ಕಾನ್‌-ಮ್ಯಾಟ್‌ ಪ್ರದರ್ಶನಕ್ಕೆ  ಚಾಲನೆ


Team Udayavani, Feb 16, 2019, 11:28 AM IST

16-february-18.jpg

ಹುಬ್ಬಳ್ಳಿ: ನಿರ್ಮಾಣ ಕಾರ್ಯ ಸರಳ ಹಾಗೂ ಸುಲಭವಾಗಿಸುವ ನಿಟ್ಟಿನಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅನ್ವೇಷಣೆಗಳು ನಡೆಯುತ್ತಿದೆ. ಇದರಿಂದ ವೆಚ್ಚ ಹಾಗೂ ಕಡಿಮೆ ಅವಧಿಯಲ್ಲಿ ಕಟ್ಟಡ ನಿರ್ಮಾಣ ಸಾಧ್ಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಇಂದಿರಾ ಗಾಜಿನ ಮನೆಯಲ್ಲಿ ಅಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್‌ ಸಿವಿಲ್‌ ಎಂಜಿನಿಯರ್ ಸಂಸ್ಥೆಯಿಂದ ಆಯೋಜಿಸಿರುವ ಮೂರು ದಿನದ ಕಾನ್‌ -ಮ್ಯಾಟ್‌ ಕಟ್ಟಡ ನಿರ್ಮಾಣ ಸಾಮಗ್ರಿಗಳ ಪ್ರದರ್ಶನಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.

ನಿರ್ಮಾಣ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆ ಕೇವಲ ರಿಯಲ್‌ ಎಸ್ಟೇಟ್‌, ಎಂಜಿನಿಯರ್ಗಳಲ್ಲದೆ ಜನಸಾಮಾನ್ಯರಿಗೆ ತಿಳಿಸುವ ಇಂತಹ ಪ್ರದರ್ಶನಗಳು ನಡೆಯಬೇಕು. ನಿರ್ಮಾಣ ಕ್ಷೇತ್ರದಲ್ಲಿನ ತಂತ್ರಜ್ಞಾನದ ಬದಲಾವಣೆ, ಹೊಸ ಅನ್ವೇಷಣೆಗಳ ಮಾಹಿತಿ ಜನರಿಗೆ ಗೊತ್ತಾಗುತ್ತದೆ. ಇದರಿಂದ ಸೂರು ನಿರ್ಮಿಸಿಕೊಳ್ಳಬೇಕು ಎನ್ನುವವರಿಗೆ ಕಡಿಮೆ ವೆಚ್ಚ, ಹೆಚ್ಚು ಬಾಳಿಕೆ ಬರುವ ಸಾಮಗ್ರಿಗಳ ಆಯ್ಕೆಗೆ ಅನುಕೂಲವಾಗುತ್ತದೆ. ಕಟ್ಟಡ ನಿರ್ಮಾಣಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಒಂದೇ ಸೂರಿನಡಿ ಜನರಿಗೆ ಮಾಹಿತಿ ನೀಡುವ ಈ ಕಾರ್ಯ ಉತ್ತಮವಾಗಿದೆ ಎಂದು ಶ್ಲಾಘಿಸಿದರು.

ಆಡಳಿತದ ದುರ್ಬಲತೆ: ಸರಕಾರದ ಯೋಜನೆಗಳು ಸಾಕಷ್ಟಿದ್ದರೂ ಅಧಿಕಾರಿಗಳ ಕಾರ್ಯವೈಖರಿಯಿಂದ ಅನುಷ್ಠಾನಕ್ಕೆ ಬರುತ್ತಿಲ್ಲ. ಇದು ಆಡಳಿತದ ದುರ್ಬಲತೆಗೆ ಸಾಕ್ಷಿಯಾಗಿದೆ. ಹು-ಧಾ ಕೇಂದ್ರ ವಿಧಾನಸಭೆ ಕ್ಷೇತ್ರದಲ್ಲಿ ಸುಮಾರು 200 ಎಕರೆ ಜಮೀನು ಖರೀದಿಸಿ ಜನರಿಗೆ ಆಶ್ರಯ ಮನೆಗಳನ್ನು ನಿರ್ಮಿಸಬೇಕು ಎಂಬ ಚಿಂತನೆಯಿದೆ. ಆರಂಭದಲ್ಲಿ ಸುಮಾರು 100 ಎಕರೆ ಜಮೀನು ಕೊಡಲು ರೈತರು ಮುಂದೆ ಬಂದಿದ್ದು, ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನಧಿಕೃತ ಬಡಾವಣೆ: ಮಹಾನಗರದ ಅಭಿವೃದ್ಧಿಗೆ ಪೂರಕವಾಗಿ ನಗರ ಅಭಿವೃದ್ಧಿ ಯೋಜನೆ (ಸಿಡಿಪಿ) ಪ್ರಸ್ತಾವನೆ ಕಳುಹಿಸಿ ಎರಡು ವರ್ಷ ಆದರೂ ಸರಕಾರ ಅನುಮೋದನೆ ನೀಡಿಲ್ಲ. ಹುಡಾ ನಿರ್ಲಕ್ಷéದಿಂದ ನಗರದಲ್ಲಿ ಅನಧಿಕೃತ ಬಡಾವಣೆ ನಿರ್ಮಾಣವಾಗಿವೆ. ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗಿಲ್ಲ. ಯಾವುದೇ ದಾಖಲೆಗಳಿಲ್ಲದ ನಿವೇಶನಗಳನ್ನು ಖರೀದಿಸಿ ಬಡ ಹಾಗೂ ಮಧ್ಯಮ ವರ್ಗದ ಜನರು ವಂಚನೆಗೊಳಗಾಗುತ್ತಾರೆ ಎಂದು ಹೇಳಿದರು.

