ಸೌರ ವಿದ್ಯುತ್‌ ಉತ್ಪಾದನೆಗೆ ಮುಂದಾದ ಕ್ಯಾನ್ಸರ್‌ ಆಸ್ಪತ್ರೆ

Team Udayavani, Dec 7, 2018, 5:09 PM IST

7-december-19.gif

ಹುಬ್ಬಳ್ಳಿ: ಸೌರ ವಿದ್ಯುತ್‌ ಉತ್ಪಾದನೆಗೆ ಸರಕಾರ ಉತ್ತೇಜನ ನೀಡುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡುತ್ತಿದೆ. ಜನರು ಆಸಕ್ತಿ ತೋರುತ್ತಿದ್ದಾರೆ. ಹೆಸ್ಕಾಂ ಅವಲಂಬನೆ ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನವನಗರ ಕ್ಯಾನ್ಸರ್‌ ಆಸ್ಪತ್ರೆ ಟ್ರಸ್ಟ್‌ ಕಳೆದ ಎರಡು ತಿಂಗಳಿಂದ ನವೀಕರಿಸಬಹುದಾದ ಇಂಧನ ಸೌರ ವಿದ್ಯುತ್‌ ಉತ್ಪಾದಿಸುತ್ತಿದೆ.

ಶಸ್ತ್ರ ಚಿಕಿತ್ಸೆ, ಕಿಮೋಥೆರಪಿ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳಿಗೆ ವಿದ್ಯುತ್‌ ಅವಶ್ಯಕತೆ ಇರುವುದರಿಂದ ಕ್ಯಾನ್ಸರ್‌ ಆಸ್ಪತ್ರೆ ಅಧ್ಯಕ್ಷ ವಿಜಯ ಸಂಕೇಶ್ವರ ಅವರ ಸಲಹೆಯನ್ವಯ ಛಾವಣಿ ಮೇಲೆ ಸೌರ ಫ‌ಲಕಗಳನ್ನು ಜೋಡಿಸಿ ವಿದ್ಯುತ್‌ ಉತ್ಪಾದಿಸಿ ಅದನ್ನೇ ಬಳಸಿಕೊಳ್ಳಲಾಗುತ್ತಿದೆ. ಬಾಷ್‌ ಕಂಪನಿಯ ಸೌರ ಫ‌ಲಕಗಳನ್ನು ಅಳವಡಿಸಲಾಗಿದ್ದು, ಒಟ್ಟು 100 ಕಿಲೋ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಸೌರ ವಿದ್ಯುತ್‌ ಬಳಕೆಯಿಂದ ಹೆಸ್ಕಾಂ ವಿದ್ಯುತ್‌ ಬಿಲ್‌ನಲ್ಲಿ ಶೇ.60 ಇಳಿಕೆಯಾಗಿದೆ.

ಇಡೀ ಕಟ್ಟಡದ ಛಾವಣಿ ಮೇಲೆ ಸೌರ ಫ‌ಲಕಗಳನ್ನು ಕೂಡಿಸಲು ಅನುಕೂಲವಾಗುವಂತೆ ಫ್ಯಾಬ್ರಿಕೇಶನ್‌ ಮಾಡಲಾಗಿದ್ದು, ಸದ್ಯಕ್ಕೆ 300ಕ್ಕೂ ಅಧಿಕ ಸೋಲಾರ್‌ ಪ್ಯಾನೆಲ್‌ಗ‌ಳನ್ನು ಜೋಡಿಸಲಾಗಿದೆ. ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಸೌರ ವಿದ್ಯುತ್‌ ಘಟಕ ಆರಂಭಿಸಲಾಗಿದೆ. 50 ಕಿಲೋ ವ್ಯಾಟ್‌ ಸಾಮರ್ಥ್ಯದ ಎರಡು ಇನ್‌ವರ್ಟರ್‌ಗಳನ್ನು ಜೋಡಿಸಲಾಗಿದ್ದು, ಸಿಡಿಲಿನಿಂದ ರಕ್ಷಣೆಗೆ ಅರ್ಥಿಂಗ್‌ ಸ್ಟ್ರಿಪ್‌ ಅಳವಡಿಸಲಾಗಿದೆ.

