ಬಸ್‌ ಸಂಚಾರ ಹೆಚ್ಚಿದರೂ ಆದಾಯ ಅಷ್ಟಕಷ್ಟೆ

ಶೇ.70 ಬಸ್‌ಗಳ ಸಂಚಾರ ,ಅರ್ಧದಷ್ಟೂ ತಲುಪದ ಗಳಿಕೆ

Team Udayavani, Nov 3, 2020, 1:31 PM IST

huballi-tdy-3

ಸಾಮದರ್ಭಿಕ ಚಿತ್ರ

ಹುಬ್ಬಳ್ಳಿ: ಲಾಕ್‌ಡೌನ್‌ ಸಂಪೂರ್ಣ ತೆರವುಗೊಳಿಸಿದ ನಂತರ ಜನಜೀವನ ಸಹಜ ಸ್ಥಿತಿಗೆ ಮರಳಿದರೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಎಲ್ಲಾ ಅನುಸೂಚಿಗಳನ್ನು ಕಾರ್ಯಾಚರಣೆಗೊಳಿಸಲು ಸಾಧ್ಯವಾಗುತ್ತಿಲ್ಲ. ಶೇ.70 ಬಸ್‌ಗಳುಸಂಚಾರಗೊಳ್ಳುತ್ತಿದ್ದು, ಸಾರಿಗೆ ಆದಾಯ ಮಾತ್ರ ಕೋವಿಡ್‌-19 ಪೂರ್ವದಲ್ಲಿದ್ದ ಆದಾಯದ ಅರ್ಧದಷ್ಟು ತಲುಪಿಲ್ಲ.

ಆರ್ಥಿಕ ಸಂಕಷ್ಟದಲ್ಲಿ ನಲುಗುತ್ತಿದ್ದ ವಾಯವ್ಯ ಸಾರಿಗೆ ಸಂಸ್ಥೆಗೆ ಕೋವಿಡ್‌-19 ಚೇತರಿಸಿಕೊಳ್ಳಲಾಗದಂತಹ ಪೆಟ್ಟು ನೀಡಿದೆ. ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಗೊಳ್ಳುತ್ತಿದ್ದರೂ ಸಾರಿಗೆ ಸಂಸ್ಥೆ ಚೇತರಿಸಿಕೊಳ್ಳದಂತಹ ಪರಿಸ್ಥಿತಿಗೆ ತಲುಪಿದೆ. ಕಳೆದ ಐದು ತಿಂಗಳಿನಿಂದ ಹಂತ ಹಂತವಾಗಿ ಬಸ್‌ಗಳ ಕಾರ್ಯಾಚರಣೆ ಆರಂಭಿಸಲಾಗಿದೆ. ಇತ್ತೀಚೆಗಷ್ಟೇ ಅಂತಾರಾಜ್ಯ ಬಸ್‌ಗಳ ಸಂಚಾರ ಆರಂಭಿಸಿದರೂ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದನೆ ವ್ಯಕ್ತವಾಗುತ್ತಿಲ್ಲ. ಸಂಸ್ಥೆ ವ್ಯಾಪ್ತಿಯ 9 ವಿಭಾಗಗಳಿಂದ ಶೇ.70 ಬಸ್‌ಗಳಕಾರ್ಯಚರಣೆಗೊಳಿಸಲಾಗುತ್ತಿದೆ. ಆದರೆ ಸಾರಿಗೆಆದಾಯ ಮಾತ್ರ ಶೇ.50 ದಾಟಿಲ್ಲ. ಇದು ಸಂಸ್ಥೆಗೆ ದೊಡ್ಡ ಹಿನ್ನಡೆಯಾಗಿ ಪರಿಣಿಮಿಸಿದೆ.

