ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ: ಸಿಎಂ
Team Udayavani, Dec 4, 2022, 10:15 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಡಿಸೆಂಬರ್ನಲ್ಲಿ ಈ ಯಾತ್ರೆಯನ್ನು ಮತ್ತಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷವಾಗಿರುವುದರಿಂದ ಪ್ರತಿ ಚುನಾವಣೆಯಂತೆ ಜನರ ಬಳಿ ಹೋಗುತ್ತಿದ್ದೇವೆ. ಈಗಾಗಲೇ ನಮ್ಮ ಜನಸಂಕಲ್ಪ ಯಾತ್ರೆಯು ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ ಮತ್ತು ಮುಂಬೈ ಕರ್ನಾಟಕ ಭಾಗದ ಹಲವು ಕಡೆ ನಡೆದಿದೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ ಅವರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದರು.
ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ “ಜಾಯಿನ್ ಪಿಎಫ್ಐ’ ಬರಹದ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