ಧಾರವಾಡ: ದನದ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆ


Team Udayavani, Apr 1, 2024, 5:51 PM IST

ಧಾರವಾಡ: ದನದ ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಕೊರತೆ

ಉದಯವಾಣಿ ಸಮಾಚಾರ
ಧಾರವಾಡ : ಬರಗಾಲದ ಬರೆಗೆ ರೈತನ ಪಾಲಿನ ಜೀವನಾಡಿ ಆಗಿರುವ ಜಾನುವಾರುಗಳು ಪರಭಾರೆ ಆಗುತ್ತಿದ್ದು, ಆದರೆ ಮಾರಾಟಕ್ಕೆಂದು ಜಾನುವಾರು ಮಾರುಕಟ್ಟೆಗೆ ಬರುವ ಜಾನುವಾರುಗಳ ದಾಹ ಮಾತ್ರ ತೀರದಾಗಿದೆ. ಜಾನುವಾರುಗಳ ನೀರಿನ ದಾಹ ನೀಗಿಸಲೆಂದೇ ತೊಟ್ಟಿಗಳಿದ್ದರೂ ಅವುಗಳಲ್ಲಿ ನೀರಿಲ್ಲ…!

ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪೂರದ ಜಾನುವಾರು ಮಾರುಕಟ್ಟೆಯ ದುಸ್ಥಿತಿಯಿದು. ಜಾನುವಾರುಗಳ ದಾಹ ನೀಗಿಸಬೇಕಾದ ನೀರಿನ ತೊಟ್ಟಿಗಳಲ್ಲಿ ನೀರಿಲ್ಲ, ಖಾಲಿ ತೊಟ್ಟಿಗಳಲ್ಲಿ ಬರೀ ಮದ್ಯದ ಬಾಟಲಿಗಳದ್ದೇ ಸಾಮ್ರಾಜ್ಯ. ಶುಚಿತ್ವದ ಕೊರತೆಯ ಜತೆಗೆ ಅನೈತಿಕ ಚಟುವಟಿಕೆಗಳದ್ದೇ ಕಾರುಬಾರು, ಎಣ್ಣೆ ಪಾರ್ಟಿಗಳ ಕಟ್ಟೆಯಾಗಿರುವ ಹರಾಜು ಕಟ್ಟೆಯೇ ಮಾರುಕಟ್ಟೆಯ ದುಸ್ಥಿತಿಗೆ ಸಾಕ್ಷಿ. ಇಲ್ಲಿಗೆ ಮಾರಾಟಕ್ಕೆಂದು ಬರುವ ಜಾನುವಾರುಗಳಿಗೆ ಕುಡಿಯುವ ನೀರು ಕೂಡ ಸಿಗದಂತಹ ಕೆಟ್ಟ ದುಸ್ಥಿತಿ ಇಲ್ಲಿದೆ.

ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪೂರದ ಜಾನುವಾರು ಮಾರುಕಟ್ಟೆ ಜಿಲ್ಲೆಯಲ್ಲೇ ದೊಡ್ಡದಾಗಿದ್ದು, ವಾರದ ಪ್ರತಿ ಮಂಗಳವಾರ ಜಾನುವಾರು ಸಂತೆ ಜೋರಾಗಿಯೇ ನಡೆದುಕೊಂಡು ಬಂದಿದೆ. ಸದ್ಯ ಮಾರುಕಟ್ಟೆಯಲ್ಲಿಯೇ ಬರಗಾಲದ ಹೊಡೆತಕ್ಕೆ ಮಾರಾಟಕ್ಕೆಂದು ಜಾನುವಾರುಗಳ ದಂಡೇ ಬರುತ್ತಿದ್ದು, ಆದರೆ ಜಾನುವಾರುಗಳ ದಾಹ ನೀಗಿಸಬೇಕಾದ ತೊಟ್ಟಿಗಳಲ್ಲಿ ಮಾತ್ರ ನೀರಿಲ್ಲದಂತಹ ದುಸ್ಥಿತಿ ಜಾನುವಾರು ಮಾರುಕಟ್ಟೆಯಲ್ಲಿದೆ.

