ಮದ್ಯ ಮಾರಾಟ ಮೇಲೆ ಕೋವಿಡ್ ಕರಿನೆರಳು!

ಕಳೆದ ನಾಲ್ಕು ತಿಂಗಳಲ್ಲಿ ಶೇ.30 ಮಾರಾಟ ಕಡಿaಮೆ

Team Udayavani, Aug 21, 2020, 2:54 PM IST

ಮದ್ಯ ಮಾರಾಟ ಮೇಲೆ ಕೋವಿಡ್ ಕರಿನೆರಳು!

ಹುಬ್ಬಳ್ಳಿ: ಕೋವಿಡ್ ಮಹಾಮಾರಿ ಮದ್ಯ ಮಾರಾಟದ ಮೇಲೂ ಬಹಳಷ್ಟು ಪರಿಣಾಮ ಬೀರಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಕುಡಿಯುವವರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದ್ದು, ಲಾಕ್‌ಡೌನ್‌ ಸಡಿಲಿಕೆ ನಂತರವೂ ಮದ್ಯ ಮಾರಾಟದಲ್ಲಿ ಸಾಕಷ್ಟು ಕುಸಿತ ಕಂಡಿದೆ ಅಬಕಾರಿ ಇಲಾಖೆಯ ಅನುಸಾರ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಏಪ್ರಿಲ್‌ನಿಂದ ಜುಲೈವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ ಶೇ. 30 ಮದ್ಯ ಮಾರಾಟ ಕಡಿಮೆಯಾಗಿದೆ.

ಅದರಲ್ಲೂ ಮಹಿಳೆಯರು, ಯುವತಿಯರು, ಪುರುಷರು, ಯುವಕರೆನ್ನದೆ ಬಹುತೇಕರ ಅಚ್ಚುಮೆಚ್ಚಿನ ಬಿಯರ್‌ ಮಾರಾಟದಲ್ಲಿ ತೀವ್ರ ಕುಸಿತ ಕಂಡು ಬಂದಿದೆ. ಶೇ.60 ಕಡಿಮೆಯಾಗಿದೆ. ಮದ್ಯ ಸೇವಿಸುವವರಿಗೆ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹಾನಿ ಮಾಡಲಿದೆ ಎನ್ನುವ ಭಯವೂ ಮದ್ಯ ಮಾರಾಟಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

2019ರಲ್ಲಿ ಏಪ್ರಿಲ್‌ನಿಂದ ಜುಲೈ ತಿಂಗಳವರೆಗೆ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಿಂದ ಸರಬರಾಜು ಆಗುವ ಐಎಂಎಲ್‌ನ ಎಲ್ಲ ಬಗೆಯ ಮದ್ಯವು 4,98,073 ಬಾಕ್ಸ್‌ ಮಾರಾಟವಾಗಿತ್ತು. ಆದರೆ 2020ರಲ್ಲಿ ಇದೇ ಅವಧಿಯಲ್ಲಿ 3,46,915 ಬಾಕ್ಸ್‌ ಮಾತ್ರ ಮಾರಾಟವಾಗಿದೆ. ಅಂದರೆ ಕಳೆದ ವರ್ಷಕ್ಕೆಹೋಲಿಸಿದರೆ 1,51,158 ಬಾಕ್ಸ್‌ ಕಡಿಮೆಯಾಗಿದೆ. ಇದು ಶೇ. 30 ಮಾರಾಟ ಕುಸಿತ ಕಂಡಿದೆ. ಕಳೆದ ವರ್ಷ ಈ ಅವಧಿಯಲ್ಲಿ ಆದಾಯ ಸಂಗ್ರಹವು 387.54 ಕೋಟಿ ರೂ. ಆಗಿದ್ದರೆ, ಈ ವರ್ಷ 284.42 ಕೋಟಿ ರೂ.ದಷ್ಟಾಗಿದೆ. ಅಂದರೆ 103.12 ಕೋಟಿ ರೂ.ದಷ್ಟು ಕಡಿಮೆಯಾಗಿದ್ದು, ಶೇ.26 ಕುಸಿತವಾಗಿದೆ.

