ಕುಸಲಾಪುರದಲ್ಲಿ ಅಭಿವೃದ್ಧಿ ಮರೀಚಿಕೆ 

Team Udayavani, Aug 20, 2018, 4:32 PM IST

20-agust-17.jpg

ಶಿರಹಟ್ಟಿ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಗ್ರಾಮಗಳ ಅಭಿವೃದ್ಧಿಗಾಗಿ ಸಾಕಷ್ಟು ರೀತಿಯ ಯೋಜನೆ ಜಾರಿಗೆ ತರುತ್ತಿದೆ. ಆದರೂ ಕೆಲ ಹಳ್ಳಿಗಳ ಅಭಿವೃದ್ಧಿ ಇನ್ನೂ ಆಗಿಲ್ಲ. ಇಲ್ಲಿ ಮೂಲಭೂತ ಸೌಕರ್ಯವೇ ಇಲ್ಲ. ಇದಕ್ಕೆ ತಾಲೂಕಿನ ಕುಸಲಾಪುರ ಗ್ರಾಮವೇ ಸಾಕ್ಷಿ. 

ಈ ಗ್ರಾಮದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿವೆ. ತಾಲೂಕಿನ ಕಡಕೋಳ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಇದು ಒಳಪಟ್ಟಿದೆ. ಗ್ರಾಪಂನವರು ಗ್ರಾಮದಲ್ಲಿ ರಸ್ತೆ, ಚರಂಡಿಗಳನ್ನು ನಿರ್ಮಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಮದಲ್ಲಿ ರಸ್ತೆ ಹಾಗೂ ಗಟಾರ ಎಲ್ಲಿದೆಯೆಂದು ಹುಡಕುವ ಪರಿಸ್ಥಿತಿಯಿದೆ. ಗ್ರಾಮದಲ್ಲಿ ಬಹುತೇಕ ರಸ್ತೆಗಳ ಮೇಲೆಯೇ ಚರಂಡಿ ನೀರು ಹರಿಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ರಸ್ತೆ ಮೇಲೆ ಓಡಾಡುವುದು ದುಸ್ತರವಾಗಿದೆ. ಅಲ್ಲದೇ ಮಕ್ಕಳು, ಮಹಿಳೆಯರು, ವಯೋವೃದ್ಧರು ಪಾಡಂತು ಹೇಳತೀರದಾಗಿದೆ. ಚರಂಡಿ ನೀರಿನ ದುರ್ವಾಸನೆಯಿಂದ ಗ್ರಾಮದ ಜನತೆಗೆ ಹಲವು ರೋಗಗಳಿಂದ ಬಳಲುವಂತಾಗಿದೆ. ಅಚ್ಚು ಕಟ್ಟಾದ ರಸ್ತೆಗಳು ಇಲ್ಲದೇ ಮಳೆ ಬಂದಾಗ ಕೆಸರಿನ ಗದ್ದೆಯಂತಾಗುತ್ತಿದೆ. ಬೇಸಿಗೆಯಲ್ಲಿ ಧೂಳಿನ ಮಜ್ಜನವಾದರೆ, ಮಳೆಗಾಲದಲ್ಲಿ ಎಲ್ಲೆಡೆ ಕೆಸರುಮಯ ವಾತಾವರಣ ಇರುತ್ತಿದೆ. ಇದರಿಂದ ಸಾರ್ವಜನಿಕರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಕುಡಿವ ನೀರಿಗೆ ಪರದಾಟ: ಕುಸಲಾಪುರ ಗ್ರಾಮದ ವ್ಯಾಪ್ತಿಯಲ್ಲಿ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಮಳೆ ಬಾರದೆ ಇರುವುದರಿಂದ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿವೆ. ಇದರಿಂದ ಬೋರ್‌ ವೆಲ್‌ಗ‌ಳು ಸಂಪೂರ್ಣ ಬಂದ್‌ ಆಗಿವೆ. ಮಳೆಗಾಲದಲ್ಲೂ ಗ್ರಾಮದ ಜನತೆ ಕುಡಿಯುವ ನೀರಿಗಾಗಿ ನಿತ್ಯ ಪರದಾಡುವಂತ ಪರಿಸ್ಥಿತಿಯಿದೆ. ಗ್ರಾಮದ ಜನರು ತುಂಗಭದ್ರಾ ನದಿ ನೀರನ್ನು ಅವಲಂಬಿಸಿರುವುದರಿಂದ ಅದು ಕೂಡಾ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ಊರಿನ ಅಕ್ಕ ಪಕ್ಕದ ತೋಟದ ಮನೆಗಳಿಂದ ಪ್ರತಿನಿತ್ಯ ನೀರು ತಂದು ಜೀವನ ಸಾಗಿಸುವಂತಾಗಿದೆ.

