ಸಚಿವ ಜಾರಕಿಹೊಳಿ ಭೇಟಿ ಮಾಡಿದ ರೈತರ ನಿಯೋಗ
Team Udayavani, Feb 4, 2021, 3:22 PM IST
ಹುಬ್ಬಳ್ಳಿ: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಸಿಎಂ ಜತೆ ಚರ್ಚಿಸುವುದಾಗಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಅವರು, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ ಬೆಳೆವಿಮೆ ಮತ್ತು ಪರಿಹಾರದ ಹಣ ಬಿಡುಗಡೆ ಮಾಡುವ ಕುರಿತು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಇದನ್ನೂ ಓದಿ :ಕಳಸಾ ಕಾಮಗಾರಿಗಾಗಿ ಮತ್ತೂಂದು ಹಂತದ ಹೋರಾಟ
ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ದ್ಯಾಮಪ್ಪಯ್ಯ ಸೇರಿದಂತೆ ಅನೇಕ ರೈತ ಮುಖಂಡರು ಇದ್ದರು.