Udayavni Special

ವಲಸೆ ಕಾರ್ಮಿಕರಿಗೆ ಸಮುದಾಯ ಭವನಗಳೇ ನೆಲೆ

ಹೆಚ್ಚುವರಿ ಏಳು ವಸತಿ ಕೇಂದ್ರಗಳ ಆರಂಭಕ್ಕೆ ಮುಂದಡಿ | ಸಮೀಕ್ಷೆಯಂತೆ ಹೆಚ್ಚಿನ ಕಾರ್ಮಿಕರಿರುವಲ್ಲಿ ಸ್ಥಾಪನೆ

Team Udayavani, Sep 20, 2021, 3:31 PM IST

cfgdfr5r

ಹೇಮರಡ್ಡಿ ಸೈದಾಪುರ

ಹುಬ್ಬಳ್ಳಿ: ಕೆಲಸ ಅರಸಿ ದೂರದ ಊರುಗಳಿಂದ ಬರುವ ಕಾರ್ಮಿಕರಿಗೆ ಸಮರ್ಪಕ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲು ಮಹಾನಗರದ ವಿವಿಧೆಡೆ ಹೆಚ್ಚುವರಿಯಾಗಿ ಏಳು ಕಡೆಗಳಲ್ಲಿ ಕೇಂದ್ರಗಳ ಆರಂಭಕ್ಕೆ ಪಾಲಿಕೆ ಮುಂದಾಗಿದೆ. ವಲಸೆ ಕಾರ್ಮಿಕರ ದಟ್ಟಣೆ ಕುರಿತು ನಡೆಸಿದ ಸಮಿಕ್ಷೆ ಪ್ರಕಾರ ಸ್ಥಳ ಗುರುತಿಸಿದ್ದು, ಪಾಳು ಬಿದ್ದಿದ್ದ ಪಾಲಿಕೆ ಸಮುದಾಯ ಭವನಗಳನ್ನು ಈ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ.

ವಿವಿಧ ಕೆಲಸಗಳನ್ನು ಹುಡುಕಿಕೊಂಡು ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಕಾರ್ಮಿಕರು ವಾಣಿಜ್ಯ ನಗರಿಗೆ ಆಗಮಿಸುತ್ತಾರೆ. ಆದರೆ ದೂರದಿಂದ ಬರುವ ಬಡ ಕಾರ್ಮಿಕರು ನಗರ ಪ್ರದೇಶಗಳಲ್ಲಿ ವಸತಿ ಸೌಲಭ್ಯ ಹೊಂದುವುದು ಕಷ್ಟ. ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಫುಟ್‌ಪಾತ್‌, ಪಾಲಿಕೆ ಉದ್ಯಾನಗಳದಂತಹ ಸ್ಥಳಗಳನ್ನು ಆಶ್ರಯಿಸಬೇಕಾಗುತ್ತದೆ. ಹೀಗಾಗಿ ಇಂತಹ ಕಾರ್ಮಿಕರ ಅನುಕೂಲಕ್ಕಾಗಿ ಮಹಾನಗರ ಪಾಲಿಕೆ ದೀನದಯಾಳ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಎರಡು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಯೋಜನೆ ನಿಯಮದ ಪ್ರಕಾರ ಮಹಾನಗರದ ಜನಸಂಖ್ಯೆಗೆ ಅನುಗುಣವಾಗಿ ಒಂದು ಲಕ್ಷ ಜನಸಂಖ್ಯೆಗೆ ಒಂದು ಕೇಂದ್ರ ಇರಬೇಕು. ಆದರೆ 2011 ಜನಸಂಖ್ಯೆಗೆ ತಕ್ಕಂತೆ ಇನ್ನೂ ಏಳು ಕೇಂದ್ರ ಆರಂಭಕ್ಕೆ ಮುಂದಾಗಿದೆ.

ಸಮುದಾಯ ಭವನಗಳ ಬಳಕೆ: ಈಗಾಗಲೇ ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ತಲಾ ಒಂದು ವಸತಿ ಕೇಂದ್ರಗಳಿವೆ. ಇದರೊಂದಿಗೆ ಕೋರ್ಟ್‌ ನಿರ್ದೇಶನದ ಪ್ರಕಾರ ಏಳು ಕೇಂದ್ರಗಳ ಸ್ಥಾಪನೆಗೆ ಪಾಲಿಕೆ ಮುಂದಾಗಿದೆ. ಇಲಾಖೆ ನಡೆಸಿದ ಸಮೀಕ್ಷೆ ಪ್ರಕಾರ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಕೇಂದ್ರ ಸ್ಥಾಪಿಸಲು ಮುಂದಾಗಿದೆ. ಹೊಸದಾಗಿ ಧಾರವಾಡದಲ್ಲಿ-2, ಹುಬ್ಬಳ್ಳಿಯಲ್ಲಿ-5 ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಪಾಲಿಕೆ ಒಡೆತನದ ಸಮುದಾಯ ಭವನಗಳನ್ನು ಗುರುತಿಸಲಾಗಿದೆ. ಪಾಳು ಬಿದ್ದಿರುವ, ಬಳಕೆಯಾಗದ ಭವನಗಳನ್ನು ಪ್ರಮುಖವಾಗಿ ಕೇಂದ್ರೀಕರಿಸಲಾಗಿದೆ.

