ಸರಕು ವಾಹನದಲ್ಲಿ ಜನರ ಒಯ್ಯವುದು ಅಪರಾಧ

Team Udayavani, May 7, 2019, 10:44 AM IST

hubali-03

ಧಾರವಾಡ: ಉದ್ಯೋಗ ಅರಸಿ ಬರುವ ಜನರನ್ನು ಸರಕು ಸಾಗಾಣಿಕೆ ಹಾಗೂ ಕಟ್ಟಡ ಸಾಮಗ್ರಿಗಳ ಸಾಗಾಣಿಕೆ ವಾಹನಗಳಲ್ಲಿ ಕೊಂಡೊಯ್ಯುವುದು ಅಪರಾಧ ಎಂದು ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಡಿಸಿ ದೀಪಾ ಚೋಳನ್‌ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂತಹವರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಚಾಲಕರ-ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖೆಗಳು ಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.

ಸರಕು ವಾಹನದಲ್ಲಿ ಜನರನ್ನು ಸಾಗಿಸುವಾಗ ಯಾವುದೇ ರೀತಿ ಅಪಘಾತವಾದರೆ ತೊಂದರೆಗೀಡಾದವರಿಗೆ ಯಾವುದೇ ರೀತಿಯ ವಿಮೆ, ಪರಿಹಾರ ಸಿಗಲ್ಲ. ಆದ್ದರಿಂದ ಈ ನಿಯಮ ಬಾಹಿರ ಪ್ರಯಾಣವನ್ನು ನಿರ್ಬಂಧಿಸಬೇಕು ಎಂದರು.

ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳಿಂದ ಕೂಡಿದ ತಾಲೂಕು ಮಟ್ಟದ ರಸ್ತೆ ಸುರಕ್ಷತಾ ಸಮಿತಿ ರಚಿಸಬೇಕು. ಪ್ರತಿ ಗ್ರಾಮ, ಬಸ್‌ನಿಲ್ದಾಣ, ರೈಲು ನಿಲ್ದಾಣ, ಪಂಚಾಯಿತಿ ಆವರಣ, ಸಮುದಾಯ ಭವನಗಳು ಸೇರಿದಂತೆ ಹೆಚ್ಚು ಜನಸಂದಣಿ ಇರುವ, ಕೂಲಿಕಾರ್ಮಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಈ ಕುರಿತು ಜನಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಬೀದಿನಾಟಕ, ಗೋಡೆಬರಹ, ಪೋಸ್ಟರ್‌, ವಿಡಿಯೋಗಳ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡಿ, ಸರಕು ಸಾಗಾಣಿಕೆ ವಾಹನದಲ್ಲಿನ ಪ್ರಯಾಣ ಕ್ಷೇಮಕರವಲ್ಲ ಎಂಬುದನ್ನು ಜನರಿಗೆ ಮನದಟ್ಟು ಮಾಡಬೇಕು ಎಂದರು.

ಇಂತಹ ನಿಯಮ ಬಾಹಿರ ಅಪಾಯಕರವಾದ ಜನರ ಸಾಗಾಣಿಕೆ ಕುರಿತು ಮಾಹಿತಿ ನೀಡಲು ಪ್ರತ್ಯೇಕ ದೂರವಾಣಿ ಮತ್ತು ವಾಟ್ಸ್‌ಆ್ಯಪ್‌ ನಂಬರನ್ನು ಸಾರ್ವಜನಿಕರಿಗೆ ನೀಡಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಿಇಒ ಡಾ| ಬಿ.ಸಿ.ಸತೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧಿಧೀಶ ಆರ್‌.ಎಸ್‌. ಚಿಣ್ಣನ್ನವರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂಗೀತಾ ಜಿ. ಮಹಾನಗರ ಉಪ ಪೊಲೀಸ್‌ ಆಯುಕ್ತ ಡಾ|ಶಿವಕುಮಾರ ಗುಣಾರೆ, ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ರವೀಂದ್ರ ಕವಲಿ ಮಾತನಾಡಿದರು. ಡಿವೈಎಸ್‌ಪಿ ಗುರು ಮತ್ತೂರು, ಕಾರ್ಮಿಕ ಇಲಾಖೆ ಅಧಿಕಾರಿ ತರಣಮ್‌ ಬಂಗಾಲಿ, ಕಾರ್ಖಾನೆ ಮತ್ತು ಬಾಯ್ಲರ್‌ ಇಲಾಖೆ ಉಪ ನಿರ್ದೇಶಕ ರಾಜೇಶ, ಸಾ.ಶಿ. ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ ಇದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.