ನೆರೆಯೊಂದಿಗೆ ಮಳೆಹಾನಿ ಪ್ರಸ್ತಾವನೆ ಸಲ್ಲಿಸಿ

30.41 ಕೋಟಿ ಮಳೆಹಾನಿ | ಮೂಲ ಸೌಕರ್ಯ ಒದಗಿಸಲು ಆದ್ಯತೆ | 65 ಶಾಲೆಗಳ 167 ಕೊಠಡಿಗಳಿಗೆ ಹಾನಿ

Team Udayavani, Oct 17, 2019, 2:50 PM IST

17-October-15

ಧಾರವಾಡ: ನೆರೆ ಹಾವಳಿಯ ಹಾನಿ ವರದಿ ಜೊತೆಗೆ ಜಿಲ್ಲೆಯಲ್ಲಿ ಮತ್ತೆ ಕಳೆದ ಒಂದು ವಾರದಲ್ಲಿ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿ, ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಜಿಪಂ ಅಧ್ಯಕ್ಷೆ, ಉಪಾಧ್ಯಕ್ಷ ಮತ್ತು ಸಿಇಒ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಈ ಹಿಂದೆ ಆಗಿರುವ ಮಳೆಹಾನಿಯ ಜೊತೆಗೆ ಈಗ ಕಳೆದ ಐದು ದಿನಗಳಿಂದ ಆಗುತ್ತಿರುವ ಮಳೆಯಿಂದ ರಸ್ತೆ, ಸೇತುವೆ, ಬೆಳೆ ಸೇರಿದಂತೆ ಆಗಿರುವ ಹಾನಿಯ ಬಗ್ಗೆಯೂ ಪರಿಶೀಲನೆ ಕೈಗೊಂಡು ವರದಿ ಸಿದ್ಧಪಡಿಸುವಂತೆ ಇಲಾಖಾವಾರು  ಅಧಿಕಾರಿಗಳಿಗೆ ಜಿಪಂ ಸಿಇಒ ಡಾ| ಸತೀಶ ಅವರ ಮೂಲಕ ಸೂಚನೆ ಕೊಡಲಾಯಿತು.

ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟು ಹೋಗಿದ್ದು, ಕೆಲವೊಂದಿಷ್ಟು ಕಡೆ ಸೇತುವೆಗಳು ಕುಸಿದು ಸಂಚಾರಗಳೇ ಬಂದ್‌ ಆಗಿವೆ. ನವಲಗುಂದ ತಾಲೂಕಿನಲ್ಲಿ ಸಾರಿಗೆ ಸಂಚಾರಕ್ಕೆ ತುಂಬಾ ಅಡಚಣೆಗಳು ಆಗಿದ್ದು, ಯಮನೂರ ಸೇರಿದಂತೆ ಕೆಲ ಗ್ರಾಮಗಳಿಗೆ ಸಾರಿಗೆ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ಮೂಲ ಸೌಕರ್ಯಗಳ ಮರು ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

30 ಕೋಟಿ ರೂ. ಹಾನಿ: ಅತಿಯಾದ ಮಳೆಯಿಂದಾಗಿ ಜಿಪಂ ವ್ಯಾಪ್ತಿಯ ರಸ್ತೆ, ಸಣ್ಣ ಸೇತುವೆ ಹಾಗೂ ಕೆರೆಗಳು ಸೇರಿದಂತೆ ಒಟ್ಟಾರೆ 30.41 ಕೋಟಿ ಹಾನಿಯಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಆದರೆ, ಹಣ ಇನ್ನೂ ಬಿಡುಗಡೆ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿ ಮನೋಲಕುಮಾರ ಸಭೆಗೆ ಮಾಹಿತಿ ನೀಡಿದರು.

