ಗ್ರಾಮೀಣ ಭಾಗದಲ್ಲಿ ಕಳೆಗಟ್ಟಿದ ಸಂಕ್ರಾಂತಿ ಹಬ್ಬ


Team Udayavani, Jan 16, 2022, 8:49 PM IST

ಸದರತಯುಇಒಇಕಮನಬವಚ

ಧಾರವಾಡ: ಕೋವಿಡ್‌ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ನಗರ ಪ್ರದೇಶಗಳು ಬಿಕೋ ಅಂದರೆ ಗ್ರಾಮೀಣ ಭಾಗದಲ್ಲಿ ಮಕರ ಸಂಕ್ರಮಣ ಹಬ್ಬ ಕಳೆಗಟ್ಟಿತ್ತು. ನಗರ ಪ್ರದೇಶದಲ್ಲಿ ಕರ್ಫ್ಯೂ ಹಿನ್ನೆಲೆಯಲ್ಲಿ ಜನಸಂಚಾರ ವಿರಳವಾಗಿತ್ತು. ಹೀಗಾಗಿ ಹಬ್ಬದ ಕರಿ ದಿನವನ್ನು ಸರಳವಾಗಿ ಆಚರಿಸಲಾಯಿತು.

ಆದರೆ ಗ್ರಾಮೀಣ ಭಾಗದಲ್ಲಿ ಕರ್ಫ್ಯೂ ಮಧ್ಯೆ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದ್ದು, ನಗರ ಪ್ರದೇಶದವರೂ ಗ್ರಾಮೀಣ ಭಾಗದ ತಮ್ಮ ಸ್ನೇಹಿತರು, ಸಂಬಂಧಿಗಳ ಮನೆಗಳತ್ತ ಮುಖ ಮಾಡಿದ್ದರು. ತಾಲೂಕಿನ ಅಮ್ಮಿನಭಾವಿ, ಮರೇವಾಡ, ಲಕಮಾಪುರ, ಯಾದವಾಡ, ಉಪ್ಪಿನ ಬೆಟಗೇರಿ, ಕೋಟೂರು, ಲೋಕೂರು ಸೇರಿದಂತೆ ಬೆಳವಲದ ಹಳ್ಳಿಗಳಲ್ಲಿ ಸಂಕ್ರಾಂತಿ ಹಬ್ಬ ಜೋರಾಗಿತ್ತು.

ಕೆಲವು ಗ್ರಾಮಗಳಲ್ಲಿ ಎತ್ತುಗಳನ್ನು ಶೃಂಗರಿಸಿ ಕೊಲ್ಲಾರಿ ಚೆಕ್ಕಡಿ ಹೂಡಿ ಹೊಲಕ್ಕೆ ಹೋಗಿ ಚರಗ ಚೆಲ್ಲಿ, ಕುಟುಂಬ ಸದಸ್ಯರು ಸಹಪಂಕ್ತಿ ಭೋಜನ ಮಾಡಿ ಬಂದರು. ಇನ್ನು ನಿಗದಿ, ಮನಗುಂಡಿ, ಮನಸೂರು, ದೇವರಹುಬ್ಬಳ್ಳಿ, ದೇವಗಿರಿ, ಲಾಳಗಟ್ಟಿ, ಮುರಕಟ್ಟಿ ಗ್ರಾಮಗಳಲ್ಲಿಯೂ ಸಂಕ್ರಾಂತಿ ಹಬ್ಬವನ್ನು ಗ್ರಾಮಸ್ಥರು ಆಚರಿಸಿ ಸಂಭ್ರಮಿಸಿದರು.

ದೇವಗಿರಿಯಲ್ಲಿ ವಿಶೇಷ: ದೇವಗಿರಿ ಗ್ರಾಮದ ಸಮೀಪದ ಕಾಡಿನಲ್ಲಿರುವ ಸೋಮಲಿಂಗೇಶ್ವರ ಕ್ಷೇತ್ರಕ್ಕೆ ಈ ಭಾಗದ ಹಳ್ಳಿಗರು ಪೂಜೆ ಸಲ್ಲಿಸಿ ಸಂಕ್ರಮಣ ಆಚರಿಸುವುದು ಸಂಪ್ರದಾಯ. ದಟ್ಟ ಅರಣ್ಯದಲ್ಲಿರುವ ಸೋಮಲಿಂಗೇಶ್ವರನ ದೇವಸ್ಥಾನದ ಹತ್ತಿರ ಇರುವ ನೀರಿನ ಸೆಲೆಗೆ (ಗಂಗಾಜಲ) ಮುತ್ತೆ çದೆಯರು ಪೂಜೆ ಸಲ್ಲಿಸಿ, ಚರಗ ಸಮರ್ಪಿಸಿ ಅಲ್ಲಿಯೇ ಭೋಜನ ಸವಿದರು. ನಂತರ ಸಂಕ್ರಮಣ ಆಚರಣೆ ನಿಮಿತ್ತ ದೇವಸ್ಥಾನದಲ್ಲಿ ಪರಸ್ಪರ ಎಳ್ಳುಬೆಲ್ಲ ಕೊಟ್ಟು ಸಂಕ್ರಾಂತಿ ಆಚರಿಸಿದರು.

ಸರಳ ರಥೋತ್ಸವ: ಶಾಲ್ಮಲಾ ಉಗಮ ಸ್ಥಾನವಾದ ಸೋಮೇಶ್ವರ ಕ್ಷೇತ್ರದಲ್ಲಿ ಕೋವಿಡ್‌ ಹಿನ್ನೆಲೆಯಲ್ಲಿ ಸೋಮೇಶ್ವರ ದೇವರ ರಥೋತ್ಸವ ಸರಳವಾಗಿ ಶನಿವಾರ ಜರುಗಿತು. ದೇವಸ್ಥಾನ ಟ್ರಸ್ಟ್‌ನ ಪ್ರಮುಖರು ದೇವಸ್ಥಾನದ ಆವರಣದಲ್ಲಿ ನಾಲ್ಕೈದು ಹೆಜ್ಜೆಯಷ್ಟು ರಥೋತ್ಸವ ಕೈಗೊಂಡರು. ಸಂಪ್ರದಾಯದಂತೆ ಪಲ್ಲಕ್ಕಿ ಉತ್ಸವವನ್ನು ಆವರಣದೊಳಗೆ ನೆರವೇರಿಸಲಾಯಿತು.

 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.