ಕರ್ಕಶ ಸೈಲೆನ್ಸರ್‌ ಕಿತ್ತ ಪೊಲೀಸರು

•6 ಲಕ್ಷ ಮೌಲ್ಯದ ಹೊಗೆ ಕೊಳವೆ ನುಜ್ಜುಗುಜ್ಜು•ಕಾರ್ಯಾಚರಣೆ ಮುಂದುವರಿಕೆ

Team Udayavani, Aug 20, 2019, 9:46 AM IST

huballi-tdy-4

ಧಾರವಾಡ: ಕಿತ್ತು ಹಾಕಿರುವ ಸೈಲೆನ್ಸರ್‌ಗಳ ಜೊತೆ ಧಾರವಾಡ ಪೊಲೀಸರು.

ಧಾರವಾಡ: ರಸ್ತೆಯಲ್ಲಿ ಬೈಕ್‌ಗಳ ಕರ್ಕಶ ಶಬ್ದ ಮಾಡುತ್ತ ಹವಾ ಮಾಡಿಕೊಳ್ಳುತ್ತಿದ್ದ ಪುಂಡ ಪೋಕರಿಗಳಿಗೆ ಕೊನೆಗೂ ಅವಳಿ ನಗರ ಟ್ರಾಫಿಕ್‌ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ಗಳನ್ನು ನಿಯಮಬಾಹಿರವಾಗಿ ಅಳವಡಿಸಿದ್ದ 110 ಬೈಕ್‌ಗಳನ್ನು ಜಪ್ತಿ ಮಾಡಿಕೊಂಡಿರುವ ಧಾರವಾಡ ಸಂಚಾರ ಪೊಲೀಸರು 6 ಲಕ್ಷ ರೂ. ಮೌಲ್ಯದ ಸೈಲೆನ್ಸರ್‌ಗಳನ್ನು ರಸ್ತೆ ರೋಲರ್‌ ಕೆಳಗೆ ಹಾಕಿ ನುಜ್ಜುಗೊಳಿಸಿ ನಾಶಪಡಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹು-ಧಾ ಮಹಾನಗರ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ ಬೈಕಾಸುರರನ್ನು ಬಂಧಿಸಿದ ಕಥೆಯನ್ನು ಮಾಧ್ಯಮಗಳ ಮುಂದೆ ತೆರೆದಿಟ್ಟರು. ಧಾರವಾಡ ನಗರದಲ್ಲಿ ಕಳೆದ 2 ತಿಂಗಳಿಂದ ವಿಶೇಷ ವಾಹನ ತಪಾಸಣೆ ನಡೆಸಿದ ಸಂಚಾರ ಠಾಣೆ ಪೊಲೀಸರು ಕರ್ಕಶ ಶಬ್ದ ಮಾಡುವ ಸೈಲೆನ್ಸರ್‌ ಅಳವಡಿಸಿದ್ದ 110 ಬೈಕ್‌ಗಳನ್ನು ಜಪ್ತಿ ಮಾಡಿದ್ದರು. ನಂತರ ಬೈಕ್‌ ಮಾಲೀಕರನ್ನು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಿ ಸೈಲೆನ್ಸರ್‌ ತೆರವು ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆಟೋದಲ್ಲಿ 6 ಮಕ್ಕಳು ಮಾತ್ರ: ಆಟೋ ರಿಕ್ಷಾಗಳಲ್ಲಿ 6ಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಹಾಗೂ ಗೂಡ್ಸ್‌ ವಾಹನಗಳಲ್ಲಿ ಜನರನ್ನು ಕರೆದುಕೊಂಡು ಹೋಗುವುದು ಕಾನೂನು ಬಾಹಿರ. ನಿಯಮ ಉಲ್ಲಂಘಿಸಿದ 1197 ಆಟೋಗಳು ಹಾಗೂ 1689 ಗೂಡ್ಸ್‌ ವಾಹನಗಳ ಮಾಲೀಕರ ಮೇಲೆ ಕ್ರಮ ಕೈಗೊಂಡು ದಂಡ ವಸೂಲಿ ಮಾಡಲಾಗಿದೆ. ಇನ್ನು ಮುಂದೆಯೂ ಇದು ಉಲ್ಲಂಘನೆ ಆದಲ್ಲಿ ಸಂಬಂಧಪಟ್ಟ ಚಾಲಕರ ಲೈಸನ್ಸ್‌ ರದ್ದುಗೊಳಿ ವಾಹನ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ನಗರದಲ್ಲಿ ಆಟೋಗಳಿಗೆ ಮೀಟರ್‌ ಕಡ್ಡಾಯ. ಇದನ್ನು ಎಲ್ಲರೂ ಪಾಲಿಸಲೇಬೇಕು. ಅದೇ ರೀತಿ ರೈಲ್ವೆ ನಿಲ್ದಾಣ ಸೇರಿದಂತೆ ಇತರೆಡೆ ಪ್ರಿಪೇಡ್‌ ಆಟೋ ವ್ಯವಸ್ಥೆಯನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರಯಾಣಿಕರಿಂದ ಬೇಕಾಬಿಟ್ಟಿಯಾಗಿ ಶುಲ್ಕ ವಸೂಲಿ ಮಾಡಲು ಇಲಾಖೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಅವಳಿ ನಗರದಲ್ಲಿ ಹೊಸ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸುವ ಕುರಿತಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರಕಾರದಿಂದ ಅನುಮೋದನೆ ಸಿಕ್ಕ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು. ವಿವಿಧೆಡೆ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಸಿಗ್ನಲ್ಗಳು ಸುಸ್ಥಿತಿಯಲ್ಲಿಲ್ಲ. ಕಾಮಗಾರಿ ಮುಗಿಯುತ್ತಿದ್ದಂತೆಯೇ ದುರಸ್ತಿಗೊಳಿಸಿ ಅನುಕೂಲ ಮಾಡಿಕೊಡಲಾಗುವುದು ಎಂದು ಆಯುಕ್ತ ನಾಗರಾಜ್‌ ತಿಳಿಸಿದರು. ಡಿಸಿಪಿ ಶಿವಕುಮಾರ ಗುಣಾರೆ, ಎಸಿಪಿ ಎನ್‌.ಎಂ. ಸಂದಿಗವಾಡ, ಸಂಚಾರಿ ಠಾಣೆ ಇನ್ಸ್‌ಪೆಕ್ಟರ್‌ ಮುರುಗೇಶ ಚನ್ನಣ್ಣವರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.