ನೆಟ್‌ ಮೀಟರಿಂಗ್‌ ಅಳವಡಿಸಿದ್ದರಿಂದ ಉತ್ಪಾದನೆಗೊಂಡ ಹೆಚ್ಚುವರಿ ವಿದ್ಯುತ್‌ ಹೆಸ್ಕಾಂಗೆ ಹೋಗುತ್ತದೆ. ವರ್ಷಕ್ಕೆ 1.5ಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಛಾವಣಿ ಮೇಲೆಯೂ ಸೌರ ಫ‌ಲಕಗಳನ್ನು ಅಳವಡಿಸುವ ಯೋಜನೆಯಿದೆ.

ಆಸ್ಪತ್ರೆ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ| ವಿಜಯ ಸಂಕೇಶ್ವರ ಅವರ ಸಲಹೆಯಂತೆ ಆಸ್ಪತ್ರೆ ಕಟ್ಟಡದ ಛಾವಣಿ ಮೇಲೆ ಸೌರ ಫ‌ಲಕ ಅಳವಡಿಸಿ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ಇದರಿಂದ ಹೆಸ್ಕಾಂ ವಿದ್ಯುತ್‌ ಬಿಲ್‌ನಲ್ಲಿ ಶೇ.60 ಇಳಿಕೆಯಾಗಿದೆ. ಹಾಕಿದ ಬಂಡವಾಳ 3-4 ವರ್ಷಗಳಲ್ಲಿ ಮರಳುವ ನಿರೀಕ್ಷೆಯಿದೆ. ಗೋ ಗ್ರೀನ್‌ ತಂತ್ರಜ್ಞಾನ ಬಗ್ಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಸೌರ ವಿದ್ಯುತ್‌ ಬಗ್ಗೆ ಕೇವಲ ಮಾತನಾಡದೇ ತಮ್ಮ ಕಟ್ಟಡಗಳ ಮೇಲೆ ಅಳವಡಿಸಿಕೊಳ್ಳಲು ಮುಂದಾಗಬೇಕು. ಮುಂದಿನ ದಿನಗಳಲ್ಲಿ ಛಾವಣಿ ಮೇಲೆ ಇನ್ನಷ್ಟು ಸೌರ ಫ‌ಲಕಗಳನ್ನು ಅಳವಡಿಸಿ ಸಾಮರ್ಥ್ಯ ಹೆಚ್ಚಿಸಲಾಗುವುದು.
 ಡಾ| ಮಂಜುಳಾ ಹುಗ್ಗಿ,
 ನವನಗರ ಕ್ಯಾನ್ಸರ್‌ ಆಸ್ಪತ್ರೆ ಆಡಳಿತಾಧಿಕಾರಿ

ಸೌರ ವಿದ್ಯುತ್‌ ಹಾಗೂ ಪವನ ವಿದ್ಯುತ್‌ ಸೇರಿದಂತೆ ನವೀಕರಿಸಬಹುದಾದ ಇಂಧನ ಉತ್ಪಾದನೆಯನ್ನು ಹೆಚ್ಚಿಸುವುದು ಇಂದಿನ ಅವಶ್ಯವಾಗಿದೆ. ಈಗಾಗಲೇ ಸರಕಾರಿ ಆಸ್ಪತ್ರೆಗಳ ಛಾವಣಿ ಮೇಲೆ ಸೌರ ವಿದ್ಯುತ್‌ ಉತ್ಪಾದಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಖಾಸಗಿ ಆಸ್ಪತ್ರೆಗಳು, ಹಾಸ್ಟೆಲ್‌ಗ‌ಳು, ಕಲ್ಯಾಣ ಮಂಟಪಗಳು, ಚಿತ್ರ ಮಂದಿರಗಳು, ಭವನಗಳು, ಮಾಲ್‌ಗ‌ಳಂಥ ಬೃಹತ್‌ ಕಟ್ಟಡಗಳ ಮೇಲೂ ಸೌರ ವಿದ್ಯುತ್‌ ಉತ್ಪಾದನೆ ಆರಂಭಗೊಂಡರೆ ವಿದ್ಯುತ್‌ ವೆಚ್ಚ ತಗ್ಗಿಸಬಹುದಾಗಿದೆ.

ವಿಶ್ವನಾಥ ಕೋಟಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.