ಕೋವಿಡ್ 19 ಎಡವಟ್ಟಿನಿಂದ ಅಪರಾಧ ಹೆಚ್ಚಳ ಭೀತಿ..


Team Udayavani, Apr 3, 2020, 12:23 PM IST

huballi-tdy-3

ಹುಬ್ಬಳ್ಳಿ: ಕೋವಿಡ್ 19 ಹಲವು ಎಡವಟ್ಟುಗಳನ್ನು ಸೃಷ್ಟಿಸತೊಡಗಿದೆ. ಕೃಷಿ, ಉತ್ಪಾದನೆ, ಉದ್ಯೋಗ, ವ್ಯಾಪಾರ-ವಹಿವಾಟು ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಇದು ಹಲವು ಆರ್ಥಿಕ ಅಪರಾಧ ಕೃತ್ಯಗಳನ್ನು ಸೃಷ್ಟಿಸುವ ಆತಂಕ ಎದುರಾಗಿದೆ.

ಈ ಹಿಂದೆ ಬರಗಾಲ ಎದುರಾದಾಗ ಉತ್ಪಾದನೆ, ಆದಾಯ ಕುಸಿತ, ಉದ್ಯೋಗ ನಷ್ಟವಾಗಿ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದವು. ಇದೀಗ ಕೋವಿಡ್ 19  ಲಾಕ್‌ ಡೌನ್‌ ಆದಾಯ-ಉದ್ಯೋಗಕ್ಕೆ ಕುತ್ತು ತಂದಿದ್ದು ಇದು ಅಪರಾಧ ಕೃತ್ಯಗಳಿಗೆ ದಾರಿ ಮಾಡಿಕೊಡುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಈಗಲೂ ನೆನಪಿಸಿಕೊಳ್ಳುತ್ತಾರೆ: ಗ್ರಾಮೀಣ ಪ್ರದೇಶಗಳಲ್ಲಿ ಹಿಂದೆ ನೀರಾವರಿ ವ್ಯವಸ್ಥೆ ಅಷ್ಟಾಗಿ ಇಲ್ಲದ ಕಾಲ, ಬಹುತೇಕ ಮಳೆಯಾಧಾರಿತ ಕೃಷಿ ಸಂದರ್ಭ ಹಾಗೂ ವಿಶೇಷವಾಗಿ ಬರಗಾಲ ಬಂದಾಗಲೊಮ್ಮೆ ಕಳ್ಳತನಗಳ ಪ್ರಮಾಣ ಹೆಚ್ಚಾಗುತ್ತಿತ್ತು. ಗ್ರಾಮದಲ್ಲಿ ಒಂದಿಷ್ಟು ಸ್ಥಿತಿವಂತ ಕುಟುಂಬ ಇದೆ ಎಂದರೆ ಅವರು ರಾತ್ರಿಯೆಲ್ಲ ಏನಾಗುತ್ತದೆಯೋ ಎಂಬ ಭಯದಲ್ಲಿಯೇ ದಿನಗಳೆಯುವ ಸ್ಥಿತಿಯಿತ್ತು.

ಮನೆಗಳಲ್ಲಿನ ಆಹಾರಧಾನ್ಯಗಳು ಸೇರಿದಂತೆ ವಿವಿಧ ವಸ್ತುಗಳನ್ನು ಕಳ್ಳತನ ಮಾಡಲಾಗುತ್ತಿತ್ತು. ಅಷ್ಟೇ ಅಲ್ಲದೆ ಮಹಿಳೆಯರನ್ನು ಅಡ್ಡಗಟ್ಟಿ ಮಾಂಗಲ್ಯ ಸರ, ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಲಾಗುತ್ತಿತ್ತು. ಇನ್ನು ನೀರಾವರಿ ಬಂದ ಪ್ರದೇಶಗಳ ಜನರು ಸಹ ಕಳ್ಳತನದ ಭೀತಿಯನ್ನು ಎದುರಿಸಬೇಕಾಗಿತ್ತು.