ವಲಯ ಕಚೇರಿ-1,2,6,7,8,10,11ರಲ್ಲಿ ಸಮುದಾಯ ಭವನಗಳನ್ನು ಗುರುತಿಸಲಾಗಿದೆ. ಏಳು ಕೇಂದ್ರಗಳಲ್ಲಿ 164 ಕಾರ್ಮಿಕರಿಗೆ ತಾತ್ಕಾಲಿಕ ವಸತಿ ನೀಡಬಹುದಾಗಿದೆ. ಸರಕಾರದಿಂದ ಏಳು ಕೇಂದ್ರ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆಯಲಾಗಿದ್ದು, ಕೆಲ ಸಮುದಾಯ ಭವನಗಳ ದುರಸ್ತಿ ಸೇರಿದಂತೆ ಸುಣ್ಣ, ಬಣ್ಣ, ಕಾಯಂ ವ್ಯವಸ್ಥೆಗಳಾದ ಬೆಡ್‌, ಟೇಬಲ್‌ ಇನ್ನಿತರೆ ಸಾಮಗ್ರಿಗಳು ಹಾಗೂ ನಿರ್ವಹಣೆಗೆ ಎನ್‌ಜಿಓ ಸಂಸ್ಥೆಗಳನ್ನು ಗುರುತಿಸುವ ಕೆಲಸಕ್ಕೆ ಪಾಲಿಕೆ ಆಯುಕ್ತರು ಅನುಮೋದನೆ ನೀಡಿದ್ದಾರೆ. ಮೂರು ತಿಂಗಳಲ್ಲಿ ಈ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳಲಿವೆ. ಈ ಕಾರ್ಯಕ್ಕಾಗಿ 1 ಕೋಟಿರೂ.ಮೀಸಲಿರಿಸಲಾಗಿದೆ. ಪುರುಷ-ಮಹಿಳಾ ಕಾರ್ಮಿಕರ ಸಂಖ್ಯೆಗನುಗುಣವಾಗಿ ಪ್ರತ್ಯೇಕ ಕೇಂದ್ರದ ಚಿಂತನೆ ಅಧಿಕಾರಿಗಳಲ್ಲಿದೆ. ಯಾವುದಕ್ಕೂ ಬಳಕೆಯಾಗದೆ ಬಿದ್ದಿರುವ ಸಮುದಾಯ ಭವನಗಳು ಈ ಕೇಂದ್ರದ ಮೂಲಕವಾದರೂ ಸದ್ಬಳಕೆಯಾಗಲಿವೆ. ಈ ಕೇಂದ್ರಗಳಲ್ಲಿ ವಸತಿ ಪಡೆಯಲು ಒಂದಿಷ್ಟು ಮಾನದಂಡಗಳಿವೆ. ದೂರುದ ಊರುಗಳಿಂದ ಬಂದಿರಬೇಕು. ಇಲ್ಲಿ ಎಲ್ಲಿಯಾದರೂ ಕೆಲಸ ನಿರ್ವಹಿಸುವುದು ಪ್ರಮುಖವಾಗಿದೆ. ಓರ್ವ ಕಾರ್ಮಿಕ ಗರಿಷ್ಠ 6 ತಿಂಗಳವರೆಗೆ ವಸತಿ ಸೌಲಭ್ಯ ಪಡೆಯಹುದಾಗಿದೆ.

ಟಾಪ್ ನ್ಯೂಸ್

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

264 ಮಂದಿಗೆ ಸೋಂಕು : 10 ದಿನಗಳಿಂದ 500ಕ್ಕಿಂತ ಕಮ್ಮಿ ಕೇಸ್‌

nayi

ಸಿಸಿ ಕ್ಯಾಮರಾ, ಸಾಮಾಜಿಕ ಜಾಲತಾಣಗಳಿಂದ ನಾಯಿಮರಿ ಪತ್ತೆ!

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.