ಬಿಜೆಪಿ ಇದೀಗ ವಿಶ್ವದ ದೊಡ್ಡ ಪಕ್ಷ: ಜೋಶಿ
Team Udayavani, Jul 8, 2019, 9:43 AM IST
ಧಾರವಾಡ: ಬನಶಂಕರಿ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿದರು.
ಧಾರವಾಡ: ವಿಶ್ವದಲ್ಲಿಯೇ ಬಿಜೆಪಿ ಅತ್ಯಂತ ದೊಡ್ಡ ಪಕ್ಷ ಹಾಗೂ ಮುಂದಿನ ದಿನಮಾನದಲ್ಲಿ ಭಾರತ ವಿಶ್ವಕ್ಕೆ ಗುರು ಆಗುವುದರಲ್ಲಿ ಸಂಶಯವೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಸಸಿ ನೆಟ್ಟು ಚಾಲನೆ ನೀಡಿ ಅವರು ಮಾತನಾಡಿದರು. ಸಶಕ್ತ ಭಾರತ ನಿರ್ಮಾಣ ಮಾಡುವಲ್ಲಿ ಮೋದಿ ಸರಕಾರ ಕಾರ್ಯೋನ್ಮುಖ ಆಗಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಮೋದಿ ಸರಕಾರ ಕ್ರಮ ವಹಿಸಲಿದೆ. ಜನಪರ ಯೋಜನೆಗಳು ಅರ್ಹರಿಗೆ ತಲುಪುವಂತೆ ಮಾಡಲಿದೆ ಎಂದರು.
ಶಾಸಕ ಅಮೃತ ದೇಸಾಯಿ, ಈರೇಶ ಅಂಚಟಗೇರಿ ಮಾತನಾಡಿದರು. ತವನಪ್ಪ ಅಷ್ಟಗಿ, ಸೀಮಾ ಮಸೂತಿ, ಟಿ.ಎಸ್. ಪಾಟೀಲ, ಈರಣ್ಣ ಹಪಿÛ, ಸಿದ್ದು ಕಲ್ಯಾಣಶೆಟ್ಟಿ, ಶ್ರೀನಿವಾಸ ಕೋಟ್ಯಾನ, ಶಕ್ತಿ ಹಿರೇಮಠ, ಶಂಕರ ಶೇಳಕೆ, ಶಕ್ತಿ ಹಿರೇಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