ನಮ್ಮೂರನ್ಯಾಗ ಕುಡ್ಯಾಕ್‌ ನೀರಿನ ಸಮಸ್ಯೆ ಬಾಳ ಐತ್ರಿ. ನಾವು ನೀರ ತರಬೇಕೆಂದ್ರ ಅರ್ಧ ಕಿ.ಮೀ. ದೂರ ಹೋಗಿಬೇಕ್ರಿ. ಅಲ್ದ ನಮ್ಮ ದನಕರುಗಳಿಗೂ ಅಲ್ಲಿಂದ ನೀರ ತರಬೇಕಂದ್ರ ಬಾಳಕಷ್ಟ ಆಗತೈತ್ರಿ. ಅಲ್ದ ನಮ್ಮೂರಿನ ತಳಗಿನ ಪ್ಲಾಟ್‌ನ್ಯಾಗ ಚರಂಡಿ ವ್ಯವಸ್ಥೆ ಇಲ್ದಾ ರಸ್ತೆಗಳು ಮೇಲೆ ಕೊಳಚಿ ನೀರ ಹರಿತೈತ್ರಿ. ಇದ್ರಿಂದ ಸಣ್ಣ ಮಕ್ಕಳಿಗೆ, ಮಹಿಳೆಯರಿಗೆ ಇಲ್ಲದ ರೋಗಾ ಬರಾಕ್‌ ಹತೈತಿ. ಇಷ್ಟಾದ್ರು ಯಾರು ಈ ಕಡೆ ಬಂದಿರ್ಲಿ. ಚುನಾವಣೆ ಸಂದರ್ಭದಲ್ಲಿ ಮಾತ್ರ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ನಮ್ಮ ನೆನಪು ಆಗತೈತ್ರಿ ಎಂದು ಕುಸಲಾಪುರ ಗ್ರಾಮಸ್ಥ ನಿಂಗಪ್ಪ ಭಂಡಾರಿ ಅಳಲನ್ನು ತೋಡಿಕೊಂಡರು.

ಗ್ರಾಮದಲ್ಲಿ ಎಂಟು ಬೋರ್‌ವೆಲ್‌ಗ‌ಳು ಇದ್ದರೂ ಯಾವುದರಲ್ಲೂ ನೀರು ಬರುತ್ತಿಲ್ಲ. ಇದರಿಂದ ತೋಟದ ನೀರನ್ನು ಪೂರೈಸಲಾಗುತ್ತದೆ. ಅಲ್ಲದೇ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ಈಗಾಗಲೇ ತಾಪಂಗೆ ಬಂದಿದ್ದು, ಶೀಘ್ರದಲ್ಲೆ ಕಾಮಗಾರಿ ಪ್ರಾರಂಭಿಸಲಾಗುವುದು.
ಹಾಲನಗೌಡ ಪಾಟೀಲ, ಗ್ರಾಪಂ ಸದಸ್ಯ

ಪ್ರಕಾಶ ಶಿ. ಮೇಟಿ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.