ಮಾರುಕಟ್ಟೆಯ ದುಸ್ಥಿತಿಯಿದು: ಈ ಮಾರುಕಟ್ಟೆಯಲ್ಲಿ ದನಗಳನ್ನು ಕಟ್ಟಲು ಕಲ್ಲು ಹೂತಿದ್ದು, ಒಂದಿಷ್ಟು ಕಡೆ ಕಲ್ಲುಗಳೇ ಇಲ್ಲದ ಕಾರಣ ರೈತರೇ ತಾವೇ ಕಲ್ಲು ತಂದಿಟ್ಟು ದನಗಳನ್ನು ಕಟ್ಟುವ ಪರಿಸ್ಥಿತಿ ಇದೆ. ಇಲ್ಲಿ ರೈತರ ದಾಹ ನೀಗಿಸಲು ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಜಾನುವಾರುಗಳ ನೀರಿನ ದಾಹ ನೀಗಿಸಲು ಕಟ್ಟಿರುವ ತೊಟ್ಟಿಗಳಲ್ಲಿ ನೀರಿಲ್ಲದೇ ಖಾಲಿ
ಇರುವ ಈ ತೊಟ್ಟಿಗಳಲ್ಲಿ ಸಾರಾಯಿ ಬಾಟಲಿಗಳು ಬಿದ್ದಿವೆ. ಮದ್ಯದ ಪಾಕೇಟ್‌, ಬಾಟಲಿಗಳು ತೊಟ್ಟಿಯಲ್ಲಿ ರಾರಾಜಿಸುತ್ತಿವೆ. ಹೀಗಾಗಿ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರೂ ಶುಚಿತ್ವದ ಕೊರತೆ ಎದ್ದು ಕಾಣುತ್ತಿದೆ.

ಇನ್ನು ಕಟ್ಟಿರುವ ಶೌಚಾಲಯಗಳು ಗಬ್ಬೇದ್ದು ನಾರುವಂತಾಗಿವೆ. ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪುರದ ಜಾನುವಾರು ಮಾರುಕಟ್ಟೆ 11 ಎಕರೆ 23 ಗುಂಟೆ ಜಾಗ ಹೊಂದಿದ್ದು, ಈಗಾಗಲೇ 2 ಎಕರೆಯಲ್ಲಿ ಅಗ್ನಿಶಾಮಕದಳ ಕಚೇರಿ ಇದೆ. ಈ ಜಾಗಕ್ಕೆ ಕಟ್ಟಿರುವ ಕಾಂಪೌಂಡ್‌ ಒಂದೆರಡು ಕಡೆ ಹೊಡೆದು ಹೋಗಿದೆ. ಹೀಗಾಗಿ ರಾತ್ರಿ ಅಕ್ರಮ ಚಟುವಟಿಕೆಗಳಿಗೆ ತಾಣ ಆಗುತ್ತಿದ್ದು, ಹಗಲು-ರಾತ್ರಿಯ ಬೇಧವಿಲ್ಲದೇ ಎಣ್ಣೆ ಪಾರ್ಟಿ ಸೇರಿದಂತೆ ನೈತಿಕ ಚಟುವಟಿಕೆಗಳಿಗೆ ಸೂಕ್ತ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಮಾರುಕಟ್ಟೆಯ ಪ್ರಾಂಗಣದಲ್ಲಿ ಸಾರಾಯಿ ಬಾಟಲಿಗಳು ರಾರಾಜಿಸುವಂತಾಗಿದೆ.

