ಬೇಂದ್ರೆ ಸಂಚಾರ ಮತ್ತೈದು ವರ್ಷ ನಿರಾಳ

•ರಹದಾರಿ ಪರವಾನಗಿ ಐದು ವರ್ಷಗಳಿಗೆ ವಿಸ್ತರಿಸಿ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣ ತೀರ್ಪು

Team Udayavani, Aug 21, 2019, 9:41 AM IST

huballi-tdy-3

ಹುಬ್ಬಳ್ಳಿ: ಬೇಂದ್ರೆ ಸಾರಿಗೆಯ ರಹದಾರಿ ಪರವಾನಗಿಯನ್ನು ಮುಂದಿನ ಐದು ವರ್ಷಗಳಿಗೆ ನವೀಕರಣಗೊಳಿಸಿ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಾಧಿಕರಣ ತೀರ್ಪು ನೀಡಿದೆ.

ಮೇಲ್ಮನವಿ ನ್ಯಾಯಾಧೀಕರಣ ರಹದಾರಿ ಪರವಾನಗಿ ನವೀಕರಿಸಿದ ಹಿನ್ನೆಲೆಯಲ್ಲಿ ಬೇಂದ್ರೆ ಸಾರಿಗೆಯ 41 ಬಸ್‌ಗಳು ಅವಳಿ ನಗರದ ನಡುವೆ ಸಂಚರಿಸಲಿದ್ದು, ಈ ತೀರ್ಪಿನಿಂದ ಬೇಂದ್ರೆ ಸಾರಿಗೆಗೆ ದೊಡ್ಡ ಜಯ ದೊರೆತಂತಾಗಿದೆ.

ರಹದಾರಿ ಪರವಾನಗಿ ಅವಧಿ ಮುಗಿಯುತ್ತಿದ್ದ ಪರಿಣಾಮ ಬೇಂದ್ರೆ ಸಾರಿಗೆ ಮಾಲೀಕರು ನವೀಕರಣ ಮಾಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಮನವಿ ಮಾಡಿದ್ದರು. ಆದರೆ ಅವಳಿ ನಗರದಲ್ಲಿ ಬಿಆರ್‌ಟಿಎಸ್‌ ಯೋಜನೆ ಅನುಷ್ಠಾನಗೊಂಡಿರುವ ಹಿನ್ನೆಲೆಯಲ್ಲಿ ಸರಕಾರ ಬೇಂದ್ರೆ ಸಾರಿಗೆ ರಹದಾರಿ ಪರವಾನಗಿ ನವೀಕರಿಸದಂತೆ ಅಧಿಸೂಚನೆ ಹೊರಡಿಸಿತ್ತು. ಈ ಆದೇಶದ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಬೇಂದ್ರೆ ಸಾರಿಗೆ ರಹದಾರಿ ಪರವಾನಗಿ ನವೀಕರಣ ಅರ್ಜಿಯನ್ನು ತಿರಸ್ಕರಿಸಿತ್ತು. ಕನಿಷ್ಠ 4 ತಿಂಗಳ ಮಟ್ಟಿಗೆ ತಾತ್ಕಾಲಿಕ ಪರವಾನಗಿಗಾಗಿ ಸಲ್ಲಿಸಿದ ಅರ್ಜಿಯನ್ನೂ ಸಾರಿಗೆ ಪ್ರಾಧಿಕಾರ ತಿರಸ್ಕರಿಸಿತ್ತು.

ನ್ಯಾಯ ಕೋರಿ ಮೇಲ್ಮನವಿ: ಆರ್‌ಟಿಎ ನಿರ್ಧಾರದ ವಿರುದ್ಧ ಬೇಂದ್ರೆ ಸಾರಿಗೆ ಪರವಾಗಿ ರಾಮವಿಜಯ ಟ್ರಾವೆಲ್ಸ್ನ ಮಹಾದೇವ ನಾಯ್ಕ, ಎಚ್. ಪ್ರಸಾದ ಬಲ್ಲಾಳ ಅವರು ರಹದಾರಿ ಪರವಾನಗಿ ನವೀಕರಿಸುವಂತೆ ರಾಜ್ಯ ಸಾರಿಗೆ ಮೇಲ್ಮನವಿಗಳ ನ್ಯಾಯಾಧಿಕರಣಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ 15 ವರ್ಷಗಳಿಂದ ಅವಳಿ ನಗರದ ನಡುವೆ ಸಾರಿಗೆ ಸೇವೆ ನೀಡುತ್ತಿದ್ದು, ಇದೀಗ ಏಕಾಏಕಿ ರಹದಾರಿ ಪರವಾನಗಿ ನವೀಕರಣ ಹಾಗೂ ತಾತ್ಕಾಲಿಕ ಪರವಾನಗಿ ನೀಡಲು ಆರ್‌ಟಿಎ ನಿರಾಕರಿಸಿದೆ. ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ್ದರು.

