ಇದ್ದೂ ಇಲ್ಲದಂತಾಗಿದೆ ಶೌಚಾಲಯ

Team Udayavani, Aug 3, 2019, 9:26 AM IST

huballi-tdy-2

ಕುಂದಗೋಳ: ಮೂತ್ರಿಗಳ ದುಸ್ಥಿತಿ.

ಕುಂದಗೋಳ: ತಾಲೂಕಿನ ಸಂಶಿಯ ಬಸ್‌ ನಿಲ್ದಾಣದ ಶೌಚಾಲಯ ಅಧೋಗತಿ ತಲುಪಿದೆ. ಶೌಚಕ್ಕೆಂದು ತೆರಳಿದರೆ ಗಬ್ಬು ದುರ್ನಾತ ಮೂಗಿಗೆ ರಾಚುತ್ತದೆ. ಹೀಗಾಗಿ ಪ್ರಯಾಣಿಕರು ನಿಲ್ದಾಣದ ಆವರಣದಲ್ಲಿಯೇ ನಿಸರ್ಗದ ಕರೆಗೆ ಓಗೊಡಬೇಕಾಗಿದೆ.

ಈ ನಿಲ್ದಾಣ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದು ನಿತ್ಯವೂ ಸಾಕಷ್ಟು ದಟ್ಟಣೆ ಇರುತ್ತದೆ. ಅಲ್ಲದೇ ಈ ಗ್ರಾಮಕ್ಕೆ ಶಿಕ್ಷಣಕ್ಕಾಗಿ ಸುತ್ತಮುತ್ತಲಿನ ಹಳ್ಳಿಗಳ ಮಕ್ಕಳು ಆಗಮಿಸುತ್ತಾರೆ. ಆದರೆ ಶೌಚಾಲಯದ ದುಸ್ಥಿತಿಯಿಂದಾಗಿ ಹಿಡಿಶಾಪ ಹಾಕುವಂತಾಗಿದೆ. ಶೌಚಾಲಯದ ಒಳಗೆ ಪ್ರವೇಶಿಸಿದರೆ ಗಬ್ಬು ನಾರುತ್ತದೆ. ಮೂತ್ರ ವಿಸರ್ಜಿಸುವ ಸ್ಥಳದಲ್ಲಿ ಎಲ್ಲೆಂದರಲ್ಲಿ ಕಸಕಡ್ಡಿಗಳು ತುಂಬಿದ್ದು, ಮೂತ್ರ ನಿಂತಲ್ಲೇ ನಿಲ್ಲುತ್ತದೆ. ಅಲ್ಲದೇ ಗೋಡೆಯ ಮೇಲೆಲ್ಲ ಉಗುಳಿನ ಕಲೆಗಳು ರಾರಾಜಿಸುತ್ತಿವೆ. ಕೈ ತೊಳೆಯುವ ಟಾಕಿ ಒಡೆದಿದೆ. ಕೈ ತೊಳೆಯಲು ಸಹ ಹನಿ ನೀರಿಲ್ಲದೇ ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಇನ್ನು ಮಲ ವಿಸರ್ಜಿಸುವ ಕೋಣೆಗಳಂತೂ ಸದಾ ಬೀಗ ಹಾಕಿಕೊಂಡೇ ಇರುತ್ತವೆ.

ನಿಲ್ದಾಣದ ದುಸ್ಥಿತಿ: ಕುಡಿಯುವ ನೀರಿನ ತೊಟ್ಟಿಗಳಿದ್ದರೂ ಅಲ್ಲಿ ಹನಿ ನೀರು ಬಾರದೆ ಇರುವುದರಿಂದ ಕಿಡಿಗೇಡಿಗಳು ನಲ್ಲಿಯನ್ನೇ ಮುರಿದು ಅದರ ಒಳಗೆ ಹೊಲಸನ್ನು ತುಂಬಿದ್ದಾರೆ. ಲಕ್ಷಾಂತರ ರೂ. ಖರ್ಚು ಮಾಡಿ ನವೀಕರಣಗೊಂಡ ಒಂದೂವರೆ ವರ್ಷದಲ್ಲಿಯೇ ತನ್ನ ಹಳೆಯ ಸ್ವರೂಪಕ್ಕೆ ಬಸ್‌ ನಿಲ್ದಾಣ ಬಂದಿದೆ. ನಿಲ್ದಾಣದ ನೆಲಕ್ಕೆ ಹೊದಿಸಿದ ಸಿಮೆಂಟ್ ಬ್ಲಾಕ್‌ಗಳು ಅಲ್ಲಲ್ಲಿ ಒಡೆಯಲಾರಂಭಿಸಿದೆ. ಕೊಳವೆ ಬಾವಿ ಸಹ ಕಾರ್ಯ ನಿರ್ವಹಿಸದೆ ಸ್ಥಗಿತಗೊಂಡಿದೆ. ಗ್ರಾಪಂದವರು ಪಕ್ಕದಲ್ಲಿರುವ ದರ್ಗಾದಿಂದ ಪೈಪ್‌ಲೈನ್‌ ಮೂಲಕ ನೀರು ಪೂರೈಸುತ್ತಿದ್ದರು ಸಹ ಶುಚಿತ್ವ ಕಾಯ್ದುಕೊಳ್ಳಲು ಯಾರೂ ಇಲ್ಲದಿರುವುದರಿಂದ ಸದಾ ಶೌಚಾಲಯಕ್ಕೆ ಬೀಗ ಮುದ್ರೆ ಬಿದ್ದಿದೆ.

ಊರಿನಿಂದ ಅವರಿಗೆ ನಾವೆಲ್ಲ ಸಹಕರಿಸುತ್ತಿದ್ದರೂ ನಿರ್ವಹಣೆ ಕೊರತೆಯಿಂದ, ಕೆಎಸ್‌ಆರ್‌ಟಿಸಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಶೌಚಾಲಯವು ಈ ಸ್ಥಿತಿಗೆ ಬಂದಿದೆ. ಅಲ್ಲದೇ, ಬೆಳಗ್ಗೆ ಹಾಗೂ ಸಂಜೆ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್‌ ಬಿಡಲು ಸಾಕಷ್ಟು ಬಾರಿ ಮನವಿ ಮಾಡಿದರೂ ಸಹ ಸ್ಪಂದಿಸುತ್ತಿಲ್ಲ,•ಎ.ಬಿ. ಉಪ್ಪಿನ, ಗ್ರಾಮದ ಮುಖಂಡ

ಶೌಚಾಲಯದಲ್ಲಿ ನೀರು ಮುಂದೆ ಸಾಗದಿರುವುದರಿಂದ ಈ ಸ್ಥಿತಿಗೆ ಬಂದಿದೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದ್ದು, ಸ್ವಚ್ಛಗೊಳಿಸಿದ ಬಳಿಕ ಬೀಗ ತೆಗೆಯಲಾಗುವುದು. • ಎಂ.ಎಚ್. ಅಗಸಿಮನಿ, ನಿಲ್ದಾಣ ಅಧಿಕಾರಿ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.