ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿಗೂ ಆರ್ಥಿಕ ನೆರವು ನೀಡಿ: ಹೊರಟ್ಟಿ

Team Udayavani, May 15, 2020, 7:43 AM IST

ಅನುದಾನಿತ ಶಿಕ್ಷಣ ಸಂಸ್ಥೆ ಸಿಬ್ಬಂದಿಗೂ ಆರ್ಥಿಕ ನೆರವು ನೀಡಿ: ಹೊರಟ್ಟಿ

ಹುಬ್ಬಳ್ಳಿ: ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಶಿಕ್ಷಕ ಹಾಗೂ ಶಿಕ್ಷಕೇತರರು ಕೋವಿಡ್ ವೈರಸ್‌ ಸಂಕಷ್ಟಕ್ಕೆ ಸಿಲುಕಿ ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ ರಾಜ್ಯ ಸರಕಾರ ಇನ್ನುಳಿದ ವರ್ಗಗಳಿಗೆ ನೀಡುತ್ತಿರುವ ಆರ್ಥಿಕ ಪ್ಯಾಕೇಜ್‌ ರೀತಿ ಇವರಿಗೂ ವಿಶೇಷ ಆರ್ಥಿಕ ನೆರವು ನೀಡಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ದೇಶ ಹಾಗೂ ರಾಜ್ಯವು ಈಗ ಕೊರೊನಾ ವೈರಸ್‌ ಸಂಕಷ್ಟಕ್ಕೆ ಸಿಲುಕಿ ಸಮಸ್ಯೆ ಅನುಭವಿಸುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೂಲಿಕಾರರಿಗೆ, ಬೇರೆ-ಬೇರೆ ರೀತಿಯ ಕೆಲಸ ಮಾಡುವಂತಹ ಕಾರ್ಮಿಕರಿಗೆ, ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ, ಸಣ್ಣ ವ್ಯಾಪಾರಸ್ಥರಿಗೆ, ದಿನಗೂಲಿ ಕೆಲಸಗಾರರಿಗೆ, ಸಮಾಜದಲ್ಲಿ ದಿನನಿತ್ಯ ದುಡಿದು ತಿನ್ನುವವರಿಗೆ ಹಾಗೂ ಇತರೆ ಅನೇಕ ರೀತಿಯ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿರುವ ಎಲ್ಲ ವರ್ಗದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಿದ್ದಿರಿ. ಆದರೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಶಿಕ್ಷಕರು ಮತ್ತು ಶಿಕ್ಷಕೇತರರಿಗೆ ಏಕೆ ವಿಶೇಷ ನೆರವು ನೀಡಿಲ್ಲ. ಅವರು ಮನುಷ್ಯರಲ್ಲವೇ? ಲಾಕ್‌ಡೌನ್‌ದಿಂದಾಗಿ ರಾಜ್ಯದಲ್ಲಿನ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವರು ವೇತನವಿಲ್ಲದೆ ಅಭದ್ರತೆಯಿಂದ ನರಳುತ್ತಿದ್ದಾರೆ. ಹೀಗಾಗಿ ಅವರೆಲ್ಲ ಸಂಬಳವಿಲ್ಲದೆ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ.

ಸಾವಿರಾರು ಕುಟುಂಬಗಳು ಬೀದಿಪಾಲಾಗುವ ಹಂತಕ್ಕೆ ಬಂದಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಅವರಲ್ಲಿ ಎಷ್ಟೋ ಜನ ಆತ್ಮಹತ್ಯೆಗೆ ಶರಣಾಗಬೇಕಾಗುತ್ತದೆ. ಅಲ್ಲದೇ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಯಾವುದೇ ಸೌಲಭ್ಯಗಳಿಲ್ಲದೇ ನೌಕರರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಸಾಲ-ಸೂಲ ಮಾಡಿ ಜೀವನ ನಡೆಸಬೇಕೆಂದರೆ ಅವರಿಗೆ ಯಾರೂ ಸಾಲ ಕೊಡುತ್ತಿಲ್ಲ. ಕಾರಣ ಅವರ ಜೀವನ ನರಕಯಾತನೆಯಾಗಿದೆ. ಸರಕಾರ ಎಲ್ಲ ಹಂತದವರಿಗೂ ವಿಶೇಷ ಪ್ಯಾಕೇಜ್‌ ನೀಡುತ್ತಿರುವುದು ಸರಿ. ಅದೆ ರೀತಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಜೀವನ ನಿರ್ವಹಣೆಗೆ ತಕ್ಷಣ ಸ್ಪಂದಿಸಬೇಕು. ದೇಶವು ಕೋವಿಡ್‌ -19 ಸಂಕಷ್ಟದ ಪರಿಸ್ಥಿತಿಯಲ್ಲಿ ಉಳಿದ ವರ್ಗಗಳಿಗೆ ನೀಡುತ್ತಿರುವ ಆರ್ಥಿಕ ಪ್ಯಾಕೇಜ್‌ ರೀತಿ ಇವರಿಗೂ ವಿಶೇಷ ಆರ್ಥಿಕ ನೆರವು ನೀಡಿ, ಶಿಕ್ಷಕರ ಕುಟುಂಬಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.