ಮಾನವೀಯತೆಯ ನೆಲೆಗಟ್ಟಿನ ಮೇಲೆ ನಿಂತಿದೆ ಬೌದ್ಧ ಧರ್ಮ

Team Udayavani, Apr 30, 2018, 5:34 PM IST

30-April-26.jpg

ಗಜೇಂದ್ರಗಡ: ಪ್ರಪಂಚದಲ್ಲಿ ಮೊಟ್ಟ ಮೊದಲ ಬಾರಿಗೆ ಮಾನವೀಯತೆಯ ನೆಲೆಗಟ್ಟಿನ ಚಿಂತನೆಯೊಂದಿಗೆ ಬೆಳೆದದ್ದು ಬೌದ್ಧ ಧರ್ಮ ಮಾತ್ರ. ಈ ನಿಟ್ಟಿನಲ್ಲಿ ಧರ್ಮ ರಹಿತ ಸಮಾಜವಿಲ್ಲ, ಸಮಾಜ ರಹಿತ ಸಾಹಿತ್ಯವಿಲ್ಲ ಎಂದು ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಹೇಳಿದರು. ಪಟ್ಟಣದ ಮೈಸೂರು ಮಠದಲ್ಲಿ ಕಸಾಪ ತಾಲೂಕು ಹಾಗೂ ನಗರ ಘಟಕ ವತಿಯಿಂದ ನಡೆದ 92ನೇ ವಾರದ ಸಾಹಿತ್ಯ ಚಿಂತನ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಎಲ್ಲರನ್ನೂ ಸರಿ ಸಮನಾಗಿ ಕಂಡು, ಸಮಾನತೆಯ ಮಂತ್ರವನ್ನು ಬೋಧಿಸಿದ ಬುದ್ಧನು ವಿಶ್ವಕ್ಕೆ ಕೊಡುಗೆಯಾಗಿ ನೀಡಿರುವ ಬೌದ್ಧ ಧರ್ಮವು ವಿಶ್ವಮಾನ್ಯವಾಗಿದೆ. ಮನುಷ್ಯನ ಉನ್ನತಿಗೆ ಬೇಕಾದ ಸರಳ ಹಾಗೂ ನಿಸರ್ಗ ತರ್ಕವನ್ನು ಅನ್ವೇಷಿಸಿದ ಮೊದಲ ವ್ಯಕ್ತಿ ಭಗವಾನ್‌ ಬುದ್ಧ. ಬೌದ್ಧ ತಾತ್ವಿಕತೆಯನ್ನು ಅರಿಯಲು ಯಾರೊಬ್ಬರ ಸಹಾಯವೂ ಬೇಕಿಲ್ಲ. ಸಾಮಾನ್ಯ ಬದುಕಿನ ಪ್ರಶ್ನೆಯೇ ಬೌದ್ಧ ತಾತ್ವಿಕತೆಯ ಹುಟ್ಟಿಗೆ ಕಾರಣ ಎಂದರು.

ನಿವೃತ್ತ ಉಪನ್ಯಾಸಕ ಕೆ.ಎಸ್‌. ಗಾರವಾಡ ಹಿರೇಮಠ ಮಾತನಾಡಿ, ಬೌದ್ಧ ಬಿಕ್ಕುಗಳು ಎಂದರೆ ಬೌದ್ಧ ಧರ್ಮದ ಅನುಯಾಯಿಗಳಲ್ಲಿ ಒಂದು ಭಾಗವಾಗಿದ್ದರು. ಇವರು ಭಿಕ್ಷೆಯಿಂದಲೇ ಜೀವನ ಸಾಗಿಸುತ್ತದ್ದರು. ಪ್ರಾಚೀನ ಮಗಧ ದೇಶದಲ್ಲಿ ಬೌದ್ಧ ವಿಹಾರಗಳು ಹೆಚ್ಚಾಗಿದ್ದವು. ಬೌದ್ಧ ಭಿಕ್ಷುಗಳು ಬದುಕಿನ ಆಸೆ, ಆಕಾಂಕ್ಷೆಗಳನ್ನೆಲ್ಲ ತೊರೆದು, ಗುಹಾಂತರದಲ್ಲಿ ಧ್ಯಾನ, ಜಪ, ತಪಗಳನ್ನು ಮಾಡಿ ಬೌದ್ಧ ಧರ್ಮದ ತತ್ವ ಮಾರ್ಗಗಳ ಪಾಲನೆಯಲ್ಲಿ ನಿರತರಾಗಿದ್ದರು ಎಂದರು.

ಎಸ್‌.ಕೆ. ಕಟ್ಟಿಮನಿ, ಸಿದ್ರಾಮಯ್ಯ ಹಿರೇಮಠ, ಶರಣಮ್ಮ ಅಂಗಡಿ, ಎಸ್‌. ಎಸ್‌. ನರೇಗಲ್ಲ, ಎಂ.ಎಸ್‌. ಮಕಾನದಾರ,
ಎಸ್‌.ಎ. ಜಿಗಳೂರ, ಎಸ್‌.ಬಿ. ಚಳಗೇರಿ, ಪಿ.ಕೆ. ಹಿರೇಮಠ, ಎಚ್‌.ಎ. ಚಿಂತಗುಂಟಿ, ಡಿ.ಆರ್‌. ಮ್ಯಾಗೇರಿ, ಪಿ.ಐ. ಜೂಚನಿ, ಬಿ.ವಿ. ಮುನವಳ್ಳಿ, ಹುಚ್ಚಪ್ಪ ಹಾವೇರಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.