ಅತಿವೃಷ್ಟಿಯಿಂದಾಗಿ  ಹಾನಿಯಾಗಿರುವ ರಸ್ತೆ-ಸೇತುವೆ ಸೇರಿದಂತೆ ಇತರೆ ಪ್ರಕೃತಿ ವಿಕೋಪಕ್ಕಾಗಿ 50 ಕೋಟಿ ಪರಿಹಾರ ಹಣ ಬಿಡುಗಡೆ ಆಗಿದೆ ಎಂದು ಸ್ವತಃ ಜಿಲ್ಲಾಧಿಕಾರಿಗಳೇ ಮಾಧ್ಯಮ ಹೇಳಿಕೆ ನೀಡಿದ್ದಾರೆ. ನೀವು ಹಣ ಬಿಡುಗಡೆ ಆಗಿಲ್ಲ ಎನ್ನುತ್ತೀರಿ ಎಂದು ಉಪಾಧ್ಯಕ್ಷ ಶಿವಾನಂದ ಕರಿಗಾರ ಪ್ರಶ್ನಿಸಿದರು.

ಮೊದಲ ಹಂತದಲ್ಲಿ ನಡೆದ ಸಮೀಕ್ಷೆ ಜೊತೆಗೆ ಮತ್ತೂಮ್ಮೆ ಸಮೀಕ್ಷೆ ಮಾಡಿ ಆಗಿರುವ ಹಾನಿಯ ಬಗ್ಗೆ ಪಕ್ಕಾ ವರದಿ ನೀಡಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ಮೊದಲ ಹಂತದಲ್ಲಿ ಬಿಡುಗಡೆ ಅನುದಾನದಲ್ಲಿ ಶಾಲೆ ಹಾಗೂ ಅಂಗನವಾಡಿಗಳಿಗೆ ನೀಡಲಾಗಿದೆ. ನಂತರದಲ್ಲಿ ತಮಗೆ ಅನುದಾನ ಬಿಡುಗಡೆ ಆಗಲಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

167 ಕೊಠಡಿ ಹಾನಿ: ಮಳೆಗೆ 65 ಶಾಲೆಗಳ 167 ಕೊಠಡಿಗಳು ಹಾನಿಯಾಗಿದ್ದು, 17.53 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಬೇಕಿದೆ. ಈ ಕುರಿತು ಕ್ರಿಯಾಯೋಜನೆ ಸಹ ಸಲ್ಲಿಸಲಾಗಿದೆ. ಅಲ್ಲದೇ, ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಪೂರಕವಾಗಿ ಅಕ್ಟೋಬರ್‌ ತಿಂಗಳಲ್ಲಿಯ ಅ.5ರಿಂದ 20ರ ವರೆಗೆ ಪ್ರತಿ ಶಾಲೆಯಲ್ಲೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಷಯಗಳ ಪುನರಾವರ್ತನೆ ಮಾಡಲಾಗುತ್ತಿದೆ.

ಪ್ರತಿದಿನ ಶಿಕ್ಷಕರೊಬ್ಬರು ತರಗತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಮಾಹಿತಿ ನೀಡಿದರು.

ಪ್ರತಿಭಾ ಕಾರಂಜಿ ಸಂದರ್ಭದಲ್ಲಿ ಶಾಲಾ ಮಕ್ಕಳನ್ನು ಬಸ್‌ ಅಥವಾ ಇನ್ನಾವುದೇ ಪ್ರಯಾಣಿಕರ ವಾಹನದಲ್ಲಿ ಕರೆದೊಯ್ಯುವ ಬದಲು ಟ್ರ್ಯಾಕ್ಟರ್‌ನಲ್ಲಿ ಕರೆದೊಯ್ಯಲಾಗಿದೆ ಎಂದು ಡಿಡಿಪಿಐ ಅವರನ್ನು ಜಿಪಂ ಅಧ್ಯಕ್ಷರು ಪ್ರಶ್ನಿಸಿದರು.

