Udayavni Special

ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಚಾಲನೆ

ಮಕ್ಕಳ ರಕ್ಷಣಾ ಆಯೋಗದ ಅನುದಾನ! ­ಮೊದಲ ಹಂತದಲ್ಲಿ 10 ಜಿಲ್ಲೆಗಳಲ್ಲಿ ಅನುಷ್ಠಾನ

Team Udayavani, Feb 14, 2021, 3:29 PM IST

child friendly court

ಧಾರವಾಡ: ರಾಜ್ಯದಲ್ಲಿ ಪೋಕೊÕ ಕಾಯ್ದೆ ಸೇರಿದಂತೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ರಾಜ್ಯ  ಮಕ್ಕಳ ರಕ್ಷಣಾ ಆಯೋಗದ ಅನುದಾನದಲ್ಲಿ ನಗರದ ಸಿವಿಲ್‌ ನ್ಯಾಯಾಲಯ ಆವರಣದಲ್ಲಿ ಸಿದ್ಧಗೊಳಿಸಿರುವ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಶನಿವಾರ ಚಾಲನೆ ದೊರೆತಿದೆ.

ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಡಿ ಮೊದಲ ಹಂತವಾಗಿ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಪೂರೈಸಲಾಗುತ್ತಿದೆ. ಅದರಂತೆ ಧಾರವಾಡ ಸಿವಿಲ್‌ ನ್ಯಾಯಾಲಯ ಆವರಣದಲ್ಲಿ ಸಿದ್ಧಗೊಂಡಿರುವ ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ಸಂತ್ರಸ್ತ ಮಗುವಿಗೆ ಪ್ರತ್ಯೇಕ ಕೊಠಡಿ, ಆರೋಪಿತನಿಗೆ ಬೇರೆ ಕೊಠಡಿ, ಮಕ್ಕಳ ಶೌಚಾಲಯ, ಅಡುಗೆ ಮನೆ, ಅಗತ್ಯವಿದ್ದಲ್ಲಿ ಮಗುವಿನ ಪಾಲಕರಿಗೆ ರಾತ್ರಿ ವೇಳೆ ಉಳಿಯಲು ಕೊಠಡಿ, ಕಟ್ಟಡ ಆವರಣದಲ್ಲಿ ಮಕ್ಕಳಿಗಾಗಿ ಆಟದ ಮೈದಾನ, ಮಕ್ಕಳ ಪಾಲಕರಿಗೆ ಪ್ರತ್ಯೇಕ ಕೊಠಡಿ, ವಿಡಿಯೋ ಕಾನ್ಪರೆನ್ಸ್‌ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಮಕ್ಕಳಿಗಾಗಿ ಗ್ರಂಥಾಲಯ, ವರ್ಣಮಾಲೆ ಅಕ್ಷರಗಳಿರುವ ಚಾಪೆ (ಮ್ಯಾಟ್‌)ಗಳ ವ್ಯವಸ್ಥೆ, ನ್ಯಾಯಾಧೀಶರ ಕೋರ್ಟ್‌ ಹಾಲ್‌ ಹಾಗೂ ನ್ಯಾಯಾ ಧೀಶರಿಗೆ ಪ್ರತ್ಯೇಕ ಕೊಠಡಿ, ನಿರ್ವಹಣೆಗೆ ಸಿಬ್ಬಂದಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ಮಕ್ಕಳ ಸ್ನೇಹಿ ನ್ಯಾಯಾಲಯವನ್ನು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಧಾರವಾಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಶ್ರೀನಿವಾಸ ಹರೀಶ ಕುಮಾರ ಅವರು ಉದ್ಘಾಟಿಸಿದರು. ನಂತರ ಪ್ರತಿ ಸೌಲಭ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು.

ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ, 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ಮತ್ತು ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಂ. ಪಂಚಾಕ್ಷರಿ, ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌.ಎಸ್‌. ಚಿಣ್ಣನ್ನವರ, ಸಿಜೆಎಂ ನ್ಯಾ| ಸಂಜಯ ಗುಡಗುಡಿ, ಧಾರವಾಡ ವಕೀಲರ ಸಂಘದನ ಅಧ್ಯಕ್ಷ ಬಿ.ಎಸ್‌. ಘೋಡಸೆ, ರಾಜ್ಯ ವಕೀಲರ ಪರಿಷತ್‌ ಸದಸ್ಯರಾದ ವಿ.ಡಿ. ಕಾಮರಡ್ಡಿ,ಆನಂದ ಮಗದುಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿ.ಎ. ಪಾಟೀಲ, ಲೋಕೊಪಯೋಗಿ ಇಲಾಖೆ ಕಾರ್ಯಪಾಲಯಕ ಅಭಿಯಂತ ಎಸ್‌.ಬಿ. ಚೌಡನ್ನವರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ವಿ.ಎನ್‌. ಪಾಟೀಲ, ಸಹಾಯಕಅಭಿಯಂತ ವಿಜಯಮಹಾಂತೇಶ ಮೊದಲಾದವರಿದ್ದರು.

ಟಾಪ್ ನ್ಯೂಸ್

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್ ನಲ್ಲಿ ಕೋವಿಡ್ ಪ್ರಕರಣಗಳ ಏರಿಕೆ..!

ಕೊವ್ಯಾಕ್ಸಿನ್‌ ಲಸಿಕೆ ಶೇ 81ರಷ್ಟು ಪರಿಣಾಮಕಾರಿ : ಭಾರತ್ ಬಯೋಟೆಕ್

sslc-examination-there-will-be-small-changes-in-question-paper-pattern

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷಾ ಮಾದರಿಯಲ್ಲಿ ಕೊಂಚ ಬದಲಾವಣೆ : ಅನ್ಬು ಕುಮಾರ್

ಯುವರತ್ನದ ‘ಪಾಠಶಾಲಾ’ ಹಾಡು ರಿಲೀಸ್ : ಹಾಡಿನಲ್ಲಿ ಕಾಣಿಸಿಕೊಂಡ ಅಣ್ಣಾವ್ರು..!

Good news for Vi users! Vodafone Idea subscribers to get health insurance benefit on mobile recharges

ವೊಡಾಫೋನ್ ಐಡಿಯಾ ರಿಚಾರ್ಜ್ ನಲ್ಲಿ ಸಿಗಲಿದೆ ಹೆಲ್ತ್ ಇನ್ಸುರೆನ್ಸ್..?!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

DCM Govind Karajola

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ : ಕಾರಜೋಳ

MP Ramesh Jigajinagai

ರೈಲ್ವೆ ಯೋಜನೆಗೆ 36 ಸಾವಿರ ಕೋಟಿ ರೂ.

Tanveer Sair Protest

ತನ್ವೀರ್‌ ತೇಜೋವಧೆಗೆ ಆಕ್ರೋಶ

MUST WATCH

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

udayavani youtube

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

udayavani youtube

ಹಳೆಯ ವೃತ್ತ ಪತ್ರಿಕೆಯಿಂದ ಶಿವಾಜಿ ಮಹಾರಾಜರ ಕಲಾಕೃತಿ:

ಹೊಸ ಸೇರ್ಪಡೆ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಈ ಬಾರಿ ಮಲೆ ಮಹದೇಶ್ವರ ಬೆಟ್ಟದ ಶಿವರಾತ್ರಿ ಜಾತ್ರೆ ಸರಳ : ಹೊರಗಿನವರಿಗೆ ಪ್ರವೇಶ ಇಲ್ಲ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

ಲಂಚ ಸ್ವೀಕಾರ : ಕೊಪ್ಪಳ BEO ಉಮಾದೇವಿ ಸೊನ್ನದ್, SDA ಅರುಂಧತಿ ಎಸಿಬಿ ಬಲೆಗೆ

DCM Govind Karajola

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ : ಕಾರಜೋಳ

MP Ramesh Jigajinagai

ರೈಲ್ವೆ ಯೋಜನೆಗೆ 36 ಸಾವಿರ ಕೋಟಿ ರೂ.

Tanveer Sair Protest

ತನ್ವೀರ್‌ ತೇಜೋವಧೆಗೆ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.