ಮೆಕ್ಕೆಜೋಳ ಬೆಳೆಗಾರರಿಗೆ 5000ರೂ. ನೆರವು

Team Udayavani, Jun 12, 2020, 9:57 AM IST

ಮೆಕ್ಕೆಜೋಳ ಬೆಳೆಗಾರರಿಗೆ 5000ರೂ. ನೆರವು

ಧಾರವಾಡ: ಕೋವಿಡ್‌-19ಲಾಕ್‌ಡೌನ್‌ ಸಮಸ್ಯೆಯಿಂದ ಸಂಕಷ್ಟಕ್ಕೊಳಗಾಗಿರುವ ಮೆಕ್ಕೆಜೋಳ ಬೆಳೆದ ರೈತರಿಗೆ ನೇರ ನಗದು ವರ್ಗಾವಣೆ ಮೂಲಕ 5,000 ರೂ. ಪಾವತಿಸಲಾಗುವುದು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಳೆ ಸಮೀಕ್ಷೆ ತಂಡಗಳು ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳ ಬೆಳೆದ ರೈತರ ಪಟ್ಟಿ ಸಿದ್ಧಪಡಿಸಿ ಒದಗಿಸಬೇಕು ಎಂದರು.

ಸಾರ್ವಜನಿಕರ ಮಾಹಿತಿಗೆ ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಕಚೇರಿಗಳಲ್ಲಿ ಜಿಲ್ಲೆಯ ಮೆಕ್ಕಜೋಳ ಬೆಳೆಗಾರರ ಪಟ್ಟಿ ಪ್ರದರ್ಶಿಸಬೇಕು. ಪಟ್ಟಿ ಪರಿಶೀಲಿಸಿದ ನಂತರ ಮೆಕ್ಕೆಜೋಳ ಬೆಳೆದ ರೈತರ ಹೆಸರುಗಳು ಬೆಳೆ ಸಮೀಕ್ಷೆ ಪಟ್ಟಿಯಲ್ಲಿಲ್ಲದಿದ್ದರೆ ಅಥವಾ ಕೆ-ಕಿಸಾನ್‌ ತಂತ್ರಾಂಶದಲ್ಲಿ ಹೆಸರು ಮತ್ತು ಸರ್ವೇ ನಂಬರ್‌ ದಾಖಲಾಗದೇ ಇದ್ದರೆ ಅಂತಹ ರೈತರು ಜೂನ್‌ 25 ರ ಅಕ್ಷೇಪಣೆ ಸಲ್ಲಿಸಬೇಕು.

ರೈತರ ಸಂಪರ್ಕ ಕೇಂದ್ರದ ಸಿಬ್ಬಂದಿಯೂ ಬೆಳೆ ಸಮೀಕ್ಷೆ ಹಾಗೂ FRUITS (Farmer Registration & Unifi ed benefi – ciary information system) ಪೋರ್ಟ್ ಲ್‌ಗ‌ಳಲ್ಲಿ ಮಾಹಿತಿಯನ್ನು ಪರಿಶೀಲಿಸಿ ತಕ್ಷಣವೇ ತಿದ್ದುಪಡಿಗೆ ಕ್ರಮ ಕೈಗೊಳ್ಳಬೇಕು ಎಂದರು. FRUITS ತಂತ್ರಾಂಶದಲ್ಲಿ ನೊಂದಣಿಯಾಗದಿರುವ ರೈತರು ತಮ್ಮ ಆಧಾರಸಂಖ್ಯೆ, ಬ್ಯಾಂಕ್‌ ಖಾತೆ, ಆರ್‌ಟಿಸಿ, ಜಮೀನಿನ ದಾಖಲೆಗಳು, ಮೊಬೈಲ್‌ ಸಂಖ್ಯೆ ಹಾಗೂ ಸಂಪೂರ್ಣ ವಿಳಾಸದ ದಾಖಲೆಗಳನ್ನು ಸಲ್ಲಿಸಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮೆಕ್ಕಜೋಳ ಬೆಳೆ ಹಾನಿಗೊಂಡ ರೈತರಿಗೆ ಈಗಾಗಲೇ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮಾರ್ಗಸೂಚಿಯನ್ವಯ ಪರಿಹಾರ ನೀಡಲಾಗಿದೆ. ಅಂತಹ ಪರಿಹಾರ ಪಡೆದ ರೈತರನ್ನು ಹೊರತುಪಡಿಸಿ ಅನುಮೋದನೆ ನೀಡಬೇಕು. ಜಂಟಿ ಖಾತೆದಾರರು ಇದ್ದರೆ ಆರ್ಥಿಕ ನೆರವು ಪಡೆಯುವ ಫಲಾನುಭವಿಯನ್ನು ಪರಿಶೀಲಿಸಬೇಕೆಂದು ಸೂಚಿಸಿದರು.

ಜಿಲ್ಲೆಯಲ್ಲಿ 2019-20 ನೇ ಸಾಲಿನಲ್ಲಿ 51,740 ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಕಲಘಟಗಿ ತಾಲೂಕಿನಲ್ಲಿ ಅತಿ ಹೆಚ್ಚು 26,398, ಅಣ್ಣಿಗೇರಿ ತಾಲೂಕಿನಲ್ಲಿ ಅತಿ ಕಡಿಮೆ 487 ರೈತರಿದ್ದಾರೆ. ಉಳಿದಂತೆ ಅಳ್ನಾವರ 1332, ಧಾರವಾಡ 9786, ಹುಬ್ಬಳ್ಳಿ 3777, ಹುಬ್ಬಳ್ಳಿ ನಗರ 515, ಕುಂದಗೋಳ 3264, ನವಲಗುಂದ 6181 ರೈತರಿದ್ದಾರೆ ಎಂದು ಕೃಷಿ ಇಲಾಖೆ ಅ ಧಿಕಾರಿಗಳು ಸಭೆಗೆ ತಿಳಿಸಿದರು.

ಜಿಪಂ ಸಿಇಒ ಡಾ|ಬಿ.ಸಿ.ಸತೀಶ್‌, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ ಉಪ ಆಯುಕ್ತ ಅಜೀಜ್‌ ದೇಸಾಯಿ, ಕೃಷಿ ಉಪ ನಿರ್ದೇಶಕರಾದ ಸ್ಮಿತಾ .ಆರ್‌., ಮಂಜುನಾಥ ಅಂತರವಳ್ಳಿ, ತಹಶೀಲ್ದಾರ್‌ರಾದ ಸಂತೋಷ ಬಿರಾದಾರ, ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ, ನವೀನ ಹುಲ್ಲೂರ, ಕೊಟ್ರೇಶ್‌, ಅಶೋಕ ಶಿಗ್ಗಾಂವಿ, ಜಿಲ್ಲಾ ಕಾರ್ಮಿಕ ಇಲಾಖ ಅಧಿಕಾರಿಗಳಾದ ಅಶೋಕ ಬಾಳಿಗಟ್ಟಿ, ಮಾರಿಕಾಂಬ, ಸಹಾಯಕ ಕೃಷಿ ನಿರ್ದೇಶಕರಾದ ಎನ್‌.ಎಫ್‌. ಕಟ್ಟೇಗೌಡ್ರ, ಎಸ್‌.ಕೆ. ಖಾನೂರೆ, ಸಿ.ಜಿ. ಮೇತ್ರಿ, ಅನಗೌಡರ್‌, ದಂಡಗಿ ಇದ್ದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.