ಒಂದು ವೇಳೆ ಈ ರೀತಿ ಘಟನೆ ನಡೆದಿದ್ದರೆ ತಕ್ಷಣ ಅಂತಹ ಶಿಕ್ಷರರ ವಿರುದ್ಧ ಕ್ರಮ ಕೈಗೊಳ್ಳಲು ಡಿಡಿಪಿಐ ಅವರಿಗೆ ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಸೂಚಿಸಿದರು.

ಕೃಷಿ ಹೊಂಡಕ್ಕಿಲ್ಲ 12 ಕೋಟಿ ರೂ. ಬಾಕಿ: ಈ ಬಾರಿ ಎಷ್ಟು ಜನ ರೈತರಿಗೆ ಕೃಷಿ ಹೊಂಡಗಳನ್ನು ನೀಡಿದ್ದೀರಿ ಎಂದು ಜಿಪಂ ಉಪಾಧ್ಯಕ್ಷರು ಕೃಷಿ ಇಲಾಖೆ ಅಧಿಕಾರಿಯನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಇಲಾಖೆಯ ಜಂಟಿ ನಿರ್ದೇಶಕ ಎಸ್‌.ಎಸ್‌. ಅಬೀದ್‌ ಅವರು, ಕಳೆದ ಬಾರಿ ಗರಿಷ್ಠ ಮಟ್ಟದಲ್ಲಿ ರೈತರು ಕೃಷಿ ಹೊಂಡಗಳನ್ನು ಸ್ವತಃ ರಚಿಸಿಕೊಂಡಿದ್ದಾರೆ. ಆದ್ದರಿಂದ ಆ ರೈತರಿಗೆ ಇನ್ನೂ ಹಣ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ 12 ಕೋಟಿ ಬಾಕಿ ಹಣವನ್ನು ಕೃಷಿ ಹೊಂಡ ಮಾಡಿಕೊಂಡಿರುವ ರೈತರಿಗೆ ಪಾವತಿಸಬೇಕಿರುವ ಕಾರಣ ಈ ಬಾರಿ ಕೃಷಿ ಹೊಂಡದ ಗುರಿಯೇ ಇಟ್ಟುಕೊಂಡಿಲ್ಲ ಎಂದು ತಿಳಿಸಿದರು.

ಜಿಪಂ ಉಪಕಾರ್ಯದರ್ಶಿ ಎಸ್‌.ಜಿ. ಕೊರವರ ಮಾತನಾಡಿ, ಗ್ರಾಮೀಣ ಉದ್ಯೋಗ ಯೋಜನೆಯಡಿ ಗ್ರಾಮೀಣ ಬಡತನ ನಿವಾರಣೆ ಕಾರ್ಯಕ್ರಮದಲ್ಲಿ ಸರ್ಕಾರದಿಂದ ವಾರ್ಷಿಕ ಗುರಿ ನಿಗದಿಪಡಿಸಿದ್ದು, ನರೇಗಾ ಕಾರ್ಯಕ್ರಮದಡಿ ಒಟ್ಟು 16,581 ಕಾಮಗಾರಿಗಳ ಗುರಿ ಹೊಂದಲಾಗಿದೆ.

ಇಲ್ಲಿಯವರೆಗೆ 5,412 ಕಾಮಗಾರಿಗಳನ್ನು ಪೂರ್ಣಗೊಳಿಸಿ ಸೆಪ್ಟೆಂಬರ್‌ ಅಂತ್ಯದವರೆಗೆ ಪ್ರಗತಿ ಸಾ ಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಡಾ| ರಾಮಚಂದ್ರ ಮಡಿವಾಳರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಯಶವಂತ್‌ ಮದೀನಕರ್‌ ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸೆಪ್ಟೆಂಬರ್‌ ಅಂತ್ಯದವರೆಗೆ ಆಗಿರುವ ಇಲಾಖಾವಾರು ಪ್ರಗತಿ ವಿವರಿಸಿದರು.

ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನಮ್ಮ ಪಾಟೀಲ, ಯೋಜನಾ ನಿರ್ದೇಶಕ ದೀಪಕ್‌ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.