ಟೋಲ್‌ಗೇಟ್‌ ಬಂದ್‌ ಮಾಡಿ ಪ್ರತಿಭಟನೆ

Team Udayavani, Sep 27, 2019, 11:19 AM IST

huballi-tdy-2

ಹುಬ್ಬಳ್ಳಿ: ಗಬ್ಬೂರ ಬೈಪಾಸ್‌ ಅವ್ಯವಸ್ಥೆ ಖಂಡಿಸಿ ಹು-ಧಾ ಮಹಾನಗರ ಕಾಂಗ್ರೆಸ್‌ ಕಾರ್ಯದರ್ಶಿ ವಿಜಯಕುಮಾರ ಕುಂದನಹಳ್ಳಿ ನೇತೃತ್ವದಲ್ಲಿ ನಂದಿ ಹೈವೇ ಡೆವಲಪರ್ ಕಚೇರಿಗೆ ಮುತ್ತಿಗೆ ಹಾಕಿ, ಟೋಲ್‌ ಗೇಟ್‌ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಯಿತು.

ಗಬ್ಬೂರ ಬಳಿ ನಂದಿ ಹೈವೇ ಬೈಪಾಸ್‌ ನಲ್ಲಿ ಕಳೆದ ಹಲವು ವರ್ಷಗಳಿಂದ ಟೋಲ್‌ ಸಂಗ್ರಹಣೆ ಮಾಡಲಾಗುತ್ತಿದ್ದು,ಸರಿಯಾದ ಮೂಲಸೌಕರ್ಯ ಕಲ್ಪಿಸಿಲ್ಲ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಹಾಗೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಟೋಲ್‌ಗೇಟ್‌ನಲ್ಲಿ ಆಂಬ್ಯುಲೆನ್ಸ್‌ ವ್ಯವಸ್ಥೆ ಇಲ್ಲ, ಶೌಚಾಲಯ ವ್ಯವಸ್ಥೆ ಇಲ್ಲ, ವಿದ್ಯುತ್‌ ದೀಪಗಳಿದ್ದರೂ ಬೆಳಗುವುದಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸರ್ವೀಸ್‌ ರಸ್ತೆಗಳು ಹಾಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಎಂದು ಎಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ

ಶಾಸಕ ಪ್ರಸಾದ ಅಬ್ಬಯ್ಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸ್ಥಳದಲ್ಲಿಯೇ ಜಿಲ್ಲಾಧಿಕಾರಿಯನ್ನು ಮೊಬೈಲ್‌ ಮೂಲಕ ಸಂಪರ್ಕಿಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಕರೆದು ಚರ್ಚಿಸಿ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು. ಒಂದು ವಾರದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳದೇ ಇದ್ದಲ್ಲಿ ಟೋಲ್‌ ಗೇಟ್‌ ಬಂದ್‌ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ಮೋಹನ ಅಸುಂಡಿ, ಯಮನೂರ ಜಾಧವ, ಪ್ರಭು ಪ್ರಭಾಕರ, ಶ್ರೀನಿವಾಸ ಬೆಳದಡಿ, ಯಲ್ಲಪ್ಪ ಮಡಿವಾಳರ, ಶ್ಯಾಂ ಜಾಧವ, ನಜೀರ ಹೊನ್ಯಾಳ ಇನ್ನಿತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.