ಹುಬ್ಬಳ್ಳಿಯಲ್ಲಿ ಬಹುತೇಕ ಸ್ತಬ್ಧ

Team Udayavani, May 25, 2020, 9:22 AM IST

ಹುಬ್ಬಳ್ಳಿಯಲ್ಲಿ ಬಹುತೇಕ ಸ್ತಬ್ಧ

ಹುಬ್ಬಳ್ಳಿ: ಕೋವಿಡ್ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಘೋಷಣೆ ಮಾಡಿದಂತೆ ಪ್ರತಿ ರವಿವಾರ ಲಾಕ್‌ ಡೌನ್‌ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ರವಿವಾರ ಬಹುತೇಕ ವ್ಯಾಪಾರ-ವಹಿವಾಟು, ಸಂಚಾರ ಸ್ತಬ್ಧವಾಗಿತ್ತು.

ಶನಿವಾರ ಸಂಜೆ 7:00 ರಿಂದ ಸೋಮವಾರ ಬೆಳಿಗ್ಗೆ 7:00 ಗಂಟೆವರೆಗೆ ಲಾಕ್‌ಡೌನ್‌ ಜಾರಿಯಲ್ಲಿದ್ದು, ಯಾರೂ ಕೂಡಾ ಹೊರ ಬರದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಅದರಂತೆ ಶನಿವಾರ ಸಂಜೆ 7:00 ಗಂಟೆಯಿಂದ ನಗರದಲ್ಲಿ ಪೊಲೀಸರು ವ್ಯಾಪಕ ಕ್ರಮ ಕೈಗೊಳ್ಳುವ ಮೂಲಕ ಎಲ್ಲೆಡೆ ನಾಕಾಬಂದಿ ಹಾಕಿದ್ದರು. ಸಂಜೆ 7:00 ಗಂಟೆ ನಂತರ ಹೊರ ಬರುವ ವಾಹನಗಳಿಗೆ ದಂಡ ಹಾಕುವುದು ವಾಹನಗಳ ಸೀಜ್‌ ಮಾಡುವುದು ಸೇರಿದಂತೆ ಇನ್ನಿತರೆ ಕಠಿಣ ಕ್ರಮ ಜರುಗಿಸಿದ್ದರು. ಆದರೆ ರವಿವಾರ ಬೆಳಿಗ್ಗೆಯಿಂದ ನಗರದ ಎಲ್ಲ ರಸ್ತೆಗಳು ಜನ-ವಾಹನ ಸಂಚಾರವಿಲ್ಲದೇ ಬಿಕೋ ಎನ್ನುತ್ತಿರುವುದು ಕಂಡು ಬಂತು.

ಇನ್ನು ಹೊಸ ಬಸ್‌ ನಿಲ್ದಾಣದಲ್ಲಿ ಹೊರಗಡೆಯಿಂದ ಐದು ಬಸ್‌ ಹಾಗೂ ಒಂದು ಕುಟುಂಬದ ಸುಮಾರು 7 ಜನರು ಹೊಸ ಬಸ್‌ ನಿಲ್ದಾಣದಲ್ಲಿರುವುದು ಕಂಡು ಬಂತು. ಇನ್ನುಳಿದಂತೆ ನಗರದ ಮಾರುಕಟ್ಟೆ ಸೇರಿದಂತೆ ಎಲ್ಲವೂ ಸ್ತಬ್ದಗೊಂಡಿತ್ತು. ನಗರ ಪ್ರಮುಖ ಪ್ರದೇಶಗಳಾದ ಕಿತ್ತೂರು ಚನ್ನಮ್ಮ ವೃತ್ತ, ದಾಜಿಬಾನ ಪೇಟೆ, ಜನತಾ ಬಜಾರ್‌, ದುರ್ಗದ ಬಯಲು, ಹಳೇ ಹುಬ್ಬಳ್ಳಿ, ನೀಲಿಜಿನ್‌ ರಸ್ತೆ, ಗೋಕುಲ ರಸ್ತೆ, ವಿದ್ಯಾನಗರ, ಶಿರೂರ ಪಾರ್ಕ್‌, ಇಂಡಿ ಪಂಪ್‌ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನ ವಾಹನ, ಜನರ ಓಡಾಟಗಳೇ ಇರಲಿಲ್ಲ. ಅಲ್ಲೊಂದು ಇಲ್ಲೊಂದು ದ್ವಿಚಕ್ರ ವಾಹನ ಸವಾರರು ಕಂಡುಬಂದರು.

ಜನರಲ್ಲಿ ಗೊಂದಲ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವ್ಯಾಪಾರು- ವಹಿವಾಟು ನಡೆಸಬೇಕು- ಬೇಡ ಎನ್ನುವ ಗೊಂದಲದಲ್ಲಿ ಹಲವು ಜನರು ಇರುವುದು ಕಂಡು ಬಂತು. ನಗರದ ಕೆಲ ಹೊಸ ಬಡಾವಣೆಗಳಲ್ಲಿ ಜನರು ಕೆಲ ಅಂಗಡಿಗಳನ್ನು ತೆರೆದು ಮಧ್ಯಾಹ್ನದ ನಂತರ ಬಂದ್‌ ಮಾಡಿದರೆ ಇನ್ನು ಕೆಲವರು ತೆಗೆಯದೇ ಹಾಗೇ ಬಿಟ್ಟಿರುವುದು ಕಂಡು ಬಂತು. ಇದಲ್ಲದೇ ಕೆಲ ಕಡೆ ತರಕಾರಿ ಮಾರಾಟ ಮಾಡುತ್ತಿರುವುದು ಕಂಡು ಬಂತು.

ಪರವಾನಗಿಯೊಂದಿಗೆ ವಿವಾಹ: ನಗರದಲ್ಲಿ ಜಿಲ್ಲಾಡಳಿತದ ಅನುಮತಿಯೊಂದಿಗೆ 50 ಜನರ ಮಿತಿಯೊಂದಿಗೆ ಕೆಲ ವಿವಾಹ ಸಮಾರಂಭಗಳು ಸರಳವಾಗಿ ಸೂಸುತ್ರವಾಗಿ ನಡೆದವು.

ಬ್ಯಾರಿಕೇಡ್‌ನಿಂದ ಬಂದ್‌: ಪ್ರಮುಖ ರಸ್ತೆಗಳು ತೆರೆದಿರುವುದು ಬಿಟ್ಟರೆ ಇನ್ನುಳಿದಂತೆ ಒಳ ರಸ್ತೆಗಳೆಲ್ಲವನ್ನು ಬ್ಯಾರಿಕೇಡ್‌ಗಳಿಂದ ಬಂದ್‌ ಮಾಡಲಾಗಿತ್ತು. ರಸ್ತೆಯಲ್ಲಿ ಅಡ್ಡವಾಗಿ ಬ್ಯಾರಿಕೇಡ್‌ ಇಡುವ ಮೂಲಕ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು. ಇದಲ್ಲದೇ ನಗರ ಪ್ರವೇಶ ಮಾಡುವ ಎಲ್ಲ ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್‌ ಇಡುವ ಮೂಲಕ ತಪಾಸಣೆ ಮಾಡಿ ಒಳಗಡೆ ಬಿಡುತ್ತಿರುವುದು ಕಂಡು ಬಂತು. ಇನ್ನು ಸರಕು ಸಾಗಣೆ ವಾಹನ ಸಂಚಾರ ಯಥಾ ಪ್ರಕಾರ ಕಂಡು ಬಂತು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.