ಸುಳ್ಳು ವದಂತಿ ನಂಬಬೇಡಿ

•ಡೆಂಘೀ, ಚಿಕೂನ್‌ಗುನ್ಯಾ, ಮಲೇರಿಯಾ ವಿರುದ್ಧ ಜನಜಾಗೃತಿ: ದೀಪಾ ಚೋಳನ್‌

Team Udayavani, Jun 29, 2019, 11:28 AM IST

hubali-tdy-4..

ಧಾರವಾಡ: ಡೆಂಘೀ, ಚಿಕೂನ್‌ಗುನ್ಯಾ ಮತ್ತು ಮಲೇರಿಯಾ ರೋಗಗಳ ನಿಯಂತ್ರಣಕ್ಕಾಗಿ ಜಿಲ್ಲಾಮಟ್ಟದ ಅಂತರ್‌ ಇಲಾಖೆ ಮುಖ್ಯಸ್ಥರ ಜತೆ ಡಿಸಿ ದೀಪಾ ಚೋಳನ್‌ ಸಭೆ ನಡೆಸಿದರು.

ಧಾರವಾಡ: ಸೊಳ್ಳೆವಾಹಕ ರೋಗಗಳಾದ ಡೆಂಘೀ, ಚಿಕೂನ್‌ಗುನ್ಯಾ ಮತ್ತು ಮಲೇರಿಯಾ ರೋಗಗಳ ಕುರಿತು ಖಾಸಗಿ ಹಾಗೂ ಸ್ಥಾನಿಕ ವೈದ್ಯರ ಅಭಿಪ್ರಾಯಗಳು, ಸುಳ್ಳು ವದಂತಿ ನಂಬಿ ಸಾರ್ವಜನಿಕರು ಭಯ, ಗೊಂದಲಗೊಳಗಾಗಿದ್ದು, ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಇತರೆ ಇಲಾಖೆಗಳೊಂದಿಗೆ ಅಂತರ್‌ ಸಮನ್ವಯ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ನಗರದ ಡಿಸಿ ಕಚೇರಿಯಲ್ಲಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸೊಳ್ಳೆವಾಹಕ ರೋಗಗಳಾದ ಡೆಂಘೀ, ಚಿಕೂನ್‌ ಗುನ್ಯಾ ಮತ್ತು ಮಲೇರಿಯಾ ರೋಗಗಳ ನಿಯಂತ್ರಣಕ್ಕಾಗಿ ಜಿಲ್ಲಾಮಟ್ಟದ ಅಂತರ ಇಲಾಖೆ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡೆಂಘೀ, ಚಿಕೂನ್‌ಗುನ್ಯಾ ಮತ್ತು ಮಲೇರಿಯಾ ರೋಗಗಳನ್ನು ಪತ್ತೆ ಹಚ್ಚಲು ಖಾಸಗಿ ವ್ಯೆದ್ಯರು ಮತ್ತು ಗ್ರಾಮಗಳಲ್ಲಿರುವ ಸ್ಥಾನಿಕ ವ್ಯೆದ್ಯರು ರಕ್ತ ತಪಾಸಣೆಗಾಗಿ ಟೆಸ್ಟ್‌ ಕಾರ್ಡ್‌ಗಳನ್ನು ಬಳಸುತ್ತಾರೆ. ಇದು ರೋಗ ಕುರಿತು ಖಚಿತ ಫಲಿತಾಂಶ ನೀಡಲ್ಲ. ಇಂತಹ ಸಂದರ್ಭದಲ್ಲಿ ಬಾಧಿತ ವ್ಯಕ್ತಿಗಳ ರಕ್ತವನ್ನು ಆಯ್‌ಜಿಎಮ್‌ ಎಲಿಸಾ ಎಂಬ ಯಂತ್ರದ ಮೂಲಕ ಮಾಡಬೇಕಾಗುತ್ತದೆ. ಈ ಸೌಲಭ್ಯ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ, ಜಿಲ್ಲಾಸ್ಪತ್ರೆ ಹಾಗೂ ಎಸ್‌ಡಿಎಂ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದರು.

