ಭೋವಿ ಸಮಾಜದ ಬೆಳವಣಿಗೆಗೆ ಸಹಕಾರ; ಜಗದೀಶ ಶೆಟ್ಟರ

ಕನ್ನಡ, ಮರಾಠಿ, ಹಿಂದಿ ಇತರೆ ಭಾಷೆಗೆ ಪ್ರಾತಿನಿಧ್ಯ ನೀಡಬೇಕು

Team Udayavani, Dec 22, 2022, 3:42 PM IST

ಭೋವಿ ಸಮಾಜದ ಬೆಳವಣಿಗೆಗೆ ಸಹಕಾರ; ಜಗದೀಶ ಶೆಟ್ಟರ

ಹುಬ್ಬಳ್ಳಿ: ಭೋವಿ ಸಮಾಜದ ಬೆಳವಣಿಗೆಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ. ಸಮಾಜ ಇನ್ನಷ್ಟು ಬೆಳವಣಿಗೆಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಭವನದಲ್ಲಿ ಬುಧವಾರ ಜಿಲ್ಲಾ ಭೋವಿ ನೌಕರರ ಸಂಘ 2023ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆ ಹಾಗೂ ಸಿದ್ದರಾಮೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಸಮಾಜಕ್ಕೆ ನಮ್ಮ ಪಕ್ಷ ಹಾಗೂ ಸರಕಾರ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸಮಾಜದ ಸಂಘಟನಾ ಶಕ್ತಿ ಇಂತಹ ಕಾರ್ಯಕ್ರಮಗಳಿಂದ ಸಾಧ್ಯ. ಭೋವಿ ಸಮಾಜ ಸಂಘಟಿತ ಸಮಾಜವಾಗಿ ಬೆಳೆಯುತ್ತಿದೆ. ಸಮಾಜದ ನೌಕರರು ಸಮಾಜ ಒಗ್ಗೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನನ್ನ ಗೆಲುವಿನಲ್ಲಿ ಸಮಾಜದ ಋಣ-ಬೆಂಬಲ ದೊಡ್ಡದಿದೆ ಎಂದರು.

ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಚೇತನ ಹಿರೆಕೆರೂರು ಹಾಗೂ ಚಂದ್ರಿಕಾ ಮೇಸ್ತ್ರಿ ಗೆಲುವು ಸಮಾಜದ ಶಕ್ತಿ ತೋರುತ್ತದೆ. ಸಮಾಜದ ಪ್ರತಿಭೆಗಳು ಇತರೆ ಕ್ಷೇತ್ರಗಳಲ್ಲಿ ತೊಡಗಿಕೊಳ್ಳಬೇಕು. ನೌಕರರ ಸಂಘ ಪ್ರತಿಭೆಗಳ ಬೆಳವಣಿಗೆಗೆ ಪೂರಕವಾಗಿ ಕೆಲಸ ಹಾಗೂ ಚಿಂತನೆ ಮಾಡುವಂತಾಗಬೇಕು ಎಂದರು.

ಪಾಲಿಕೆ ಸದಸ್ಯೆ ಚಂದ್ರಕಾ ಮೇಸ್ತ್ರಿ ಮಾತನಾಡಿ, ಸಮಾಜದಲ್ಲಿ ಒಳ ಪಂಗಡಗಳ ಆಧಾರದ ಭಿನ್ನತೆ ಬೇಡ. ಎಲ್ಲರೂ ಭೋವಿ ಸಮಾಜ ಎನ್ನುವ ಭಾವನೆ ಮೂಡಬೇಕು. ನಮ್ಮ ಮೊದಲ ಭಾಷೆ ತೆಲುಗು. ನಂತರ ಕನ್ನಡ, ಮರಾಠಿ, ಹಿಂದಿ ಇತರೆ ಭಾಷೆಗೆ ಪ್ರಾತಿನಿಧ್ಯ ನೀಡಬೇಕು ಎಂದರು. ಉದ್ಯಮಿ ರಮೇಶ ಮಹಾದೇವಪ್ಪನವರ ಮಾತನಾಡಿ, ಸಮಾಜದ ಸಾಧಕರನ್ನು ಗುರುತಿಸುವುದು, ಪ್ರತಿಭೆಗಳಿಗೆ ನೆರವು ಇಂತಹ ಕಾರ್ಯಗಳಿಗೆ ಇಡೀ ಸಮಾಜ ಸ್ಪಂದಿಸಬೇಕು ಎಂದರು.

ಭೋವಿ ಗುರುಪೀಠದ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನಮಠ ಇಮ್ಮಡಿ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷ ರವಿ ಗುಂಜೀಕರ, ವಾಕರಸಾ ಪ.ಜಾ ಮತ್ತು ಪಪಂ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್‌.ಆರ್‌. ಅದರಗುಂಚಿ, ನಿವೃತ್ತ ಪೊಲೀಸ್‌ ಅಧಿ ಕಾರಿ ಯಂಕಪ್ಪ ಹಿರೇಮನಿ ಅವರಿಗೆ ಸಿದ್ದರಾಮೇಶ್ವರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ 2023ನೇ ಸಾಲಿನ ಕ್ಯಾಲೆಂಡರ್‌ ಬಿಡುಗಡೆ ಮಾಡಿದರು.

ಪಾಲಿಕೆ ಸದಸ್ಯರಾದ ಮಹಾದೇವ ನರಗುಂದ, ಚೇತನ ಹಿರೆಕೆರೂರು, ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ ಕೃಷ್ಣಾಪೂರ, ಎಸ್‌.ಎಚ್‌.ನರೇಗಲ್ಲ, ಡಿ.ಹನುಮಂತಪ್ಪ, ಪ್ರಹ್ಲಾದ ಗೆಜ್ಜಿ, ಆನಂದ ಬೇವಿನಕಟ್ಟಿ, ಸುಭಾಸ ಅಳವುಂಡಗಿ, ಕೃಷ್ಣ ಉಣಕಲ್ಲ, ವಿಜಯ ಗುಂಜಿಕರ ಇನ್ನಿತರರಿದ್ದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.