ಎಸ್.ಎಲ್. ಭೈರಪ್ಪ ಅವರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿ
Team Udayavani, Jan 25, 2020, 4:15 PM IST
ಧಾರವಾಡ: ವರಕವಿ ಡಾ. ದ ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನಿಂದ ಕೊಡಮಾಡುವ 2019-20ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಬೇಂದ್ರೆ ಪ್ರಶಸ್ತಿಗೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಭಾಜನರಾಗಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ, ಈ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯನ್ನು ಜ. 31ರಂದು ಸಂಜೆ ಐದು ಗಂಟೆಗೆ ಬೇಂದ್ರೆ ಭವನದಲ್ಲಿ ಪ್ರದಾನ ಮಾಡಲಾಗುವುದು.
ಸಾಹಿತಿ ಡಾ. ಗುರುಲಿಂಗ ಕಾಪಸೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೊ.ತೇಜಸ್ವಿ ಕಟ್ಟಿಮನಿ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದರು.
ಈ ಪ್ರಶಸ್ತಿ ಒಂದು ಲಕ್ಷ ರೂ. ಹಾಗೂ ಫಲಕ ಒಳಗೊಂಡಿದೆ. ಬೇಂದ್ರೆ ಟ್ರಸ್ಟ್ ಪ್ರಾರಂಭದಲ್ಲಿ ಅವರ ಕುಟುಂಬಸ್ಥರು ಹಾಗೂ ಸ್ನೇಹಿತರು ಸೇರಿ ನೀಡಿದ್ದ ಇಡಿಗಂಟನ್ನು ಠೇವಣಿ ಇಡಲಾಗಿತ್ತು. ಅದರಿಂದ ಬಂದ 90 ಸಾವಿರ ಹಾಗೂ ಸರ್ಕಾರ ನೀಡಿದ ಹತ್ತು ಸಾವಿರ ರೂ.ಸೇರಿ ಒಟ್ಟು ಒಂದು ಲಕ್ಷ ರೂ. ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