ಆವರಣದಲ್ಲಿ ಸಂಗ್ರಹಿಸಲಾಗಿದ್ದು, ನೀರಿನ ಪ್ರಮಾಣ ತಗ್ಗಿದಾಗ ಮುಳುಗಡೆಯಾದ ಟಿಸಿ ಮತ್ತು ಕಂಬಗಳನ್ನು ತೆಗೆಯಲು ತಡವಾಗಬಹುದು. ಆದರೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಕಲ್ಪಿಸುವ ಮುಂದಾಲೋಚನೆ ಹಿನ್ನೆಲೆಯಲ್ಲಿ ಅಗತ್ಯ ಟಿಸಿ ಕಂಬಗಳನ್ನು ತರಿಸಲಾಗಿದೆ.

ಪ್ರವಾಹದಿಂದ 22 ಗ್ರಾಮಗಳಲ್ಲಿ ವಿದ್ಯುತ್‌ ಪರಿವರ್ತಕಗಳು ಮತ್ತು ಕಂಬಗಳು ನೀರಿನಲ್ಲಿ ಮುಳುಗಡೆಯಾದ್ದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮತ್ತು ರೈತರ ಪಂಪ್‌ಸೆಟ್‌ಗಳಿಗೆ ಐಪಿಎಸ್‌ಟಿ ಮಾರ್ಗದ ಮೂಲಕ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿ 24 ತಾಸು ವಿದ್ಯುತ್‌ ಸೌಲಭ್ಯವಿರುತ್ತದೆ. ಹೀಗಾಗಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜೆಸ್ಕಾಂ ತಾತ್ಕಾಲಿಕವಾಗಿ ವಿದ್ಯುತ್‌ ಪೂರೈಸಿದೆ ಎಂದು ಜೆಸ್ಕಾಂ ಮೂಲಗಳು ತಿಳಿಸಿವೆ.

ಪ್ರವಾಹದಿಂದ ತತ್ತರಿಸಿದ 22 ಗ್ರಾಮಗಳ ನೆರೆ ಸಂತ್ರಸ್ತರಿಗೆ ಶಾಶ್ವತವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಜೆಸ್ಕಾಂ

ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕಾಗಿದೆ. ನದಿ ನೀರಿನಲ್ಲಿ ಮುಳುಗಡೆಯಾದ ಟಿಸಿಗಳು ಮತ್ತು ಕಂಬಗಳನ್ನು ಆದಷ್ಟು ಬೇಗನೆ ದುರಸ್ತಿ ಮಾಡಿಸಲು ಜೆಸ್ಕಾಂ ಅಧಿಕಾರಿಗಳು ಮುಂದಾಗಬೇಕು ಎಂದು ನೆರೆ ಸಂತ್ರಸ್ತರಾದ ಹನುಮಗೌಡ, ಶಿವನಗೌಡ ಆಗ್ರಹಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.