ಚಿಕಿತ್ಸೆಗೆ ಹಿಂದೇಟು ಹಾಕಿದರೆ ಬಲಪ್ರಯೋಗ ಅನಿವಾರ್ಯ

Team Udayavani, Jun 29, 2020, 11:31 AM IST

ಚಿಕಿತ್ಸೆಗೆ ಹಿಂದೇಟು ಹಾಕಿದರೆ ಬಲಪ್ರಯೋಗ ಅನಿವಾರ್ಯ

ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ರೆ ಸರಕಾರ ಅನಿವಾರ್ಯವಾಗಿ ಬಲಪ್ರಯೋಗ ಮಾಡಬೇಕಾಗುತ್ತದೆ ಎಂದು ಖಾಸಗಿ ಆಸ್ಪತ್ರೆಗಳಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂದಿಗ್ಧ ಪರಿಸ್ಥಿತಿಯನ್ನು ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳು ಅರ್ಥ ಮಾಡಿಕೊಳ್ಳಬೇಕು. ಸೋಂಕಿತರಿಗೆ ಚಿಕಿತ್ಸೆ ನೀಡಲು ಸರಕಾರ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದಾಗಬೇಕು. ಸಂಪುಟ ಸಭೆಯಲ್ಲಿ ಖಾಸಗಿ ಆಸ್ಪತ್ರೆಯ ಕೊರೊನಾ ಬಿಲ್‌ ಬೆಲೆ ನಿಗದಿ ಮಾಡಿದೆ, ಅವರು ಸಹಕರಿಸಬೇಕು. ಕೇವಲ ಲಾಭಕ್ಕಾಗಿ ಮಾತ್ರ ಖಾಸಗಿ ಆಸ್ಪತ್ರೆಗಳಲ್ಲ ಎಂಬುವುದನ್ನು ಅರ್ಥ ಮಾಡಿಕೊಂಡು ಚಿಕಿತ್ಸೆ ನೀಡಲು ಮುಂದಾಗಬೇಕು. ಇಲ್ಲವಾದರೆ ಸರಕಾರ ಬಲಪ್ರಯೋಗ ಮಾಡುವುದು ಅನಿವಾರ್ಯವಾಗಲಿದೆ ಎಂದು ತಿಳಿಸಿದರು.

ಕೋವಿಡ್ ಸೋಂಕಿನ ವಿಚಾರದಲ್ಲಿ ಜನರು ಜವಾಬ್ದಾರಿ ಅರಿತುಕೊಳ್ಳಬೇಕಿದೆ. ಆದರೆ ಇದನ್ನು ಮರೆತು ಜನರು ಬೇಕಾಬಿಟ್ಟಿ ನಡೆದುಕೊಳ್ಳುತ್ತಿದ್ದಾರೆ. ಆರೋಗ್ಯ ಇಲಾಖೆ ನೀಡಿರುವ ಸೂಚನೆಗಳ ಪಾಲನೆಯನ್ನು ಜನರು ಮರೆಯುತ್ತಿದ್ದಾರೆ. ಕೆಲ ಮುನ್ನೆಚ್ಚರಿಕೆಗಳನ್ನು ಅಳವಡಿಸಿಕೊಳ್ಳದಿದ್ದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ. ಹೀಗಾಗಿ ಸಾರ್ವಜನಿಕರ ಜವಾಬ್ದಾರಿ ದೊಡ್ಡದಾಗಿದೆ. ಲಾಕ್‌ಡೌನ್‌ ಹೋಗಿದೆ ಹೊರತು ಕೋವಿಡ್ ಹೋಗಿಲ್ಲ. ಈ ವಿಚಾರದಲ್ಲಿ ಸರಕಾರ ತನ್ನ ಹೊಣೆಗಾರಿಕೆ ಸಮರ್ಪಕವಾಗಿ ನಿಭಾಯಿಸುತ್ತಿದೆ. ಜನರು ತಿಳಿವಳಿಕೆಯಿಂದ ನಡೆದುಕೊಳ್ಳದಿದ್ದರೆ ಕೋವಿಡ್ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ ಎಂದರು.

ಪ್ರತಿ ರವಿವಾರ ಲಾಕ್‌ಡೌನ್‌ ಮಾಡಿರುವುದು ಒಳ್ಳೆಯ ಬೆಳವಣಿಗೆ. ಸಾಕಷ್ಟು ಸೂಚನೆಗಳನ್ನು ನೀಡಿದರೂ ಜನರು ಪಾಲನೆ ಮಾಡದಿದ್ದಾಗ ಒಂದು ದಿನದ ಲಾಕ್‌ಡೌನ್‌ ಅನಿವಾರ್ಯವಾಗಿದೆ. ಹೀಗಾಗಿ ವಾರದಲ್ಲಿ ಒಂದು ದಿನವಾದರೂ ಸಂಪೂರ್ಣ ಲಾಕ್‌ಡೌನ್‌ ಮಾಡಿದರೆ ಜನರ ಬೇಕಾಬಿಟ್ಟಿ ಓಡಾಟಕ್ಕೆ ಕಡಿವಾಣ ಹಾಕಿದಂತಾಗಲಿದೆ. ಸಂಪೂರ್ಣ ಲಾಕ್‌ಡೌನ್‌ ಮಾಡಬಾರದು ಎಂಬುದು ವೈಯಕ್ತಿಕ ಅಭಿಪ್ರಾಯವಾಗಿದೆ. ಜನರು ಸಹಕಾರ ನೀಡಿದರೆ ಮಾತ್ರ ಸಂಪೂರ್ಣ ಲಾಕ್‌ಡೌನ್‌ ಆಗುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

tennis

ಇಟಾಲಿಯನ್‌ ಓಪನ್‌ ಟೆನಿಸ್‌ : ಜರ್ರಿ-ಜ್ವೆರೇವ್‌ ನಡುವೆ ಫೈನಲ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.