ಮನವಿಗೆ ದೊರೆತ ಮನ್ನಣೆ: ಮನವಿ ಆಲಿಸಿದ ಸಾರಿಗೆ ನ್ಯಾಯಾಧಿಕರಣ ಅವಳಿ ನಗರದ ಜನರಿಗೆ ಸಾರಿಗೆ ಸಮಸ್ಯೆಯಾಗಬಾರದು ಎನ್ನುವ ಕಾರಣ ನೀಡಿ 2019 ಜೂ. 26ರ ಯಥಾಸ್ಥಿತಿ (ಸ್ಟೇಟೆಸ್ಕೋ ) ಕಾಯ್ದುಕೊಳ್ಳುವಂತೆ ಸೂಚನೆ ನೀಡಿ ವಿಚಾರಣೆಗೆ ಆದೇಶಿಸಿತ್ತು. ಹೀಗಾಗಿ 41 ಬಸ್‌ಗಳು ಅವಳಿ ನಗರದ ನಡುವೆ ಸಂಚರಿಸುವಂತಾಗಿತ್ತು. ಜು. 15ರ ವೇಳೆಗೆ ಸುಮಾರು 38 ಬಸ್‌ಗಳ ರಹದಾರಿ ಪರವಾನಗಿ ಪೂರ್ಣಗೊಂಡಿದ್ದರ ಹಿನ್ನೆಲೆಯಲ್ಲಿ ಮೂರು ಬಸ್‌ಗಳ ಸಂಚಾರ ಮಾತ್ರ ಇತ್ತು. ನ್ಯಾಯಾಧಿಕರಣ ಯಥಾಸ್ಥಿತಿ ಆದೇಶ ನೀಡದೇ ಇದ್ದಿದ್ದರೆ ಆ. 19ಕ್ಕೆ ಬೇಂದ್ರೆ ಸಾರಿಗೆ ಎಲ್ಲ ಬಸ್‌ಗಳ ರಹದಾರಿ ಪರವಾನಗಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುತ್ತಿತ್ತು. ಇದೀಗ ಪರವಾನಗಿ ನವೀಕರಗೊಂಡಿದ್ದು, ಬೇಂದ್ರೆ ಸಾರಿಗೆ ಮಾಲೀಕರು ಹಾಗೂ ನೌಕರರಲ್ಲಿದ್ದ ಆತಂಕ ದೂರವಾದಂತಾಗಿದೆ.

ಆದೇಶದ ವಿರುದ್ಧ ಹೈಕೋರ್ಟ್‌ಗೆ ಮೊರೆ ಸಾಧ್ಯತೆ:

ರಾಜ್ಯ ಸಾರಿಗೆ ಮೇಲ್ಮನವಿಗಳ ನ್ಯಾಯಾಧಿಕರಣ ಆದೇಶದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ನ್ಯಾಯಾಧಿಕರಣ ನೀಡಿರುವ ರಹದಾರಿ ಪರವಾನಗಿಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಲಿದ್ದಾರೆ. ಬೇಂದ್ರೆ ಸಾರಿಗೆ ಸಂಚಾರದಿಂದ ಸಾವಿರಾರು ಕೋಟಿ ರೂ. ವೆಚ್ಚದ ಸರಕಾರಿ ಯೋಜನೆ ವಿಫಲ ಸೇರಿದಂತೆ ವಿವಿಧ ಅಂಶಗಳನ್ನು ಹೈಕೋರ್ಟ್‌ಗೆ ಮನವರಿಕೆ ಮಾಡಲಾಗುವುದು. ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
•ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.