ಸಾರ್ವಜನಿಕರು ಜ್ವರ ಬಂದಾಗ ಇತರೆ ವೈದ್ಯರ ಬಳಿ ಟೆಸ್ಟ್‌ ಕಾರ್ಡ್‌ ಮೂಲಕ ರಕ್ತ ತಪಾಸಣೆ ಮಾಡಿಸಿಕೊಂಡು ಡೆಂಘೀ, ಚಿಕೂನ್‌ಗುನ್ಯಾ ಮತ್ತು ಮಲೇರಿಯಾ ಇದೆ ಎಂದು ಭಯ ಪಡಬಾರದು. ತಕ್ಷಣ ಜಿಲ್ಲಾಸ್ಪತ್ರೆಗೆ ಬಂದು ಪರಿಕ್ಷಿಸಿಕೊಂಡು ಖಚಿತ ಪಡಿಸಿಕೊಳ್ಳಬೇಕು. ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ವೈದ್ಯರು ಇಂತಹ ಪ್ರಕರಣಗಳು ಗಮನಕ್ಕೆ ಬಂದಾಗ ತಕ್ಷಣ ಕಿಮ್ಸ್‌ ಅಥವಾ ಜಿಲ್ಲಾಸ್ಪತ್ರೆಗೆ ಶಿಫಾರಸ್ಸು ಮಾಡಬೇಕು. ಈ ಕುರಿತು ಎಲ್ಲ ವೈದ್ಯರಿಗೆ ನಿರ್ದೇಶನ ನೀಡಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ, ನಗರ ಸ್ಥಳಿಯ ಸಂಸ್ಥೆಗಳು, ಶಿಕ್ಷಣ, ಗ್ರಾಪಂ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳು ಸಮನ್ವಯದಿಂದ ಕಾರ್ಯಕ್ರಮ ಯೋಜಿಸಿ, ಅನುಷ್ಠಾನಗೊಳಿಸಬೇಕು ಎಂದರು.

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಶಿವಕುಮಾರ ಮಾನಕರ ಮಾತನಾಡಿ, ಜನವರಿಯಿಂದ ಜೂನ್‌ ತಿಂಗಳವರೆಗೆ ಧಾರವಾಡ ಜಿಲ್ಲೆಯಲ್ಲಿ 8 ಡೆಂಘೀ, 14 ಚಿಕೂನ್‌ಗುನ್ಯಾ ಮತ್ತು 3 ಮಲೇರಿಯಾ ಪ್ರಕರಣಗಳು ಪತ್ತೆಯಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದರು.

ಜನವರಿ 2019ರಿಂದ ಜೂನ್‌ ಅಂತ್ಯದವರೆಗೆ ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ 7,12,698 ಮನೆಗಳಿಗೆ ಭೇಟಿ ನೀಡಿ 24,55,748 ನೀರಿನ ತೊಟ್ಟಿಗಳನ್ನು ಪರೀಕ್ಷಿಸಿದ್ದಾರೆ. 28,193 ನೀರಿನ ತೊಟ್ಟಿಗಳಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಮತ್ತು ಮಲೇರಿಯಾ ರೋಗಗಳಿಗೆ ಕಾರಣವಾಗುವ ಲಾರ್ವಾ ಸೊಳ್ಳಿಯ ಮರಿಗಳು ಕಂಡು ಬಂದಿವೆ ಎಂದರು.

ನಗರ ಪ್ರದೇಶದ 1,99,721 ಮನೆಗಳಿಗೆ ಭೇಟಿ ನೀಡಿದ್ದು, 63,355 ಮನಗಳಲ್ಲಿ ಲಾರ್ವಾ ಸೊಳ್ಳಿಯ ಮರಿ ಕಂಡು ಬಂದಿವೆ. ಮತ್ತು 7,73,626 ನೀರಿನ ತೊಟ್ಟಿಗಳನ್ನು ಪರೀಕ್ಷಿಸಿದ್ದು, 13,789 ನೀರಿನ ತೊಟ್ಟಿಗಳಲ್ಲಿ ಲಾರ್ವಾ ಕಾಣಿಸಿದೆ. ಇವುಗಳ ನಿರ್ಮೂಲನೆಗೆ ಕ್ರಮ ಕೈಗೊಂಡು ಮನೆ ಮನೆಗಳಲ್ಲಿ ರೋಗ ಮುಂಜಾಗ್ರತೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.

ಆರ್‌.ಸಿ.ಎಚ್.ಅಧಿಕಾರಿ ಡಾ|ಎಚ್.ಆರ್‌.ಪುಷ್ಪಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಗಿರಿಧರ ಕುಕನೂರ, ಡಾ|ಸುಜಾತಾ ಹಸವಿಮಠ, ಡಾ|ಶಶಿ ಪಾಟೀಲ, ಡಾ| ಪ್ರಭು ಬಿರಾದಾರ, ಡಾ|ನಿಂಬೆನ್ನವರ ಸೇರಿದಂತೆ ವಿವಿಧ ವೈದ್ಯಾಧಿಕಾರಿಗಳು, ಜಲಮಂಡಳಿ, ಮಹಾನಗರ ಪಾಲಿಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು, ಪಂಚಾಯತ ರಾಜ್‌, ಎನ್‌ಡಬ್ಯೂಕೆಎಸ್‌ಆರ್‌ಟಿಸಿ, ಬಿಆರ್‌ಟಿಎಸ್‌, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.