ವಸ್ತು ಸ್ಥಿತಿ ಹೇಗಿದೆ?: ಕೋವಿಡ್‌-19 ಪೂರ್ವದಲ್ಲಿವಾಯವ್ಯ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ 9 ವಿಭಾಗಗಳು,51 ಘಟಕಗಳಿಂದ ನಿತ್ಯ ಸರಾಸರಿ 4660 ಅನುಸೂಚಿಗಳುಕಾರ್ಯಚರಣೆಗೊಳ್ಳುತ್ತಿದ್ದವು. ಆದರೆ 2020 ಅಕ್ಟೋಬರ್‌ ತಿಂಗಳ ಮೂರನೇ ವಾರದಲ್ಲಿ 3720 ಅನುಸೂಚಿಗಳು ಮಾತ್ರ ಕಾರ್ಯಾಚರಣೆಗೊಳ್ಳುತ್ತಿವೆ.ಪ್ರಯಾಣಿಕರ ಕೊರತೆಯಿಂದ ಸುಮಾರು900 ಅನುಸೂಚಿಗಳಲ್ಲಿ ಬಸ್‌ಗಳನ್ನು ಓಡಿಸಲುಅಧಿಕಾರಿಗಳಿಗೆ ಧೈರ್ಯವಿಲ್ಲದಂತಾಗಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ ಬಸ್‌ಗಳನ್ನು ರಸ್ತೆಗಿಳಿಸಿದ್ದರೂಕೆಲ ಮಾರ್ಗಗಳಲ್ಲಿ ನಿರೀಕ್ಷಿತ ಸಾರಿಗೆ ಆದಾಯ ಬಾರದಿರುವುದು ಮತ್ತಷ್ಟು ನಷ್ಟಕ್ಕೆ ಕಾರಣವಾಗಿದೆ.

ಕೋವಿಡ್‌-19 ಪೂರ್ವದಲ್ಲಿ ಪ್ರತಿನಿತ್ಯ 5ರಿಂದ 5.5 ಕೋಟಿ ರೂ. ಸಾರಿಗೆ ಆದಾಯವಿತ್ತು. ಆದರೆಶೇ.70 ಬಸ್‌ಗಳ ಸಂಚಾರ ಮಾಡುತ್ತಿದ್ದರೂ ಆದಾಯಮಾತ್ರ 2.5 ಕೋಟಿ ರೂ. ದಾಟುತ್ತಿಲ್ಲ. ಬೆಂಗಳೂರು ಸೇರಿದಂತೆ ಕೆಲ ಮಾರ್ಗಗಳಲ್ಲಿ ಮಾತ್ರ ಬಸ್‌ಗಳಿಗೆ ಬೇಡಿಕೆಯಿದೆ. ಇನ್ನೂ ಕೆಲ ನಗರಗಳಿಗೆ ಹಿಂದಿನಷ್ಟು ಬಸ್‌ಗಳನ್ನು ಬಿಡಲು ಪ್ರಯಾಣಿಕರ ಕೊರತೆಯಿದೆ. ಹೀಗಾಗಿ ಮುಂಗಡ ಟಿಕೆಟ್‌ ಬುಕಿಂಗ್‌ಗೆ ಒಂದೊಂದು ಮಾರ್ಗದಲ್ಲಿ ಆರೇಳು ಬಸ್‌ಗಳನ್ನು ನೀಡಿ ಸಂಜೆ ವೇಳೆಗೆ ಐದಾರು ಬಸ್‌ಗಳು ರದ್ದಾಗುತ್ತಿವೆ. ಪ್ರತಿ ತಿಂಗಳು ಕನಿಷ್ಠ 25-30 ಲಕ್ಷ ರೂ. ಒಪ್ಪಂದದ ಮೇರೆಗೆ (ಬಾಡಿಗೆ) ಬಸ್‌ಗಳ ಪಡೆಯುವುದರಿಂದ ಆದಾಯವಿತ್ತು ಆದರೆ ಇದೀಗ ಅದು ಶೂನ್ಯಕ್ಕೆ ತಲುಪಿದೆ.

