ವೈದ್ಯರ ಚಕ್ಕರ್‌ ತಡೆಗೆ ಬಯೋಮೆಟ್ರಿಕ್‌

Team Udayavani, Sep 17, 2019, 9:50 AM IST

huballi-tdy-2

ಹುಬ್ಬಳ್ಳಿ: ಕಿಮ್ಸ್‌ ಆಸ್ಪತ್ರೆಯಲ್ಲಿ ಕೆಲ ವೈದ್ಯರು ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯದೆ ಕರ್ತವ್ಯಕ್ಕೆ ಗೈರಾಗುವುದು ಹಾಗೂ ಅರ್ಧಕ್ಕೆ ಚಕ್ಕರ್‌ ಹೊಡೆಯುವುದನ್ನು ತಡೆಯಲು ಅ. 1ರಿಂದ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಬಟವಡೆ ಮಾಡಲು ನಿರ್ಧರಿಸಲಾಗಿದೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌)ಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕೆಲ ಹಿರಿ-ಕಿರಿಯ ವೈದ್ಯರು ಆಡಳಿತ ಮಂಡಳಿ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಹಾಗೂ ಪೂರ್ವಾನುಮತಿ ಪಡೆಯದೆ ತಿಂಗಳುಗಟ್ಟಲೇ ಕೆಲಸಕ್ಕೆ ಗೈರಾಗುತ್ತಿದ್ದಾರೆ. ಜೊತೆಗೆ ಕೆಲವರು ಕೆಲಸಕ್ಕೆ ಹಾಜರಾದರೂ ಕೆಲಹೊತ್ತು ಇದ್ದು ನಂತರ ಹೋಗಿ ಬಿಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದರಿಂದ ಆಸ್ಪತ್ರೆಗೆ ಹೊರ ರೋಗಿಗಳಾಗಿ ಬರುವ ಹಾಗೂ ದಾಖಲಾಗಿರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ತೀವ್ರ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ದೊಡ್ಡ ತಲೆನೋವು: ಕಿಮ್ಸ್‌ನಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತಲೂ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳಿವೆ. ಅಲ್ಲದೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕೂಡ ಆರಂಭಗೊಂಡಿದೆ. ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು, ಆರ್‌ಎಂಒ, ಹೌಸ್‌ ಸರ್ಜನ್‌, ಪಿಜಿ ವಿದ್ಯಾರ್ಥಿಗಳು ಸೇರಿ ಒಟ್ಟು 300 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ವೈದ್ಯರ ಅನಿರೀಕ್ಷಿತ ಗೈರು ಹಾಜರಾತಿಯಿಂದ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಇದು ಆಡಳಿತ ಮಂಡಳಿಗೆ ದೊಡ್ಡ ತಲೆನೋವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಯೋ ಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಬಟವಡೆಗೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಕಿಮ್ಸ್‌ನ ವೈದ್ಯ ಸಿಬ್ಬಂದಿ ವೇತನವನ್ನು ಅ. 1ರಿಂದ ಎಚ್ಆರ್‌ಎಂಎಸ್‌ಗೆ ಲಿಂಕ್‌ ಮಾಡಿ ಬಟವಡೆ ಮಾಡಲಾಗುವುದು. ವೈದ್ಯರ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಬಟವಡೆ ಮಾಡುವುದರಿಂದ ಪೂರ್ವಾನುಮತಿ ಪಡೆಯದೆ ಗೈರಾಗುವವರ ಮೇಲೆ ಹಾಗೂ ಕರ್ತವ್ಯದಲ್ಲಿ ಚಕ್ಕರ್‌ ಹೊಡೆಯುವವರ ಮೇಲೆ ನಿಗಾ ವಹಿಸಲು ಅನುಕೂಲವಾಗುತ್ತದೆ. • ಡಾ| ರಾಮಲಿಂಗಪ್ಪ ಅಂಟರತಾನಿ, ಕಿಮ್ಸ್‌ ನಿರ್ದೇಶಕ

•ಶಿವಶಂಕರ ಕಂಠಿ

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.