ಎಸಿಬಿ ಶಾಕ್;ಅಧಿಕಾರಿ ಪತ್ನಿ ಬಳಿ 6 ಸಾವಿರ ಸೀರೆ, 7 ಲಕ್ಷ ನಗದು ಪತ್ತೆ

Team Udayavani, Feb 28, 2017, 5:36 PM IST

ಹುಬ್ಬಳ್ಳಿ/ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಹುಬ್ಬಳ್ಳಿಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕರಿಯಪ್ಪ ಅವರ ಮನೆಯಲ್ಲಿ 7 ಲಕ್ಷ ರೂಪಾಯಿ ನಗದು ಹಾಗೂ 6ಸಾವಿರ ಸೀರೆಗಳು ಪತ್ತೆಯಾಗಿರುವುದಾಗಿ ಎಸಿಬಿ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಧಿಕಾರಿ ಕರಿಯಪ್ಪ ಅವರ ಪತ್ನಿ ಶಾಂತಮ್ಮಗೆ ಸೇರಿದ 5ಸಾವಿರಕ್ಕೂ ಹೆಚ್ಚು ಸೀರೆಗಳು ಎಸಿಬಿ ಅಧಿಕಾರಿಗಳ ದಾಳಿ ವೇಳೆ ಪತ್ತೆಯಾಗಿವೆ. 200ರೂಪಾಯಿಂದ ಹಿಡಿದು ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆಗಳಿವೆಯಂತೆ.  ಕರಿಯಪ್ಪನ ಇಬ್ಬರು ಮಕ್ಕಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. 

ಎಸಿಬಿ ಅಧಿಕಾರಿಗಳು ಹುಬ್ಬಳ್ಳಿಯ ವಿಶ್ವೇಶ್ವರ ನಗರದಲ್ಲಿರುವ ಕರಿಯಪ್ಪ ಮನೆ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ಸೀರೆಗಳನ್ನು ಕಂಡು ದಂಗಾಗಿದ್ದಾರೆ.  ಮಂಜುನಾಥ ನಗರದಲ್ಲಿ ಒಂದು ಮನೆ, 2 ಬ್ಯಾಂಕ್ ಲಾಕರ್, 1 ಕಾರು, ಹೊಲ ಜಮೀನು ಆಸ್ತಿ, ಪಾಸ್ತಿಯ ದಾಖಲೆ ವಶಪಡಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.

ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ಚಿತ್ರದುರ್ಗ ಸೇರಿದಂತೆ 8 ಕಡೆ ದಾಳಿ ನಡೆಸಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದರು. ದಾಳಿ ವೇಳೆ ಪತ್ತೆಯಾದ ಆಸ್ತಿ, ಪಾಸ್ತಿ, ನಗದು ವಿವರಗಳ ಪೂರ್ಣ ಮಾಹಿತಿಯನ್ನು ಎಸಿಬಿ ಅಧಿಕಾರಿಗಳು ನೀಡಬೇಕಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