ಎನ್‌ಜಿಇಎಫ್‌ ಪುನಶ್ಚೇತನಕ್ಕೆ ಕ್ರಮ

Team Udayavani, Nov 12, 2019, 10:32 AM IST

huballi-tdy-3

ಹುಬ್ಬಳ್ಳಿ: ಪ್ರತಿಷ್ಠಿತ ಎನ್‌ಜಿಇಎಫ್‌ ಸಂಸ್ಥೆ ಪುನಶ್ಚೇತನಕ್ಕೆ ಸರಕಾರದಿಂದ 30 ಕೋಟಿ ರೂ. ನೆರವು ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.

ರಾಯಾಪುರದಲ್ಲಿ ಎನ್‌ಜಿಇಎಫ್‌ ಕಾರ್ಖಾನೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಂತರ ಮಾತನಾಡಿದ ಅವರು, ಕಳೆದ ನವಲತ್ತು ವರ್ಷಗಳ ಹಿಂದಿನ ಯಂತ್ರಗಳ ಮೇಲೆ ಕಾರ್ಯಗಳು ನಡೆಯುತ್ತಿವೆ. ಇದರಿಂದ ಹೆಚ್ಚಿನ ಗುಣಮಟ್ಟದ ಕಾರ್ಯ ನಿರೀಕ್ಷಿಸಲು ಸಾಧ್ಯವಿಲ್ಲ. ಇಂತಹ ವ್ಯವಸ್ಥೆಯಲ್ಲೇ ಸಂಸ್ಥೆ ಲಾಭದತ್ತ ಮುಖ ಮಾಡಿದೆ. ಸರಕಾರದಿಂದ 30 ಕೋಟಿ ರೂ. ಆರ್ಥಿಕ ನೆರವು ನೀಡಿದರೆ ಉತ್ತಮ ಸ್ಥಿತಿಗೆ ತಲುಪುವ ಭರವಸೆಯಿದೆ ಎಂದರು.

ಬೆಂಗಳೂರಿನಲ್ಲಿದ್ದ ಕೇಂದ್ರ ಕಚೇರಿ ನಷ್ಟದಿಂದ ಮುಚ್ಚಿದರೂ ಇಲ್ಲಿನ ಸಂಸ್ಥೆಗೆ ಬೀಗ ಹಾಕಲು ಬಿಡದೆ ಹಿಂದಿನ ಅವಧಿಯಲ್ಲಿ ಒಂದಿಷ್ಟು ಆರ್ಥಿಕ ನೆರವು ನೀಡಿ ಹೆಸ್ಕಾಂ ವ್ಯಾಪ್ತಿಯ ವಿದ್ಯುತ್‌ ಪರಿವರ್ತಕಗಳ (ಟಿಸಿ) ದುರಸ್ತಿ ಹಾಗೂ ಹೊಸ ಪರಿವರ್ತಕಗಳ ಖರೀದಿ ಕುರಿತು ಒಪ್ಪಂದ ಮಾಡಿಕೊಂಡ ನಂತರ ಸಂಸ್ಥೆ ಲಾಭದತ್ತ ಮುಖ ಮಾಡಿದೆ. 2017-18ರಲ್ಲಿ 31.20 ಕೋಟಿ ರೂ. ವಹಿವಾಟು ಆಗಿದ್ದು, 38.96 ಲಕ್ಷ ರೂ. ಲಾಭ ಮಾಡಿದೆ. 2018-19ರಲ್ಲಿ ವಹಿವಾಟು ಪ್ರಮಾಣ 132.36 ಕೋಟಿ ರೂ. ತಲುಪಿದ್ದು, 1.78 ಕೋಟಿ ರೂ. ಲಾಭ ಮಾಡಿದೆ. ಎನ್‌ಜಿಇಎಫ್‌ ಉತ್ಪನ್ನಗಳು ಗುಣಮಟ್ಟದಿಂದ ಕೂಡಿರುವುದರಿಂದ ಇಂದಿಗೂ ಬೇಡಿಕೆಯಿದೆ. ಹೀಗಾಗಿ ಈ ಸಂಸ್ಥೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದರು. ಕೈಗಾ, ಇಸ್ರೋ, ಎಚ್‌ಎಂಟಿ ಸೇರಿದಂತೆ ವಿವಿಧ ಸಂಸ್ಥೆಗಳ ಪರಿವರ್ತಕಗಳ ದುರಸ್ತಿಗೆ ಒಪ್ಪಂದ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ. ಅಗತ್ಯಬಿದ್ದರೆ ರಾಜ್ಯ ಸರಕಾರ ಮಧ್ಯ ಪ್ರವೇಶಿಸಿ ಎನ್‌ ಜಿಎಫ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಹಕಾರ ನೀಡುತ್ತದೆ.

