Mysuru: ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ: ಬಿ.ವೈ. ವಿಜಯೇಂದ್ರ
ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಕೆಶಿ
Team Udayavani, Oct 9, 2024, 4:55 PM IST
ಹುಬ್ಬಳ್ಳಿ: ಮುಂದಿನ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವವರೇ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವರು ಸಿದ್ದರಾಮಯ್ಯ ಅವರು ಮುಂದಿನ ಐದು ವರ್ಷಗಳ ಕಾಲ ಇರುತ್ತಾರೆ ಎನ್ನುವವರೇ ಸಿಎಂ ಆಕಾಂಕ್ಷಿಗಳಾಗಿದ್ದಾರೆ. ದಸರಾ ನಂತರ ಸಿಎಂ ಬದಲಾವಣೆ ನಿಶ್ಚಿತ ಎಂದರು.
ಸಿಎಂ ಹಗರಣಗಳ ಸರಮಾಲೆಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಜಾತಿ ಗಣತಿ ಎಂದ ದಾಳ ಉರುಳಿಸಿದ್ದಾರೆ ಎಂದು ಟೀಕಿಸಿದರು.
ಪಕ್ಷದ ಹೈಕಮಾಂಡ್‌ಗೆ ಮಂಕು ಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ ಹೊರಗೆ ಹೋದವರು ಈ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದರು.
ರಾಯಣ್ಣ ಚನ್ನಮ್ಮ ಬ್ರಿಗೇಡ್ ಬಗ್ಗೆ ನಾನು ಏನನ್ನು ಹೇಳಲು ಸಿದ್ಧವಿಲ್ಲ. ಅದು 20-20 ಮ್ಯಾಚ್ ಇದ್ದ ಹಾಗೆ. ನಾನು ಟೆಸ್ಟ್ ಆಡಲು ಬಂದಿದ್ದೇನೆ. ಪಕ್ಷದ ಹಿರಿಯರ ಹೇಳಿಕೆಗಳಿಕೆ ಪ್ರತಿಕ್ರಿಯಿಸಲ್ಲ. ನಾನು ನಾಯಕನಾಗಿ ಬಂದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಬಂದಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.