ಬರಗಾಲ ಸಂದರ್ಭ ನೀರಾವರಿ ಪ್ರದೇಶದಲ್ಲಿ ಅಷ್ಟು ಇಷ್ಟು ನೀರಿನ ಸೌಲಭ್ಯದೊಂದಿಗೆ ಬೆಳೆಗಳನ್ನು ಬೆಳೆದು ಹೊಲದಲ್ಲಿನ ಕೃಷಿ ಉತ್ಪನ್ನಗಳನ್ನು ರಾಸಿ ಮಾಡಿ ಕಾಯ್ದಿಟ್ಟುಕೊಳ್ಳುವುದೇ ಸವಾಲಿನ ಕೆಲಸವಾಗಿತ್ತು. ಕೆಲವೆಡೆ ಕಡೆ ಹತ್ತಿ, ಜೋಳ, ಗೋಧಿಗಳು ಕಳ್ಳತನ ಆಗಿದ್ದು ಇದೆ.

1980ರ ದಶಕ ಹಾಗೂ 1996ರ ವೇಳೆಗೆ ಬರದಿಂದಾಗಿ ಗ್ರಾಮಗಳಲ್ಲಿ ಕಳ್ಳತನ ಮಿತಿಮೀರಿತ್ತು. ಹತ್ತಿ ಸೇರಿದಂತೆ ವಿವಿಧ ಧಾನ್ಯಗಳನ್ನು ಕಳ್ಳತನ ಮಾಡಲಾಗುತ್ತಿತ್ತು. ಮಹಿಳೆಯರು ಹೊರ ಹೋಗಲು ಹೆದರುತ್ತಿದ್ದರು ಎಂಬುದನ್ನು ನವಲಗುಂದ ಗ್ರಾಮದ ಹೆಬ್ಟಾಳ ಗ್ರಾಮಸ್ಥರು ನೆನಪಿಸಿಕೊಳ್ಳುತ್ತಾರೆ. 2006-07ರ ವೇಳೆಗೆ ಮಹಾರಾಷ್ಟ್ರದಿಂದ ಕಬ್ಬು ಕಡಿಯಲೆಂದು ಬಂದ ಗ್ಯಾಂಗ್‌ನ ಕೆಲವರು ಸ್ಥಳೀಯರೊಂದಿಗೆ ಸೇರಿಕೊಂಡು ಗ್ರಾಮದಲ್ಲಿ ಕಳ್ಳತನ ಹೆಚ್ಚಿಸಿದ್ದರು. ಕಳ್ಳರ ಕಾಟ ತಾಳಲಾರದೆ ಸರದಿ ಮೇಲೆ ಮಹಿಳೆಯರೇ ರಾತ್ರಿಯಿಡೀ ಕೈಯಲ್ಲಿ ಒನಕೆ, ಆಯುಧ ಹಿಡಿದು ಕಾವಲು ಕಾಯುತ್ತಿದ್ದೆವು ಎಂಬುದನ್ನು ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿಯ ಪಾರ್ವತೆಮ್ಮ ಹೊಂಗಲ್‌ ನೆನಪಿಸಿಕೊಳ್ಳುತ್ತಾರೆ.

ಮದ್ಯದಂಗಡಿ ಕಳ್ಳತನ: ಕೋವಿಡ್ 19  ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದ್ಯದ ಅಂಗಡಿಗಳು ಬಂದ್‌ ಆಗಿವೆ. ಹುಬ್ಬಳ್ಳಿ, ಧಾರವಾಡ, ಗದಗ ಸೇರಿದಂತೆ ಕೆಲವೆಡೆ ಮದ್ಯದ ಅಂಗಡಿಗಳು ಕಳ್ಳತನ ಆಗಿರುವುದು ಸ್ಯಾಂಪಲ್‌ ಮಾತ್ರ. ಮುಂದಿನ ದಿನಗಳಲ್ಲಿ ಆರ್ಥಿಕ ಅಪರಾಧಕ್ಕೆ ಇದು ಮುನ್ನುಡಿ ಎಂದರೂ ತಪ್ಪಾಗಲಾರದು ಎಂಬುದು ಹಲವರ ಅಭಿಪ್ರಾಯ. ಕೋವಿಡ್ 19  ಕಾರಣ ನಗರಗಳಲ್ಲಿ ವಿವಿಧ ಉದ್ಯಮ, ಉತ್ಪಾದನೆ, ಉದ್ಯೋಗ ಸ್ಥಗಿತಗೊಂಡಿದೆ. ಮುಂದೆ ಪುನರಾಂಭಗೊಂಡರೂ ಉದ್ಯೋಗಗಳು