ಕೈ ಕೊಟ್ಟ ಅಂತಾರಾಜ್ಯ ಸಾರಿಗೆ: ವಾಯವ್ಯ ಸಾರಿಗೆ ವ್ಯಾಪ್ತಿಯ ಬೆಳಗಾವಿ, ಚಿಕ್ಕೋಡಿ, ಧಾರವಾಡ, ಹುಬ್ಬಳ್ಳಿ ಹಾಗೂ ಬಾಗಲಕೋಟೆ ವಿಭಾಗಗಳಿಗೆ ಮಹಾರಾಷ್ಟ್ರದಮಾರ್ಗಗಳು ಹೆಚ್ಚು ಆದಾಯ ತರುವಂತಹವಾಗಿದೆ. ಅಂತಾರಾಜ್ಯ ಬಸ್‌ಗಳ ಕಾರ್ಯಾಚರಣೆಗೆ ಅವಕಾಶನೀಡಿದಾಗ್ಯೂ ಕೂಡ ಕರ್ನಾಟಕ-ಮಹಾರಾಷ್ಟ್ರದನಡುವೆ ಸಂಚಾರ ಮಾಡುವ ಪ್ರಯಾಣಿಕರಸಂಖ್ಯೆಯಲ್ಲಿ ಸಾಕಷ್ಟು ಕುಸಿತ ಕಂಡಿದೆ. ಒಂದು ವಿಭಾಗದಿಂದ 12-15 ಬಸ್‌ಗಳು ಓಡಾಡುತ್ತಿದ್ದ ಜಾಗದಲ್ಲಿ 3-4 ಬಸ್‌ಗಳು ಮಾತ್ರ ಸಂಚಾರ ಮಾಡುತ್ತಿವೆ. ಲಾಭದ ಆದಾಯ ತರುವಂತಹ ಮಾರ್ಗಗಳೇ ಕೈ ಕೊಟ್ಟಿವೆ.

ದೀಪಾವಳಿ ಆದಾಯ ನಿರೀಕ್ಷೆ: ಪ್ರತಿ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೆಲ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡುವುದರಿಂದ ಕನಿಷ್ಠ 3 ರಿಂದ 3.20 ಕೋಟಿ ರೂ. ಹೆಚ್ಚುವರಿ ಆದಾಯವಿರುತ್ತಿತ್ತು. ಇದರೊಂದಿಗೆ ಒಂದಿಷ್ಟು ಮೈಸೂರು ದಸರಾದಿಂದ ಹೆಚ್ಚುವರಿ ಆದಾಯ ನಿರೀಕ್ಷೆ ಮಾಡಲಾಗುತ್ತಿತ್ತು. ಮೈಸೂರು ದಸರಾ ಹಬ್ಬಕ್ಕೂ ಒಂದಿಷ್ಟು ನಿರ್ಬಂಧಗಳನ್ನು ಹೇರಿರುವುದರಿಂದಈ ಆದಾಯವೂ ಖೋತಾ ಆಗಿದೆ. ಜನರ ಮನಸ್ಥಿತಿ ನೋಡಿದರೆ ಈ ದೀಪಾವಳಿ ಹೆಚ್ಚುವರಿಆದಾಯ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎನ್ನುವುದುಅಧಿಕಾರಿಗಳು ಅಭಿಪ್ರಾಯವಾಗಿದೆ.

ಜನರ ಬೇಡಿಕೆಗೆ ತಕ್ಕಂತೆ ಬಸ್‌ ಗಳನ್ನು ಹೆಚ್ಚಿಸಲಾಗುತ್ತಿದೆ. ಬಸ್‌ಗಳ ಕಾರ್ಯಾಚರಣೆ ಹೆಚ್ಚಾಗುತ್ತಿದೆಯಾದರೂ ನಿರೀಕ್ಷೆಗೆ ಇನ್ನೂ ಸಾರಿಗೆ ಆದಾಯ ತಲುಪಿಲ್ಲ. ದೀಪಾವಳಿಗೆ ಹೆಚ್ಚುವರಿ ಕಾರ್ಯಾಚರಣೆಗೆ ಯೋಜನೆ ಹಾಕಿಕೊಳ್ಳಲಾಗಿದೆ. ಜನರ ಬೇಡಿಕೆಗೆ ತಕ್ಕಂತೆ ಅಗತ್ಯ ಮಾರ್ಗಗಳಲ್ಲಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು.ನಿತಿನ ಹೆಗಡೆ, ಮುಖ್ಯ ಸಂಚಾರಿ ವ್ಯವಸ್ಥಾಪಕ

 

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.