ನಾಳೆಯಿಂದ ಜಿಲ್ಲೆಯಲ್ಲಿ ಕರ್ಫ್ಯೂ ಕೊಂಚ ಸಡಿಲಿಕೆ
ಶೆಟ್ಟರ-ಜೋಶಿ ನೇತೃತ್ವದಲ್ಲಿ ಸಭೆ | 6ರಿಂದ 10 ಗಂಟೆವರೆಗೆ ಕಾಲಾವಕಾಶ ವಿಸ್ತರಣೆ | ಕಿರಾಣಿ ಅಂಗಡಿಗಳು ಓಪನ್
Team Udayavani, Jun 6, 2021, 5:49 PM IST
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಖಚಿತತೆ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜೂ. 7ರಿಂದ ಜಿಲ್ಲೆಯಲ್ಲಿ ಕರ್ಫ್ಯೂ ನಿಯಮಗಳಲ್ಲಿ ಅಲ್ಪ ವಿನಾಯಿತ ನೀಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಆಯುಕ್ತ ಲಾಭೂ ರಾಮ, ಜಿಪಂ ಸಿಇಒ ಡಾ| ಬಿ. ಸುಶೀಲಾ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ರಾಜ್ಯ ಸರಕಾರ ಜೂ. 14ರ ವರೆಗೆ ಕರ್ಫ್ಯೂ ಮುಂದುವರಿಸಲು ಸೂಚಿಸಿದೆ. ಸದ್ಯ ಹಾಲು, ತರಕಾರಿ ಸೇವೆಗಳಿಗೆ ಮಾತ್ರ ಬೆಳಗ್ಗೆ 6ರಿಂದ 8 ಗಂಟೆ ವರೆಗೆ ಅವಕಾಶವಿದೆ. ಈ ಸಮಯವನ್ನು ಬೆಳಗ್ಗೆ 10 ಗಂಟೆ ವರೆಗೆ ವಿಸ್ತರಿಸಿ ಹಾಲು, ತರಕಾರಿ, ಕಿರಾಣಿ ಅಂಗಡಿ, ಹೋಟೆಲ್ ಹಾಗೂ ಮದ್ಯದ ಅಂಗಡಿಗಳಲ್ಲಿ ಪಾರ್ಸಲ್ ಸೇವೆಗೆ ಅವಕಾಶ ನೀಡಿ. ಹೋಟೆಲ್‌ಗಳ ಮೂಲಕ ಹೋಮ್ ಡೆಲಿವರಿಗೆ ರಾತ್ರಿ 8 ಗಂಟೆ ವರೆಗೆ ಸಮಯಾವಕಾಶ ನೀಡುವಂತೆ ಜಿಲ್ಲಾ ಧಿಕಾರಿಗೆ ಸಚಿವ ಜಗದೀಶ ಶೆಟ್ಟರ ಸೂಚಿಸಿದರು.
ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಲಸಿಕೆ ಕಾರ್ಯ ಚುರುಕುಗೊಳ್ಳಬೇಕು. ಸರಕಾರದ ಪರಿಷ್ಕೃತ ಆದೇಶದಂತೆ ಆದ್ಯತೆ ಮತ್ತು ದುರ್ಬಲ ವರ್ಗದವರಿಗೆ ಕಡ್ಡಾಯವಾಗಿ ಲಸಿಕೆ ನೀಡಲು ಕ್ರಮಕೈಗೊಳ್ಳುವಂತೆ ಅ ಧಿಕಾರಿಗಳಿಗೆ ಸೂಚಿಸಲಾಯಿತು. ವರ್ತುಲ ರಸ್ತೆ ಕಾಮಗಾರಿ ತ್ವರಿತ ರೀತಿಯಲ್ಲಿ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್ ಗಳಿಗೆ ಸೂಚಿಸಲಾಯಿತು.
ಕಿಮ್ಸ್ ಆವರಣದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಕಿಮ್ಸ್‌ಗೆ ಹಸ್ತಾಂತರಿಸುವಂತೆ ನಿರ್ದೇಶನ ನೀಡಲಾಯಿತು. ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಯಶವಂತ ಮದೀನಕರ ಸೇರಿದಂತೆ ಇತರೆ ಅ ಧಿಕಾರಿಗಳು ಇದ್ದರು.
ಪರಿಹಾರ ವಿತರಣೆ ಪೂರ್ಣ: ಜಿಲ್ಲೆಯಲ್ಲಿ ಬೆಳೆ ವಿಮೆ ಮತ್ತು ಪರಿಹಾರ ಕಾರ್ಯಪೂರ್ಣಗೊಂಡಿದೆ. ತಾಂತ್ರಿಕ ಕಾರಣಗಳಿಂದ ವಿಮೆ ಲಭಿಸದವರ ವಿವರ ಪಡೆಯಲಾಗಿದೆ. ಆಯಾ ತಾಲೂಕು ಮಟ್ಟದ ಅಧಿ ಕಾರಿಗಳು ಸಮಸ್ಯೆ ಬಗೆಹರಿಸಲಿದ್ದಾರೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಹಣ್ಣು ಬೆಳೆಗಾರರಿಗೆ 1,08,64,487 ರೂ. ಹಾಗೂ ತರಕಾರಿ ಬೆಳೆಗಾರರಿಗೆ 55,400 ರೂ. ಬಿಡುಗಡೆಯಾಗಿದೆ. ಹೂ ಬೆಳೆಗಾರರಿಗೆ 10,73,529ರೂ. ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಯಾನಿಧಿ ಉಚ್ಚಾಟನೆ ಖಂಡಿಸಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಂದ ಮೋಂಬತ್ತಿ ಮೆರವಣಿಗೆ
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯಗೆ ಬಂದ ನಿಡಸೋಸಿ ಶ್ರೀ ಕಾರು ಅಪಘಾತ
ಹುಣಸೂರು : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ : ಅಡಿಷನಲ್ ಎಸ್.ಪಿ. ಶಿವಕುಮಾರ್
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…
ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ದಯಾನಿಧಿ ಉಚ್ಚಾಟನೆ ಖಂಡಿಸಿ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಿಂದ ಮೋಂಬತ್ತಿ ಮೆರವಣಿಗೆ
ವೀರೇಂದ್ರ ಹೆಗ್ಗಡೆ, ಇಳಯರಾಜ,ವಿಜಯೇಂದ್ರ ಪ್ರಸಾದ್, ಪಿಟಿ ಉಷಾ, ರಾಜಸಭೆಗೆ ನಾಮನಿರ್ದೇಶನ
ಚಂದ್ರಶೇಖರ ಗುರೂಜಿ ಅಂತ್ಯಕ್ರಿಯಗೆ ಬಂದ ನಿಡಸೋಸಿ ಶ್ರೀ ಕಾರು ಅಪಘಾತ
ಹುಣಸೂರು : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ : ಅಡಿಷನಲ್ ಎಸ್.ಪಿ. ಶಿವಕುಮಾರ್
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…