ಉದ್ಯಮಿ ಸುರೇಶ ಶೇಜವಾಡಕರ ಮಾತನಾಡಿ, ಕಟ್ಟಡಗಳನ್ನು ಬೇಗ ಮುಗಿಸುವುದರಿಂದ ಖರ್ಚು ಕೂಡ ಕಡಿಮೆಯಾಗುತ್ತದೆ ಎನ್ನುವ ಮನಸ್ಥಿತಿ ಜನರಲ್ಲಿದೆ. ಅದಕ್ಕೆ ಪೂರಕವಾಗಿ ಇಂದಿನ ತಂತ್ರಜ್ಞಾನ ನಿರ್ಮಾಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಮಾಡಿದೆ. ನಿರ್ಮಾಣ ಕ್ಷೇತ್ರದಲ್ಲಿ ಎಂಜಿನಿಯರ್‌ಗಳ ಪಾತ್ರ ಬಹುಮುಖ್ಯವಾಗಿದೆ ಎಂದರು.

ಅದ್ವೈ ತ ವಿದ್ಯಾಶ್ರಮದ ಶ್ರೀ ಪ್ರಣವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಆಶೀರ್ವಾದ ಪೈಪ್‌ ಕಂಪನಿಯ ಪ್ರಾದೇಶಿಕ ವ್ಯವಸ್ಥಾಪಕ ಹೇಮಂತ್‌ ವರ್ಮಾ, ಎಸಿಸಿಇ ಅಧ್ಯಕ್ಷ ಶ್ರೀಕಾಂತ ಪಾಟೀಲ, ಉದ್ಯಮಿ ಜಿ.ಸಿ. ಪಾಟೀಲ ಮಾತನಾಡಿದರು.

ಎಸಿಸಿಇ ಪದಾಧಿಕಾರಿಗಳಾದ ಅಶೋಕ ಬಸವಾ, ಸುರೇಶ ಕಿರೇಸೂರ, ನಾರಾಯಣ ಪ್ರಸಾದ ಪಾಠಕ, ಉಮೇಶ ನೀಲಿ, ಸಂಜೀವ ಜೋಶಿ, ವಸಂತ ಪಾಲನಕರ ಇನ್ನಿತರರಿದ್ದರು.

ಒಂದೇ ಸೂರಿನಡಿ ಎಲ್ಲ ಲಭ್ಯ
ಕಟ್ಟಡ ನಿರ್ಮಾಣ ಹಾಗೂ ಮನೆ ಸೌಂದರ್ಯಕ್ಕೆ ಅಗತ್ಯ ವಸ್ತುಗಳು ಒಂದೇ ಸೂರಿನಲ್ಲಿ ಪ್ರದರ್ಶದಲ್ಲಿವೆ. ಫೆ. 17ರ ವರೆಗೆ ಇಂದಿರಾ ಗಾಜಿನಮನೆಯಲ್ಲಿ ಆಯೋಜಿಸಿದ್ದು, ಪ್ರವೇಶ ಉಚಿತವಾಗಿದೆ. ಸಿಮೆಂಟ್‌, ಸಿಮೆಂಟ್‌ ಇಟ್ಟಿಗೆ, ಕಬ್ಬಿಣ ಕಂಬಿ, ಪೈಪ್‌, ಪೀಠೊಪಕರಣ, ಮರಳು, ಟೈಲ್ಸ್‌, ಮಾರ್ಬಲ್ಸ್‌ ಸೇರಿದಂತೆ ವಿವಿಧ ಸಾಮಗ್ರಿಗಳಿವೆ. ಮನೆ ನಿರ್ಮಾಣಕ್ಕೆ ಅಗತ್ಯ ಮಾಹಿತಿಯೂ ದೊರೆಯಲಿದೆ. ಮನೆ ನಿರ್ಮಾಣಕ್ಕೆ ಬೇಕಾದ ಸಾಲ, ಸಾಲದ ಮಾಹಿತಿ ನೀಡಲು ವಿವಿಧ ಬ್ಯಾಂಕ್‌ನವರು ಸ್ಟಾಲ್‌ಗ‌ಳನ್ನು ಹಾಕಿದ್ದಾರೆ. ಪೀಠೊಪಕರಣಗಳ ಖರೀದಿ ವ್ಯವಸ್ಥೆಯೂ ಇದೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.