ನಷ್ಟದ ಕಾರಣ ಇಲ್ಲಿನ ಸಿಬ್ಬಂದಿಯ ವೇತನ ಪರಿಷ್ಕರಣೆ ಆಗಿರಲಿಲ್ಲ. ಆದರೆ ಕಳೆದ ಎರಡು ವರ್ಷಗಳಿಂದ ಲಾಭವಾಗುತ್ತಿರುವುದಂದ ವೇತನ ಪರಿಷ್ಕರಣೆಗೆ ಸರಕಾರಕ್ಕೆ ಪ್ರಸ್ತಾವನೆ ಬಂದಿದ್ದು, ಆದಷ್ಟು ಬೇಗ ಇದಕ್ಕೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಕೊಡಿಸಲಾಗುವುದು. ಸರಕಾರದಿಂದ ಪುನಶ್ಚೇತನಕ್ಕೆ ನೆರವು ದೊರಕಿದ ನಂತರ ಸಿಬ್ಬಂದಿ ನೇಮಕಾತಿಗೆ ಪ್ರಯತ್ನಿಸಲಾಗುವುದು ಎಂದರು.

ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕಿರಣ ಅಡವಿ ಮಾತನಾಡಿ, ಬೆಂಗಳೂರಿನ ಸಂಸ್ಥೆ ಮುಚ್ಚಿದ ನಂತರ ಅಲ್ಲಿಂದ ತಂದಿರುವ ಯಂತ್ರಗಳು ಹಾಗೂ ನಾಲ್ಕು ದಶಕಗಳ ಹಿಂದಿನ ಯಂತ್ರಗಳ ಮೂಲಕ ಸಂಸ್ಥೆ ನಡೆಯುತ್ತಿದೆ. ಈ ವ್ಯವಸ್ಥೆಯಲ್ಲೇ ಕಳೆದ ಎರಡು ವರ್ಷಗಳಿಂದ ಸಂಸ್ಥೆ ಲಾಭದತ್ತ ಮುಖ ಮಾಡಿದೆ. ಸಂಸ್ಥೆ ಪುನಶ್ಚೇತನಕ್ಕೆ ಸರಕಾರ ಹಣಕಾಸಿನ ನೆರವು ನೀಡಿದರೆ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ. ಕೆಲವೊಂದು ಸಂಸ್ಥೆಗಳ ವಿದ್ಯುತ್‌ ಪರಿವರ್ತಕಗಳ ದುರಸ್ತಿಗೆ ಸಂಬಂಧಿಸಿದಂತೆ ಮಾತುಕತೆ ನಡೆದಿದ್ದು, ಈ ಯೋಜನೆ ಸಾಕಾರಗೊಂಡರೆ ಸಂಸ್ಥೆಯ ಭವಿಷ್ಯ ಉಜ್ವಲವಾಗಲಿದೆ ಎಂದರು. ಉಪ ವ್ಯವಸ್ಥಾಪಕ ನಿರ್ದೇಶಕ (ಎಚ್‌ಆರ್‌) ಶಿವಕುಮಾರ, ವ್ಯವಸ್ಥಾಪಕ ಎಚ್‌.ಎಂ. ಬ್ಯಾಹಟ್ಟಿ, ಎನ್‌ ಜಿಇಎಫ್ ಮಾಜಿ ಅಧ್ಯಕ್ಷ ರಂಗಾ ಬದ್ದಿ ಇನ್ನಿತರರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.