ಬಿಜೆಪಿ ಪರ ಪೇದೆ ಪ್ರಚಾರ: ತನಿಖೆಗೆ ಕಮಿಷನರ್‌ ಆದೇಶ

Team Udayavani, May 14, 2018, 4:29 PM IST

14-May-16.jpg

ಹುಬ್ಬಳ್ಳಿ: ಹು-ಧಾ ಪೊಲೀಸ್‌ ಕಮಿಷನರೇಟ್‌ನ ಪೇದೆಯೊಬ್ಬ ಫೇಸ್‌ಬುಕ್‌ನಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಪರ ಪ್ರಚಾರ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ್‌ ಅವರು ಸೈಬರ್‌ ಕ್ರೈಂ ವಿಭಾಗಕ್ಕೆ ತನಿಖೆಗೆ ಆದೇಶಿಸಿದ್ದಾರೆ.

ಬೆಂಡಿಗೇರಿ ಠಾಣೆಯ ಪೇದೆ ನಾಗರಾಜ ಕೆಂಚಕ್ಕನವರ ಎಂಬಾತ ‘ಏಕಲವ್ಯ ಹುಬ್ಬಳ್ಳಿ’ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಲವು ವರ್ಷಗಳಿಂದ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರನ್ನು ಹೊಗಳುವ ಹಾಗೂ ಅವರನ್ನು ಸಮರ್ಥನೆ ಮಾಡಿಕೊಳ್ಳುವ ಪೋಸ್ಟ್‌ಗಳನ್ನು ಮಾಡುತ್ತಿದ್ದ. ಡಾ.ಪ್ರಭಾಕರ ಭಟ್‌ ಕಲ್ಲಡ್ಕ, ಚಕ್ರವರ್ತಿ ಸೂಲಿಬೆಲೆ, ರಾಘವೇಶ್ವರ ಭಾರತಿ ಸ್ವಾಮೀಜಿ, ಜನಾರ್ದನ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ಹಾಗೂ ಬಲಪಂಥೀಯ ನಾಯಕರ ಪರ ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡುತ್ತಿದ್ದ. ಅಲ್ಲದೆ ಕಾಂಗ್ರೆಸ್‌ ಮತ್ತು ಅದರ ನಾಯಕರು, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧದ ಪೋಸ್ಟ್‌ಗಳು ರಾರಾಜಿಸುತ್ತಿದ್ದವು. 

ಪೋಸ್ಟ್‌ ಮಾಡುವಾಗ ಜೈ ಶ್ರೀರಾಮ ಎಂದು ಆರಂಭಿಸುತ್ತಿದ್ದ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಈ ಕಾಯಕ ಮುಂದುವರಿಸಿದ್ದ. ತಾನೊಬ್ಬ ಸರ್ಕಾರಿ ನೌಕರ ಎಂಬುದನ್ನು ಮರೆತು ಬಿಜೆಪಿ ಪರ ಪ್ರಚಾರ ಮಾಡತೊಡಗಿದ್ದ. ಈ ಕುರಿತು ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ನಾಗರಾಜ ಕೆಂಚಕ್ಕನವರ, ಪ್ರಚಾರ ಹಾಗೂ ಸಮರ್ಥನೆ ಮಾಡಿಕೊಂಡಿದ್ದ ಪೋಸ್ಟ್‌ಗಳನ್ನು ತನ್ನ ಫೇಸ್‌ಬುಕ್‌ ಖಾತೆಯಿಂದ ತೆಗೆದು ಹಾಕಿದ್ದಾನೆ. ಪ್ರಕರಣವು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆಯುಕ್ತರು ಪೇದೆ ಕೆಂಚಕ್ಕನವರ ವಿರುದ್ಧ ಸೈಬರ್‌ ಕ್ರೈಂ ವಿಚಾರಣೆಗೆ ಒಳಪಡಿಸಿದ್ದಾರೆ.

ಪೊಲೀಸ್‌ ಪೇದೆ ನಾಗರಾಜ ಕೆಂಚಕ್ಕನವರ ಫೇಸ್‌ಬುಕ್‌ ಖಾತೆ ತೆರೆದು ಅದರಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರದ ಬಗ್ಗೆ ಪೋಸ್ಟ್‌ ಮಾಡುತ್ತಿದ್ದ ಬಗ್ಗೆ ತನಿಖೆಯನ್ನು ಸೈಬರ್‌ ಕ್ರೈಂಗೆ ವಹಿಸಲಾಗಿದೆ. ಆತನೇ ಖಾತೆ ತೆರೆದಿದ್ದನೋ ಅಥವಾ ಇನ್ಯಾರೋ ತೆರೆದು ಪೋಸ್ಟ್‌ ಮಾಡುತ್ತಿದ್ದರೋ ಎಂಬುದನ್ನು ಸೈಬರ್‌ ಕ್ರೈಂನವರು ತನಿಖೆ ನಡೆಸಿ ವರದಿ ಕೊಡಲಿದ್ದಾರೆ. ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಎಂ.ಎನ್‌. ನಾಗರಾಜ್‌, ಆಯುಕ್ತರು, ಹು-ಧಾ ಪೊಲೀಸ್‌

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.