ಮರಳಿ ದೊರೆಯುವ ಖಾತರಿ ಇಲ್ಲವಾಗಿದೆ. ಇದ್ದ ಉದ್ಯೋಗಗಳಲ್ಲಿ ಕಡಿತದ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ವ್ಯಾಪಾರ-ವಹಿವಾಟು ಸೇರಿದಂತೆ ವಿವಿಧ ಕ್ಷೇತ್ರಗಳ ಪುನಃಶ್ಚೇತನ ಮಂದಗತಿಯಲ್ಲಿ ಸಾಗುವ ಸಾಧ್ಯತೆಗಳಿವೆ. ಇನ್ನೊಂದು ಕಡೆ ಕೃಷಿ ಅವಲಂಬಿತರಿಗೂ ಹಲವು ಸಮಸ್ಯೆಗಳು ಎದುರಾಗಲಿವೆ. ಈ ಎಲ್ಲ ಕಾರಣಗಳಿಂದಲೂ ಅಪರಾಧ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ.

ನಿರುದ್ಯೋಗದ ಹೆಚ್ಚಳ ಹಾಗೂ ಕನಿಷ್ಠ ಆದಾಯ ಇಲ್ಲದಿರುವ ಸ್ಥಿತಿ ಸಹಜವಾಗಿಯೇ ಅಪರಾಧ ಮನೋಭಾವನೆಗೆ ಪ್ರಚೋದನೆ ನೀಡುವ ಸಾಧ್ಯತೆ ಇದೆ. ನಗರ, ಹಳ್ಳಿಗಳೆನ್ನದೆ ಅನೇಕ ಕಡೆ ಕಳ್ಳತನ-ದರೋಡೆ ಪ್ರಮಾಣಗಳು ಹೆಚ್ಚುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಈ ಬಗ್ಗೆ ಸರಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಉದ್ಯೋಗ ಸೃಷ್ಟಿ, ಕನಿಷ್ಠ ಆದಾಯಕ್ಕೆ ಅವಕಾಶ ಯತ್ನಗಳನ್ನು ತೆರೆದಿಡಬೇಕಾಗಿದೆ.

ಸರಕಾರ ಎಚ್ಚತ್ತುಕೊಳ್ಳಬೇಕಿದೆ : ಕೋವಿಡ್ 19 ಹೊಡೆತ ಖಂಡಿತವಾಗಿಯೂ ಹಲವು ಕ್ಷೇತ್ರಗಳ ಮೇಲೆ ಪರಿಣಾಮಬೀರುತ್ತದೆ. ನಿರುದ್ಯೋಗ ಸಮಸ್ಯೆ ಇನ್ನಷ್ಟು ಹೆಚ್ಚಲಿದೆ. ಅಪರಾಧ ಕೃತ್ಯಗಳು ಹೆಚ್ಚಾಗುವ ಸಾಧ್ಯತೆ ಇಲ್ಲದಿಲ್ಲ. ಸರಕಾರ ಈಗಲೇ ಎಚ್ಚೆತ್ತು ಅಗತ್ಯ ಪರಿಹಾರ ಕಾರ್ಯಗಳಿಗೆ ಮುಂದಾಗಬೇಕಿದೆ. ಘೋಷಣೆಗಳು ಗ್ರಾಮೀಣ ಪ್ರದೇಶದಲ್ಲಿ ಅನುಷ್ಠಾನ ರೂಪಕ್ಕೆ ಬರಬೇಕಾಗಿದೆ. – ಶಂಕರ ಅಂಬಲಿ, ರಾಜ್ಯಾಧ್ಯಕ್ಷ, ಕರ್ನಾಟಕ ರೈತ ಸೇನೆ

 

­-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.