ಕೈ ತಪ್ಪಿದ ಎಪಿಎಂಸಿ ಅಧಿಕಾರ ಕಮಲ ತೆಕ್ಕೆಗೆ

Team Udayavani, Nov 12, 2019, 10:24 AM IST

huballi-tdy-2

ಹುಬ್ಬಳ್ಳಿ: ಅಮರಗೋಳದ ಶ್ರೀ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ (ಎಪಿಎಂಸಿ) ನೂತನ ಅಧ್ಯಕ್ಷರಾಗಿ ರಾಮಚಂದ್ರ ಜಾಧವ ಸೋಮವಾರ ಅವಿರೋಧವಾಗಿ ಆಯ್ಕೆಗೊಂಡರು.

ಬಿಜೆಪಿ ಬೆಂಬಲಿತ ಉಣಕಲ್ಲ ಕ್ಷೇತ್ರದ ಸದಸ್ಯ ರಾಮಚಂದ್ರ ಜಾಧವ ಹೊರತಾಗಿ ಬೇರೆ ಯಾವುದೇ ಸದಸ್ಯರು ನಾಮಪತ್ರ ಸಲ್ಲಿಸದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷ ಜಗನ್ನಾಥಗೌಡ ಸಿದ್ದನಗೌಡರ ರಾಜೀನಾಮೆ ನೀಡಿದ್ದರಿಂದ ಚುನಾವಣೆ ನಡೆಸಲು ನಿರ್ಧರಿಸಲಾಗಿತ್ತು. ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ 2 ಗಂಟೆಯಿಂದ ಮಧ್ಯಾಹ್ನ 2:15ರ ವರೆಗೆ ನಾಮ ನಿರ್ದೇಶನ ಪತ್ರಗಳ ಪರಿಶೀಲನೆ ನಿಗದಿಪಡಿಸಲಾಗಿತ್ತು.

ರಾಮಚಂದ್ರ ಜಾಧವ 2 ನಾಮಪತ್ರ ಸಲ್ಲಿಸಿದ್ದರು. ಒಬ್ಬರೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ನಡೆಯಲಿಲ್ಲ. ಮಧ್ಯಾಹ್ನ 2:30ಕ್ಕೆ ರಾಮಚಂದ್ರ ಜಾಧವ ಅವರನ್ನು ಅಧ್ಯಕ್ಷರೆಂದು ಚುನಾವಣಾ ಅಧಿಕಾರಿಗಳು ಘೋಷಿಸಿದರು. ರಾಮಚಂದ್ರ ಜಾಧವ ನೂತನ ಅಧ್ಯಕ್ಷರೆಂದು ಘೋಷಿಸುತ್ತಿದ್ದಂತೆಯೇ ಬಿಜೆಪಿ ಕಾರ್ಯಕರ್ತರು ಹಾಗೂ ರಾಮಚಂದ್ರ ಜಾಧವ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು. ಎಪಿಎಂಸಿಯಲ್ಲಿ 14 ಚುನಾಯಿತ ಪ್ರತಿನಿಧಿಗಳಿದ್ದು, 3 ನಾಮ ನಿರ್ದೇಶಿತ ಸದಸ್ಯರಿದ್ದಾರೆ. ಕನಿಷ್ಟ 9 ಮತಗಳನ್ನು ಪಡೆದ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ. ಎಪಿಎಂಸಿ ಉಪಾಧ್ಯಕ್ಷೆಯಾಗಿ ಗಿರಿಜವ್ವಾ ಬೆಂಗೇರಿ ಮುಂದುವರಿಯಲಿದ್ದಾರೆ.

ಅಧ್ಯಕ್ಷರ ಆಯ್ಕೆ ನಿಟ್ಟಿನಲ್ಲಿ ರವಿವಾರ ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ ನಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಅವಿರೋಧ ಆಯ್ಕೆ ಮಾಡಲು ನಿರ್ಧರಿಸಲಾಯಿತು.

ಹಿರಿಯ ಸದಸ್ಯ ರಾಮಚಂದ್ರ ಜಾಧವ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಲಾಯಿತು. ಮೂವರು ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಒಟ್ಟು 8 ಜನ ಸದಸ್ಯರು ಬಿಜೆಪಿ ಬೆಂಬಲಿತರಿದ್ದರು. ಇದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಹುದ್ದೆಗೇರುವುದು ಸುಲಭವಾಯಿತು. ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಬಿಜೆಪಿ ಮುಖಂಡ ಮಹೇಶ ಟೆಂಗಿನಕಾಯಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ನಾಮನಿರ್ದೇಶನ: ರಾಜ್ಯ ಸರಕಾರ ಕಮಲಾಕ್ಷಿ ಬಸಾಪುರ, ಶಿವಯೋಗಿ ಮಂಟೂರಶೆಟ್ರಾ, ಪರಸಪ್ಪ ಮುಳಗುಂದ ಅವರನ್ನು ನೇಮಕ ಮಾಡಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.