ರೋಗ ತಡೆಗೆ ಆರೋಗ್ಯ ಇಲಾಖೆ ದಾಪುಗಾಲು

ಡಿಪಿಟಿ-ಟಿಡಿ ಲಸಿಕೆ ಅಭಿಯಾನ ಅಡ್ಡ ಪರಿಣಾಮ ಇಲ್ಲ ಯೋಜನೆ ಯಶಸ್ಸಿಗೆ ಸಹಕರಿಸಲು ಮನವಿ

Team Udayavani, Dec 14, 2019, 6:01 PM IST

14-December-32

ದೇವದುರ್ಗ: ಗಂಟಲುಮಾರಿ, ನಾಯಿಕೆಮ್ಮು, ಧನುರ್ವಾಯ ರೋಗ ತಡೆಗಟ್ಟಲು ಆರೋಗ್ಯ ಇಲಾಖೆ ಡಿಪಿಟಿ, ಟಿಡಿ, ಚುಚ್ಚುಮದ್ದು ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದೆ. ಸರಕಾರಿ-ಖಾಸಗಿ ಶಾಲೆಯಲ್ಲಿರುವ 1ನೇ ತರಗತಿಯಿಂದ 10ನೇ ತರಗತಿ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಈ ಕುರಿತು 16 ಪ್ರಕರಣಗಳು ಪತ್ತೆಯಾಗಿದ್ದು, ರೋಗ ತಡೆಗಟ್ಟುವ ಬಗ್ಗೆ ಆರೋಗ್ಯ ಇಲಾಖೆ ದಾಪುಗಾಲು ಇಟ್ಟಿದೆ.

ಮಕ್ಕಳ ಗುರಿ: ತಾಲೂಕಿನಾದ್ಯಂತ 67,197 ಮಕ್ಕಳಿದ್ದು, ಅದರಲ್ಲಿ 1ನೇ ತರಗತಿ 11,763 ಮಕ್ಕಳಿಗೆ ಡಿಪಿಟಿ ಲಸಿಕೆ. 2ನೇ ತರಗತಿಯಿಂದ 10ನೇ ತರಗತಿ 55,434 ಮಕ್ಕಳಿಗೆ ಟಿಡಿ ಚುಚ್ಚುಮುದ್ದು ಹಾಕುವ ಗುರಿ ಹೊಂದಲಾಗಿದೆ. ಡಿ.11ರಿಂದ ಆರಂಭವಾದ ಕಾರ್ಯಕ್ರಮ 31ರ ವರೆಗೆ ನಡೆಯಲಿದ್ದು, 5 ವರ್ಷದಿಂದ 16 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ.

ಲಸಿಕೆ ತಂಡಗಳು: ತಾಲೂಕಿನಾದ್ಯಂತ ಸರಕಾರಿ ಮತ್ತು ಖಾಸಗಿ ಶಾಲೆಗಳು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ ಲಸಿಕೆ ಹಾಕಲಾಗುತ್ತಿದೆ. ಕಾರ್ಯಕ್ರಮ ಯಶಸ್ವಿಯಾಗಲು ಆರೋಗ್ಯ ಇಲಾಖೆಯಿಂದ 60 ರಿಂದ 65 ತಂಡ ರಚಿಸಲಾಗಿದೆ. ಒಂದು ತಂಡದಲ್ಲಿ ಒಬ್ಬ ಕಿರಿಯ ಆರೋಗ್ಯ ಸಹಾಯಕಿ, ಸ್ಟಾಫ್‌ ನರ್ಸ್‌ ಇದ್ದಾರೆ. ಒಂದೊಂದು ಶಾಲೆಗಳಿಗೆ ಒಂದು ತಂಡ ಬೀಡು ಬಿಟ್ಟಿದೆ. ಆರೋಗ್ಯ ಇಲಾಖೆ ಹೊಂದಿದ ಗುರಿ ತಲುಪಲು ಅಧಿಕಾರಿಗಳು ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ತುರ್ತು ಚಿಕಿತ್ಸೆ: ಸರಕಾರಿ-ಖಾಸಗಿ ಸೇರಿ 1ರಿಂದ 10ನೇ ತರಗತಿ 364 ಶಾಲೆಯಲ್ಲಿರುವ ಮಕ್ಕಳಿಗೆ ಡಿಪಿಟಿ, ಟಿಡಿ ಚುಚ್ಚುಮದ್ದು ಲಸಿಕೆ ಹಾಕುವ ಸಂದರ್ಭದಲ್ಲಿ ಆರೋಗ್ಯದಲ್ಲಿ ಅಡ್ಡ ಪರಿಣಾಮ ಉಂಟಾದಲ್ಲಿ ಸ್ಥಳದಲ್ಲಿ ತುರ್ತಾಗಾಗಿ ಪ್ರಾಥಮಿಕ ಹಂತದ ಚಿಕಿತ್ಸೆ ನೀಡಲು ಕಿಟ್‌ ಸೌಲಭ್ಯ ಕಲ್ಪಿಸಲಾಗಿದೆ. ಕಳೆದ ಮೂರು ದಿನಗಳಿಂದ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದಕ್ಕಾಗಿ ಪ್ರತ್ಯೇಕ ನುರಿತ ವೈದ್ಯರ ತಂಡ ರಚಿಸಲಾಗಿದೆ. ತಂಡಕ್ಕೆ ತರಬೇತಿ: ಕಾರ್ಯಕ್ರಮ ಆರಂಭವಾಗುವ ಮೊದಲೇ ಆರೋಗ್ಯ ಇಲಾಖೆ ಸಿಬ್ಬಂದಿಗೆ, ಶಾಲಾ ಶಿಕ್ಷಕರಿಗೆ ಒಂದು ದಿನದ ತರಬೇತಿ ನೀಡಲಾಗಿದೆ. ನುರಿತ ವೈದ್ಯರಿಂದ ಈಗಾಗಲೇ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಲಸಿಕೆ ಹಾಕುವ ಮುನ್ನವೇ ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳ ಪಾಲಕರ ಸಭೆ ಕರೆದು ಜಾಗೃತಿ ಮೂಡಿಸಲಾಗಿದೆ.

ಕಡ್ಡಾಯವಾಗಿ ಪ್ರತಿಯೊಂದು ಮಕ್ಕಳಿಗೆ ಡಿಪಿಟಿ, ಟಿಡಿ ಲಸಿಕೆ ಹಾಕಬೇಕು. ರೋಗ ಬರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪಾಲಕರು ಸಹಕಾರ ನೀಡಬೇಕು ಎಂದು ಜಾಗೃತಿ ಮೂಡಿಸಲಾಗಿದೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.