Gas Cylinder: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ್ಯು… ನಾಲ್ವರಿಗೆ ಗಾಯ
Team Udayavani, Mar 20, 2024, 1:30 PM IST
ಧಾರವಾಡ : ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಕಲ್ಲೆ ನಡೆದಿದೆ.
ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಿಗ್ಗೆ ಗ್ಯಾಸ್ ಲಿಕೇಜ್ ಆಗಿತ್ತು. ಏಕಾಏಕಿ ಸ್ಪಾರ್ಕ್ ಆಗಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಮನೆ ತುಂಬ ಬೆಂಕಿ ಆವರಿಸಿ ಅನಾಹುತ ಸಂಭವಿಸಿದೆ. ಅಡುಗೆ ಮನೆಯಲ್ಲೇ ಇದ್ದ ಮಹಾದೇವಿ ಹೊರಗಡೆ ಬರಲಾಗದೇ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾಳೆ. ಇದರಿಂದ ಮಹಾದೇವಿ ದೇಹ ಸಂಪೂರ್ಣ ಬೆಂದು ಹೋಗಿದೆ. ಬಾಕಿ ಉಳಿದವರು, ಹಾಗೋ ಹೀಗೋ ಮಾಡಿ ಹೊರ ಬಂದಿದ್ದಾರೆ. ಅವರಿಗೂ ಗಾಯಗಳಾಗಿವೆ. ಅಕ್ಕಪಕ್ಕವೇ ಎರಡೂರು ಸಿಲಿಂಡರ್ ಇದ್ದವು. ಆದರೆ ಅವುಗಳಿಂದ ಬೆಂಕಿ ಸ್ಫೋಟಗೊಂಡಿಲ್ಲ. ಇದರಿಂದ ಮತ್ತೊಂದು ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ: Panaji: ಮಹದಾಯಿ ಉಳಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲ: ಕಾಂಗ್ರೆಸ್ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