ಮದ್ಯ ಮಾರಾಟದಿಂದ ಜಿಲ್ಲೆಯಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ ಅಂದರೆ 2019ರ ಏಪ್ರಿಲ್‌ನಿಂದ 2020ರ ಮಾರ್ಚ್‌ವರೆಗೆ 1,131.88 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಈ ವರ್ಷ ಏಪ್ರಿಲ್‌ನಿಂದ ಜುಲೈ ಅಂತ್ಯದವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ 284.42ಕೋಟಿ ರೂ. ಮಾತ್ರ ಸಂಗ್ರಹವಾಗಿದೆ. ಅದೇ ರೀತಿ 2019ರ ಏಪ್ರಿಲ್‌ನಿಂದ ಜುಲೈವರೆಗೆ ಬಿಯರ್‌ ಮಾರಾಟವು 2,56,213 ಬಾಕ್ಸ್‌ ಆಗಿತ್ತು. ಆದರೆ 2020ರ ಅವಧಿಯಲ್ಲಿ ಪಾತಾಳಕ್ಕಿಳಿದಿದೆ. ಕೇವಲ1,01,825 ಬಾಕ್ಸ್‌ಗಳು ಮಾತ್ರ ಮಾರಾಟವಾಗಿವೆ. ಶೇ.60 ಕುಸಿದಿದೆ. ಕೊರೊನಾ ವೈರಸ್‌ ಮಹಾಮಾರಿ ನಿಮಿತ್ತ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ಮದ್ಯ ಮಾರಾಟ ಸಂಪೂರ್ಣ ನಿರ್ಬಂಧಿಸಲಾಗಿತ್ತು. ನಂತರ ಸರಕಾರವು ಲಾಕ್‌ಡೌನ್‌ದಲ್ಲಿ ಸ್ವಲ್ಪ ಸಡಿಲಿಕೆ ಮಾಡಿದ್ದರಿಂದ ಮೇ ತಿಂಗಳಲ್ಲಿ ಶೇ.25 ಮಾತ್ರ ಮಾರಾಟವಾಗಿತ್ತು. ತದನಂತರದ ದಿನಗಳಲ್ಲೂ ಹೇಳಿಕೊಳ್ಳುವಷ್ಟು ಮದ್ಯ ಮಾರಾಟವಾಗಿಲ್ಲ.

ಆದಾಯ ಸಂಗ್ರಹದಲ್ಲಿ ಭಾರಿ ಕುಸಿತ : ಸರಕಾರ ಈ ವರ್ಷ ಬಜೆಟ್‌ನಲ್ಲಿ 22,700 ಕೋಟಿ ರೂ. ಅಬಕಾರಿ ಆದಾಯ ಸಂಗ್ರಹದ ಗುರಿ ಹೊಂದಿದೆ. ಆದರೆ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳ ಅವಧಿಯಲ್ಲಿಯೇ ಅಬಕಾರಿ ಆದಾಯ ಸಂಗ್ರಹದಲ್ಲಿ ಭಾರಿ ಕುಸಿತವುಂಟಾಗಿದೆ. ಹೀಗಾಗಿ ಸರಕಾರ ಈ ವರ್ಷ ಅಬಕಾರಿ ಇಲಾಖೆಯಿಂದ ನಿರೀಕ್ಷೆ ಮಾಡಿದ್ದ ಆದಾಯ ಸಂಗ್ರಹದಲ್ಲೂ ಭಾರಿ ಕಡಿತವಾಗುವ ಲಕ್ಷಣಗಳಿವೆ ಎನ್ನುತ್ತಾರೆ ಅಬಕಾರಿ ಇಲಾಖೆ ಹಿರಿಯ ಅಧಿಕಾರಿಗಳು

ಪಾರ್ಸಲ್‌ಗೆ ಬಹುತೇಕ ಜನರ ಹಿಂದೇಟು : ಲಾಕ್‌ಡೌನ್‌ ಸಡಿಲಿಕೆ ನಂತರದಲ್ಲಿ ಕೌಂಟರ್‌ ಸೇಲ್‌ಗೆ ಮಾತ್ರ ಅವಕಾಶ ನೀಡಿದ್ದು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳಿಗೆ ಅವಕಾಶ ನೀಡಿಲ್ಲ. ಹೀಗಾಗಿ ಇದು ಕೂಡ ಮದ್ಯ ಮಾರಾಟ ಕಡಿಮೆಯಾಗಲು ಕಾರಣವಾಗಿದೆ ಎನ್ನಲಾಗಿದೆ. ಬಾರ್‌ಗಳು ಬಂದ್‌ ಆಗಿರುವುದರಿಂದ ಬಹುತೇಕರು ಪಾರ್ಸಲ್‌ ತೆಗೆದುಕೊಂಡು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಗ್ರಾಹಕರ ಕೊರತೆಯಿಂದ ಕೆಲ ಮದ್ಯಗಳನ್ನು ಕೋಲ್ಡ್‌ ಸ್ಟೋರೇಜ್‌ ಮಾಡಲು ಅಂಗಡಿಕಾರರು ಹಿಂದೇಟು ಹಾಕುತ್ತಿದ್ದಾರೆ ಎನ್ನುತ್ತಾರೆ ಅಬಕಾರಿ ಇಲಾಖೆ ಅಧಿಕಾರಿಗಳು

ಏಪ್ರಿಲ್‌ನಿಂದ ಜುಲೈ ತಿಂಗಳವರೆಗೆ ಮದ್ಯ ಮಾರಾಟದಲ್ಲಿ ಒಂದಿಷ್ಟು ಇಳಿಕೆ ಕಂಡು ಬಂದಿತ್ತು. ಇದೀಗ ಆಗಸ್ಟ್‌ ತಿಂಗಳಿನಿಂದ ಮಾರಾಟದಲ್ಲಿ ಚೇತರಿಕೆಯಾಗುತ್ತಿದೆ. –ಶಿವನಗೌಡ, ಜಿಲ್ಲಾ ಆಯುಕ್ತ, ಅಬಕಾರಿ ಇಲಾಖೆ

 

– ಶಿವಶಂಕರ ಕಂಠಿ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.