ಮುಷ್ಕರಕ್ಕೆ ಬಸ್‌ ವಳಿದ ಜನತೆ


Team Udayavani, Apr 8, 2021, 3:56 PM IST

hfdghdfgh

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಬಸ್‌ ಗಳು ರಸ್ತೆಗಿಳಿಯದ ಪರಿಣಾಮ ಪ್ರಯಾಣಿಕರು ಕೂಡ ನಿಲ್ದಾಣದತ್ತ ಮುಖ ಮಾಡಲಿಲ್ಲ.

ಪರ್ಯಾಯವಾಗಿ ಖಾಸಗಿ ವಾಹನಗಳ ವ್ಯವಸ್ಥೆ ಮಾಡಿದ್ದರೂ ಆ ಮಾಲಿಕರಿಗೆ ನಿರೀಕ್ಷಿತ ಆದಾಯ ತರಲಿಲ್ಲ. ಪರ್ಯಾಯ ವ್ಯವಸ್ಥೆ ಮಾಡಿದ್ದರೂ ಪ್ರಯಾಣಿಕರ ಪರದಾಟ ತಪ್ಪಲಿಲ್ಲ.

6 ವೇತನ ಆಯೋಗ ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಸಾರಿಗೆ ನೌಕರರ ತೀವ್ರ ಹೋರಾಟಕ್ಕೆ ಮುಂದಾಗಿದ್ದು, ಮೊದಲ ದಿನ ಬುಧವಾರ ಸಾರಿಗೆ ಸಂಸ್ಥೆಯ ಬಸ್‌ ಗಳು ರಸ್ತೆಗಿಳಿಯಲಿಲ್ಲ. ಸಾರಿಗೆ ನೌಕರರ ಹೋರಾಟಕ್ಕೆ ಸೆಡ್ಡು ಹೊಡೆದಿರುವ ಸರಕಾರ ಪೊಲೀಸ್‌, ಆರ್‌ಟಿಒ ಹಾಗೂ ಸಾರಿಗೆ ಸಂಸ್ಥೆ ಅಧಿಕಾರಿಗಳ ಮೂಲಕ ಖಾಸಗಿ ವಾಹನಗಳ ಸಾರಿಗೆ ಸೇವೆ ನೀಡಲು ಮುಂದಾಗಿತ್ತು.

ಇದರಿಂದ ಒಂದಿಷ್ಟು ಮಾರ್ಗಗಳ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಯಿತು. ಖಾಸಗಿ ವಾಹನಗಳ ಓಡಾಟಕ್ಕೆ ಬೆಳಿಗ್ಗೆ 6:00 ಗಂಟೆಯಿಂದಲೇ ಸಿದ್ಧಪಡಿಸಲಾಗಿತ್ತು. ಮಹಾನಗರ ಪೊಲೀಸ್‌ ಆಯುಕ್ತ ಲಾಭೂರಾಮ, ಡಿಸಿಪಿ ಕೆ.ರಾಮರಾಜನ್‌, ಆರ್‌ ಟಿಒ ಅಪ್ಪಯ್ಯ ನಾಲತ್ವಾಡಮಠ ಸೇರಿದಂತೆ ಹಿರಿಯ ಅಧಿಕಾರಿಗಳು ಹಳೇ ಬಸ್‌ ನಿಲ್ದಾಣದಲ್ಲಿ ಮುಕ್ಕಾಂ ಹೂಡಿದ್ದರು. ಬಿಕೋ ಎನ್ನುತ್ತಿದ್ದ ನಿಲ್ದಾಣ: ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರು ಹೊರ ಬಾರದ ಹಿನ್ನೆಲೆಯಲ್ಲಿ ನಗರದ ಗೋಕುಲ ರಸ್ತೆ ಹೊಸ ಬಸ್‌ ನಿಲ್ದಾಣ, ಹೊಸೂರು ಬಸ್‌ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿದ್ದವು.

ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಬಸ್‌ಗಳ ಸಿಬ್ಬಂದಿ ಹೊರತುಪಡಿಸಿ ಯಾರೂ ಸುಳಿಯಲಿಲ್ಲ. ಹಳೇ ಬಸ್‌ ನಿಲ್ದಾಣದಿಂದ ಕಾರ್ಯಾಚರಣೆ ಮಾಡುವ ವ್ಯವಸ್ಥೆಯಿದ್ದರೂ ನಿರೀಕ್ಷಿತ ಜನರು ಇರಲಿಲ್ಲ.

ಹುಬ್ಬಳ್ಳಿ- ಧಾರವಾಡ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಹುತೇಕ ಮಾರ್ಗದಲ್ಲಿ ಪ್ರಯಾಣಿಕರ ಕೊರತೆಯಿರುವುದು ಕಂಡು ಬಂತು. ಹೀಗಾಗಿ ಬೇಂದ್ರೆ ಸಾರಿಗೆ ಸೇರಿದಂತೆ ಕೆಲ ಖಾಸಗಿ ವಾಹನಗಳು ಹು-ಧಾ ನಡುವೆ ಸಂಚಾರಕ್ಕೆ ಹೆಚ್ಚು ಒಲವು ತೋರಿರುವುದು ಕಂಡು ಬಂದಿತು. ಸಾರಿಗೆ ಬಸ್‌ ದರ ಮಾತ್ರ ಸಂಗ್ರಹಿಸುವಂತೆ ಸೂಚನೆ ನೀಡಲಾಗಿತ್ತು. ಇದರಿಂದ ತಮಗೆ ನಷ್ಟವಾಗುತ್ತಿದೆ ಎನ್ನುವ ಕಾರಣಕ್ಕೆ 20-30 ರೂ. ಹೆಚ್ಚುವರಿಯಾಗಿ ಸಂಗ್ರಹಿಸಿರುವುದು ಕಂಡು ಬಂತು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.