
ಕೇಂದ್ರ ಹಣಕಾಸು ಸಚಿವರ ಜತೆ “ತೈಲ ಬೆಲೆ ಹೆಚ್ಚಳ’ ಬಗ್ಗೆ ಚರ್ಚೆ: ಸಿಎಂ
Team Udayavani, Sep 3, 2021, 2:53 PM IST

ಹುಬ್ಬಳ್ಳಿ: ಕಚ್ಚಾ ತೈಲದ ಬೆಲೆ ಮೇಲೆ ಮಾತ್ರವೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರ ನಿರ್ಧಾರವಾಗುವುದಿಲ್ಲ. ಇತರೆ ಖರ್ಚುಗಳು ಹೆಚ್ಚಾದ ಹಿನ್ನೆಲೆಯಲ್ಲಿ ದರ ಹೆಚ್ಚಳವಾಗಿರಬೇಕು. ಬೆಲೆ ಹೆಚ್ಚಳ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಚ್ಚಾ ತೈಲ ಸಂಸ್ಕರಣೆ, ಕಂಪನಿಯ ಹಣಕಾಸು ವಿಚಾರದ ಮೇಲೆ ದರ ನಿರ್ಧಾರವಾಗುತ್ತದೆ. ಕಾಂಗ್ರೆಸ್ ನಾಯಕರು ಕೂಡ ಆಡಳಿತ ಮಾಡಿದ್ದಾರೆ. ಅವರ ಅವಧಿಯಲ್ಲಿ ದರ ಹೆಚ್ಚಳವಾಗಿಲ್ಲವೇ? ಏನೆಲ್ಲಾ ಬಾಂಡ್ ಮಾಡಿಕೊಟ್ಟಿದ್ದಾರೆ ಎನ್ನುವುದು ನಮಗೂ ಗೊತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಎಲ್ಲಾ ಬೆಲೆಗಳು ಹೆಚ್ಚಾಗಿರುವ ಕಾರಣಕ್ಕೆ ದರ ಹೆಚ್ಚಳವಾಗಿರಬಹುದು. ಕಚ್ಚಾತೈಲ ಬೆಲೆ ಕಡಿಮೆಯಿದ್ದರೂ ದರ ಹೆಚ್ಚಳವಾಗಿದೆ ಎಂದು ಹೇಳುವುದು ಸರಿಯಲ್ಲ ಎಂದರು.
ಕೇರಳದಲ್ಲಿ ಕೋವಿಡ್ ಸಂಖ್ಯೆ ಹಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿರುವ ಗ್ರಾಮಗಳಲ್ಲಿ ವಿಶೇಷ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. ಅಲ್ಲಿನ ನಿವಾಸಿಗಳಿಗೆ ಲಸಿಕೆ ಹಾಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಕೇರಳದಿಂದ ಬರುವವರು ನಕಲಿ ಕೋವಿಡ್ ನೆಗೆಟಿವ್ ವರದಿ ತರುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ! ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ ವದಂತಿ

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

ಮಂಗಳೂರು: ಪದವಿ ಉತ್ತರಪತ್ರಿಕೆ ಇನ್ನು ಅಂಚೆ ಮೂಲಕ ವಿ.ವಿ.ಗೆ

ಕಾಸರಗೋಡು: ವಿಷಾಹಾರ ಸೇವನೆ 120 ಮಂದಿ ಆಸ್ಪತ್ರೆಗೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
