ಅಳ್ನಾವರ ರೈಲು ನಿಲ್ದಾಣ ಅಭಿವೃದ್ಧಿಗೆ ಸಚಿವರಲ್ಲಿ ಮನವಿ

ಹುಬ್ಬಳ್ಳಿಯಿಂದ ಗೋವಾಗೆ ಹೊಸ ರೈಲು ಸೇವೆ ಆರಂಭಕ್ಕೆ ಆಗ್ರಹ ಎಲ್ಲ ಎಕ್ಸ್‌ಪ್ರೆಸ್‌ ಟ್ರೇನುಗಳಿಗೆ ನಿಲುಗಡೆ ಸೌಲಭ್ಯಕ್ಕೆ ಒತ್ತಾಯ

Team Udayavani, Jun 24, 2019, 8:53 AM IST

hubali-tdy-6..

ಅಳ್ನಾವರ: ಇಲ್ಲಿನ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸಾರ್ವಜನಿಕರ ಅಹವಾಲು ಆಲಿಸಿದರು.

ಅಳ್ನಾವರ: ಬೆಳಗಾವಿ ಮತ್ತು ದಾಂಡೇಲಿ ಮಾರ್ಗ ಜೋಡಿಸುವ ಪ್ರಮುಖ ಕೊಂಡಿಯಾದ ಅಳ್ನಾವರ ರೈಲು ನಿಲ್ದಾಣಕ್ಕೆ ಮೂಲಸೌಲಭ್ಯ ಒದಗಿಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಸ್ಥಳೀಯರು ಮನವಿ ಮಾಡಿದರು.

ಬೆಳಗಾವಿಯಿಂದ ಹುಬ್ಬಳ್ಳಿವರೆಗಿನ ಜೋಡಿ ರೈಲು ಮಾರ್ಗ ಪರಿಶೀಲನೆ ಮಾಡಲು ರವಿವಾರ ವಿಶೇಷ ರೈಲು ಮೂಲಕ ಹೊರಟಿದ್ದ ಸಚಿವ ಅಂಗಡಿ ಮಧ್ಯಾಹ್ನ ಇಲ್ಲಿನ ರೈಲು ನಿಲ್ದಾಣದಲ್ಲಿ ನಿಂತು ಪ್ರಯಾಣಿಕರ ಅಹವಾಲು ಆಲಿಸಿದರು.

ಅಳ್ನಾವರ ನಿಲ್ದಾಣವು ಈ ಭಾಗದ ಪ್ರಮುಖ ರೈಲ್ವೆ ಜಂಕ್ಷನ್‌ ಆಗಿದೆ. ನೈಋತ್ಯ ರೈಲ್ವೆ ಕಚೇರಿಯಿಂದ ತೀರಾ ಹತ್ತಿರ ಇದೆ. ಗೋವಾ ರಾಜ್ಯಕ್ಕೆ ಪ್ರಯಾಣಿಸಲು ಹುಬ್ಬಳ್ಳಿಯಿಂದ ಯಾವುದೇ ರೈಲು ಇಲ್ಲ. ರಾಮನಗರ ರಸ್ತೆ ಅಭಿವೃದ್ಧಿ ಕಾರ್ಯ ನಡೆದಿದ್ದು, ಈ ಭಾಗದ ಪ್ರಯಾಣಿಕರು ಸುತ್ತುವರಿದು ಗೋವಾ ಪ್ರವಾಸ ಮಾಡುವ ಅನಿವಾರ್ಯತೆ ಇದೆ. ಹಾಗಾಗಿ ಹುಬ್ಬಳ್ಳಿಯಿಂದ ಗೋವಾಗೆ ಹೊಸ ರೈಲು ಸೇವೆ ಆರಂಭಿಸಿ ಎಂದು ಸಚಿವರಲ್ಲಿ ಮನವಿ ಮಾಡಲಾಯಿತು.

ಅಳ್ನಾವರ ರೈಲು ನಿಲ್ದಾಣದಲ್ಲಿ ಸಾಕಷ್ಟು ಕುಂದುಕೊರತೆಗಳು ಇವೆ. 2ನೇ ಪ್ಲಾಟ್ಫಾರ್ಮ್ಗೆ ಮೇಲ್ಛಾವಣಿ ನಿರ್ಮಿಸಬೇಕು. ಪಶ್ವಿ‌ಮ ಭಾಗದಲ್ಲಿ ರೈಲು ಮಾರ್ಗದಲ್ಲಿ ಮೇಲ್ಸೇತುವೆ ನಿರ್ಮಿಸಬೇಕು ಮತ್ತು ಅಂಗವಿಕಲರು, ವೃದ್ಧರು ದಾಟಲು ವಿಶೇಷ ಪ್ಲಾಟ್ಫಾರ್ಮ್ ನಿರ್ಮಾಣ ಮಾಡಬೇಕು. ಎಲ್ಲ ಎಕ್ಸ್‌ಪ್ರೆಸ್‌ ಟ್ರೇನುಗಳನ್ನು ಇಲ್ಲಿ ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಲಾಯಿತು.

ದಾಂಡೇಲಿ ರೈಲು ಮಾರ್ಗವನ್ನು ತಕ್ಷಣವೇ ಆರಂಭಗೊಳಿಸಿ ಹುಬ್ಬಳ್ಳಿ-ದಾಂಡೇಲಿ ರೈಲು ಸಂಚಾರ ಆರಂಭಿಸಬೇಕು. ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಟಿಕೆಟ್ ಪಡೆಯಲು ಮತ್ತೂಂದು ಕೌಂಟರ್‌ ತರೆಯಬೇಕು. ಮುಂಗಡ ಟಿಕೆಟ್ ಕಾಯ್ದಿರಿಸಲು ಪತ್ಯೇಕ ಕೌಂಟರ್‌ ಬೇಕು. ರೈಲು ಮಾಹಿತಿ ಪಡೆಯಲು ದೂರವಾಣಿ ಕರೆ ಮಾಡಿದರೆ ಕರ್ತವ್ಯದ ಮೇಲಿರುವ ಬೇರೆ ರಾಜ್ಯದ ಕನ್ನಡ ಬಾರದ ಸಿಬ್ಬಂದಿ ಕರೆಗಳನ್ನು ಸ್ವೀಕರಿಸುವು‌ದಿಲ್ಲ ಎಂದು ದೂರು ನೀಡಲಾಯಿತು.

ಅಹವಾಲುಗಳನ್ನು ಆಲಿಸಿದ ಸಚಿವ ಅಂಗಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್‌, ಪಪಂ ಸದಸ್ಯರಾದ ಛಗನಲಾಲ ಪಟೇಲ, ಅಮೂಲ ಗುಂಜೀಕರ, ರಮೇಶ ಕುನ್ನೂರಕರ, ತಮೀಮ ತೇರಗಾಂವ ಮತ್ತು ಎಂ.ಸಿ. ಹಿರೇಮಠ, ಎಂ.ಎಂ. ತೇಗೂರ, ಅನ್ವರಖಾನ ಬಾಗೇವಾಡಿ, ಸತ್ತಾರ ಬಾತಖಂಡಿ, ಪ್ರವೀಣ ಪವಾರ, ಸುರೇಂದ್ರ ಕಡಕೋಳ, ಬಾಬು ಲಿಂಗನಮಠ, ನಿಸಾರ ಖತೀಬ ಇದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.