ಅನೈತಿಕ ತಾಣವಾದ ಕಟ್ಟೆ: ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿಯೇ ಹೋಲ್‌ಸೇಲ್‌ ಎಲೆ ವ್ಯಾಪಾರಕ್ಕಾಗಿಯೇ 2017-18ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿ ಅಂದಾಜು 55 ಲಕ್ಷ ರೂ. ಗಳಲ್ಲಿ ಮೂರು ಮುಚ್ಚು ಹರಾಜು ಕಟ್ಟೆ ನಿರ್ಮಾಣ ಮಾಡಲಾಗಿತ್ತು. ಈಗ ಹಳೇ ಎಪಿಎಂಸಿಯಲ್ಲಿ ನಡೆಯುತ್ತಿರುವ ಹೋಲ್‌ಸೇಲ್‌ ಎಲೆ ವ್ಯಾಪಾರ ಮಾರುಕಟ್ಟೆ ಈ ಕಟ್ಟೆಗೆ ಸ್ಥಳಾಂತರ ಆಗಬೇಕಿತ್ತು. ಆದರೆ ಈ ಕಾರ್ಯವಾಗದೇ ಹರಾಜು ಕಟ್ಟೆಗಳು ಹಾಗೇ ಉಳಿದುಕೊಂಡು, ಅನೈತಿಕ ಚಟುವಟಿಕೆಗಳ ಕಟ್ಟೆಯಾಗಿದ್ದವು. ಈ ಪೈಕಿ ಎರಡು ಹರಾಜು ಕಟ್ಟೆಗಳಲ್ಲಿ ಇದೀಗ ಕಳೆದ 2-3 ತಿಂಗಳಿಂದ ಘನತಾಜ್ಯ ವಿಲೇವಾರಿ ಘಟಕ ನಿರ್ಮಾಣದ ಮೂಲಕ ಸದ್ಬಳಕೆ ಮಾಡಿಕೊಂಡಿದ್ದು, ಆದರೆ ಇನ್ನೊಂದು ಹರಾಜು ಕಟ್ಟೆಯಂತೂ ಹಾಗೇ ಉಳಿದುಕೊಂಡು ಬಿಟ್ಟಿದೆ. ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿಯೇ ಇರುವ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರ ಕಚೇರಿ ಪಕ್ಕದಲ್ಲೇ ಈ ಹರಾಜು ಕಟ್ಟೆಯಿದ್ದು, ಇದು ಅನೈತಿಕ ಚಟುವಟಿಕೆಗಳ ತಾಣದ ಕಟ್ಟೆಯಾಗಿ ಮಾರ್ಪಟ್ಟಿವೆ.

ಹೀಗಾಗಿ ಮದ್ಯದ ಬಾಟಲಿ ರಾರಾಜಿಸುತ್ತಿದ್ದು,ಪ್ರತಿ ದಿನ ರಾತ್ರಿ ಎಣ್ಣೆ ಪಾರ್ಟಿಗಳು ನಡೆಯುತ್ತಿರುವುದಕ್ಕೆ ಪುಷ್ಠಿ ನೀಡುತ್ತಿವೆ. ಈ ಕಟ್ಟೆ ಆವರಣದಲ್ಲಿ ಅಷ್ಟೇ ಅಲ್ಲ ಜಾನುವಾರು ಮಾರುಕಟ್ಟೆಯೂ ಅನೈತಿಕ ಚಟುವಟಿಕೆಯ ತಾಣವಾಗಿದೆ. ಇನ್ನು ಈ ಪ್ರಾಂಗಣದಲ್ಲಿಯೇ ಕುರಿ ಮತ್ತು ಮೇಕೆಗಳ ಮಾರುಕಟ್ಟೆ ಆಧುನೀಕರಣ ಮಾಡುವ 10 ಲಕ್ಷ ರೂ.ಗಳ ಕಾಮಗಾರಿಗೆ ಅನುಮೋದನೆ ಲಭಿಸಿದ್ದಲ್ಲದೇ ಅದಕ್ಕಾಗಿ ಜಾಗವನ್ನೂ ಮೀಸಲಿಡಲಾಗಿತ್ತು. ಆದರೆ ನನೆಗುದಿಗೆ ಬಿದ್ದಿರುವ ಈ ಯೋಜನೆ ಕಾಮಗಾರಿ ಮಾತ್ರ
ವರ್ಷಗಳೇ ಕಳೆದರೂ ಆರಂಭಗೊಂಡಿಲ್ಲ. ಈ ರೀತಿಯ ಅಭಿವೃದ್ಧಿ ಕಾಣದ ಜಾನುವಾರು ಮಾರುಕಟ್ಟೆಯಲ್ಲಿ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿವೆ.

