ಡಾ.ರಾಜೇಂದ್ರ ಚೆನ್ನಿ, ಡಾ.ಜಿನದತ್ತ ದೇಸಾಯಿಗೆ ಬೇಂದ್ರೆ ರಾಷ್ಟ್ರೀಯ ಪ್ರಶಸ್ತಿ
Team Udayavani, Jan 24, 2023, 11:43 AM IST
ಧಾರವಾಡ: ವರಕವಿ ಡಾ.ದ.ರಾ.ಬೇಂದ್ರೆ ಅವರ 127ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡ ಮಾಡುವ 2023ನೇ ಸಾಲಿನ ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಗೆ ಈ ಸಲ ಇಬ್ಬರು ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಹೇಳಿದರು.
ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಲಕ್ಷ ನಗದು, ಸ್ಮರಣಿಕೆ ಫಲಕ ಒಳಗೊಂಡ ಈ ಪ್ರಶಸ್ತಿಯನ್ನು ಪ್ರತ್ಯೇಕ ತಲಾ 50 ಸಾವಿರದಂತೆ ಮೂಲತ: ಧಾರವಾಡದವರೇ ಆದ ಒಬ್ಬರು ಹಿರಿಯ ಸಾಹಿತಿಗಳಿಗೆ ಹಂಚಿಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಾದ ವಿಮರ್ಶಕ, ಚಿಂತಕರಾದ ಡಾ.ರಾಜೇಂದ್ರ ಚೆನ್ನಿ ಹಾಗೂ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಡಾ.ಜಿನದತ್ತ ದೇಸಾಯಿ ಅವರಿಗೆ ಜ.31 ರಂದು ಸಂಜೆ 4:30 ಗಂಟೆಗೆ ನಗರದ ಸಾಧನಕೇರಿಯ ಡಾ.ದ.ರಾ.ಬೇಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದರು.
ಇದನ್ನೂ ಓದಿ:ವಿರಾಟ್ ಕೊಹ್ಲಿ ಟಿ20 ತಂಡದಲ್ಲಿ ಯಾಕಿಲ್ಲ? ಕೋಚ್ ದ್ರಾವಿಡ್ ಉತ್ತರ ನೋಡಿ
ವಿಧಾನ ಪರಿಷತ ಸದಸ್ಯ ಎಚ್.ವಿಶ್ವನಾಥ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅರವಿಂದ ಬೆಲ್ಲದ, ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಆಗಮಿಸಲಿದ್ದಾರೆ. ಪ್ರಶಸ್ತಿ ಪುರಸ್ಕೃತರಾದ ಡಾ.ಜಿನದತ್ತ ದೇಸಾಯಿ ಅವರ ಕುರಿತು ಡಾ.ಶಾಂತಾ ಇಮ್ರಾಪೂರ ಹಾಗೂ
ಡಾ.ರಾಜೇಂದ್ರ ಚೆನ್ನಿ ಅವರ ಕುರಿತು ಕುಮಟಾದ ಡಾ.ಎಂ.ಜಿ.ಹೆಗಡೆ ಅಭಿನಂದನಾಪರ ನುಡಿಗಳನ್ನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಶಿರಸಿಯ ಪ್ರೊ.ಎಚ್.ಆರ್. ಅಮರನಾಥ ಸಂಪಾದಕತ್ವದ ಪ್ರೊ.ಬೇಂದ್ರೆ ಮಾಸ್ತರರ ಅಮರವಾಣಿ ಕೈಪಿಡಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದರ್ಭದಿಂದ ಕರುನಾಡಿಗೆ ಗಾರ್ದಭ ಗುಳೆ; 6 ತಿಂಗಳಿಗೆ 5 ಲಕ್ಷ ರೂ. ದುಡಿಯುವ ತಂಡ
ಮೀಸಲಾತಿ ಬಗ್ಗೆ ಧೈರ್ಯದ ನಿರ್ಧಾರ: ಸಚಿವ ಪ್ರಹ್ಲಾದ ಜೋಷಿ
ಚುನಾವಣೆಗಾಗಿ ಮೀಸಲು ಹೆಚ್ಚಿಸಿಲ್ಲ: ಸಚಿವ ಮುರುಗೇಶ ನಿರಾಣಿ
ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಪ್ರಕಟ; ಇಂದು ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ
ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್
MUST WATCH
ಹೊಸ ಸೇರ್ಪಡೆ
ಕೇಂದ್ರ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ಜಡೇಜಾಗೆ ಬೋನಸ್, ರಾಹುಲ್ ಗೆ ಭಾರೀ ಹಿನ್ನಡೆ
“ನೀವು ಯಾರನ್ನಾದರೂ ಡೇಟ್ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್
ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್, ಲಾಂಗ್ ಪತ್ತೆ
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