ಮೂಲ ಸೌಕರ್ಯ ಮರೀಚಿಕೆ
ಜಿಲ್ಲೆಯಲ್ಲಿ ಧಾರವಾಡ ಎಪಿಎಂಸಿ, ಹುಬ್ಬಳ್ಳಿ ಎಪಿಎಂಸಿ, ಅಣ್ಣಿಗೇರಿ ಎಪಿಎಂಸಿ, ನೂಲ್ವಿ ಎಪಿಎಂಸಿ ವ್ಯಾಪ್ತಿಯಲ್ಲಿ ಸೇರಿ ಒಟ್ಟು ನಾಲ್ಕು ಜಾನುವಾರು ಮಾರುಕಟ್ಟೆಗಳಿವೆ. ಈ ಪೈಕಿ ಧಾರವಾಡ ಎಪಿಎಂಸಿ ವ್ಯಾಪ್ತಿಯ ಮಾಳಾಪೂರದ ಜಾನುವಾರು
ಮಾರುಕಟ್ಟೆಯೇ ದೊಡ್ಡದು. ಇಲ್ಲಿ ವಾರದಲ್ಲಿ ಒಂದು ದಿನ ನಡೆಯುವ ಜಾನುವಾರು ಸಂತೆಗೆ ಬರುವ ಜಾನುವಾರುಗಳ ನೀರಿನ ದಾಹ ಸಹ ನೀಗಿಸದಂತಹ ದುಸ್ಥಿತಿ. ಈ ರೀತಿ ಮೂಲಭೂತ ಸೌಕರ್ಯಗಳಿಂದ ದಿನದಿಂದ ದಿನಕ್ಕೆ ಸೊರಗುತ್ತಿದ್ದು, ಅದೇ ರೀತಿ ಜಿಲ್ಲೆಯ ಉಳಿದ ಜಾನುವಾರು ಮಾರುಕಟ್ಟೆಗಳು ಸಹ ಮೂಲಭೂತ ಸೌಲಭ್ಯಗಳಿಂದ ಮರೀಚಿಕೆಯಾಗಿರುವುದಂತೂ ಸತ್ಯ.

ಜಾನುವಾರು ಮಾರುಕಟ್ಟೆಯಲ್ಲಿ ನಿರ್ಮಿಸಿರುವ ನೀರಿನ ತೊಟ್ಟಿಯಲ್ಲಿ ನೀರಿಲ್ಲ ಎಂಬ ಮಾಹಿತಿ ಇಲ್ಲ. ಈ ಬಗ್ಗೆ ಪರಿಶೀಲಿಸಿ ನೀರಿನ ತೊಟ್ಟಿಗಳಲ್ಲಿ ನೀರು ಬಿಡುವ ಕಾರ್ಯ ಮಾಡಲಾಗುವುದು. ಇದರ ಜತೆಗೆ ಮಾರುಕಟ್ಟೆಯ ಮೂಲಸೌಕರ್ಯಗಳಿಗೆ ಆದ್ಯತೆ ಕೊಡಲಾಗುವುದು.
*ವಿ.ಜಿ.ಹಿರೇಮಠ
ಕಾರ್ಯದರ್ಶಿ, ಎಪಿಎಂಸಿ, ಧಾರವಾಡ

*ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

ಅಪ್ಪನ ಬಗ್ಗೆ ಕೆಟ್ಟದಾಗಿ ಕಮೆಂಟ್‌ ಮಾಡಿದವರಿಗೆ ಧನ್ಯವಾದ… ದರ್ಶನ್‌ ಪುತ್ರನ ಪೋಸ್ಟ್ ವೈರಲ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Msp ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯ

Msp ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯ

Dharwad; ಮಾಧ್ಯಮದ ಅಲೆಯಲ್ಲಿ ಮೋದಿ‌ ಗೆಲುವು: ಸಚಿವ ಸಂತೋಷ್ ಲಾಡ್ ವ್ಯಂಗ್ಯ

Dharwad; ಮಾಧ್ಯಮದ ಅಲೆಯಲ್ಲಿ ಮೋದಿ‌ ಗೆಲುವು: ಸಚಿವ ಸಂತೋಷ್ ಲಾಡ್ ವ್ಯಂಗ್ಯ

Pralhad Joshi ಮೋದಿ ಮೈ”ತ್ರಿ’ ಸರಕಾರ: ಜೋಶಿ ಸೆಕೆಂಡ್‌ ಇನ್ನಿಂಗ್ಸ್‌

Pralhad Joshi ಮೋದಿ ಮೈ”ತ್ರಿ’ ಸರಕಾರ: ಜೋಶಿ ಸೆಕೆಂಡ್‌ ಇನ್ನಿಂಗ್ಸ್‌

MUST WATCH

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

ಹೊಸ ಸೇರ್ಪಡೆ

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

8

ವಿಷ ಸೇವನೆ : ಪದವಿ ವಿದ್ಯಾರ್ಥಿನಿಯ ಸಾವು 

Modi Interview

J&K; ಉಗ್ರರ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಶ್ರೇಣಿ ನಿಯೋಜಿಸಲು ಮೋದಿ ಕರೆ

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು

6

Bantwal: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.