ಶಿಕ್ಷಣದಿಂದ ಮಾತ್ರ ಸಮಾಜದ ಅಭ್ಯುದಯ

ಬೆಣಚಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಿದ ಅಟಲ್‌ ಟಿಂಕರಿಂಗ್‌ ಪ್ರಯೋಗಾಲಯ ಉದ್ಘಾಟನೆ

Team Udayavani, May 3, 2022, 2:16 PM IST

14

ಅಳ್ನಾವರ: ಪ್ರಸ್ತುತ ಸಮಾಜದಲ್ಲಿ ಜ್ಞಾನದ ಜೊತೆಗೆ ವಿಜ್ಞಾನ, ಕೌಶಲಾಭಿವೃದ್ಧಿ ಗುಣ ಹೊಂದುವುದು ತೀರಾ ಅವಶ್ಯವಿದೆ. ಶಿಕ್ಷಣದಿಂದ ಮಾತ್ರ ಸಮಾಜದ ಅಭ್ಯುದಯ ಸಾಧ್ಯ. ಮಕ್ಕಳು ಸಮಾಜದ ಹಾಗೂ ದೇಶದ ಆಸ್ತಿಯಾಗಿ ಬೆಳೆಯಬೇಕು ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.

ಬೆಣಚಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಅನುದಾನದಡಿ ನಿರ್ಮಿಸಿದ ಅಟಲ್‌ ಟಿಂಕರಿಂಗ್‌ ಪ್ರಯೋಗಾಲಯ ಉದ್ಘಾಟಿಸಿ ಮಕ್ಕಳಿಂದ ಮಾಹಿತಿ ಪಡೆದ ನಂತರ ಅವರು ಮಾತನಾಡಿದರು.

ಶಿಕ್ಷಣ ವ್ಯವಸ್ಥೆಯ ಬದಲಾವಣೆಯನ್ನು ಸರಿಯಾಗಿ ಬಳಕೆ ಮಾಡಿಕೊಂಡು ಮುಂದೆ ಬರಬೇಕು. ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಎಂದರು.

ಬಿಇಒ ಉಮೇಶ ಭೂಮಕ್ಕನವರ ಮಾತನಾಡಿ, ಕೋವಿಡ್‌ ಕಾಲದಲ್ಲಿ ಆದ ಪಾಠದ ಹಿನ್ನಡೆ ಸರಿಪಡಿಸಲು ಇಲಾಖೆ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ. ಜಿಲ್ಲೆಯಲ್ಲಿ ಈ ವರ್ಷ 9ನೇ ತರಗತಿ ಪಾಸಾಗಿ 10 ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ರಜೆ ನೀಡದೆ ಅಧ್ಯಯನ ಮುಂದುವರಿಸಲಾಗಿದೆ. ಮೂರು ವಿಷಯದಲ್ಲಿ ಪ್ರತಿದಿನ ಅಭ್ಯಾಸ ಬೋಧನೆ ಮಾಡಲಾಗುತ್ತಿದ್ದು, ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.

ಭಾರತ ಸರ್ಕಾರದ ನ್ಯೂಕ್ಲಿಯರ್‌ ರಿಪ್ರೇಸಿಂಗ್‌ ಬೋರ್ಡ್‌ನ ನಿವೃತ್ತ ಅಧಿಕಾರಿ ಎಸ್‌.ವಿ. ಉದಗಟ್ಟಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಮಾಹಿತಿ ಪಡೆಯಲು ಈ ಲ್ಯಾಬ್‌ ಸಹಕಾರಿ. ವಿಜ್ಞಾನ, ತಂತ್ರಜ್ಞಾನ, ಸಂಶೋಧನೆಗಳಿಗೆ ಇಲ್ಲಿ ವಿಶೇಷ ಆದ್ಯತೆ ಇದೆ. ತೋಟಗಾರಿಕೆ, ಕೃಷಿ, ನೃತ್ಯ, ಕಸೂತಿ ಮುಂತಾದ ವಿಭಾಗದ ಆವಿಷ್ಕಾರ ಈ ಲ್ಯಾಬ್‌ ನಲ್ಲಿ ಮಾಡಬಹುದು. ಮಕ್ಕಳಿಗೆ ವಿಜ್ಞಾನದ ಜೊತೆಗೆ ಜ್ಞಾನದ ಸಂಪತ್ತು ಪಡೆಯಲು ಇದು ಉತ್ತಮ ವೇದಿಕೆ ಎಂದರು.

ತಹಶೀಲ್ದಾರ್‌ ಅಮರೇಶ ಪಮ್ಮಾರ, ತಾಪಂ ಇಒ ಸಂತೋಷಕುಮಾರ ತಳಕಲ್‌, ಸ್ವಾಮಿ ವಿವೇಕಾನಂದ ಯೂಥ್‌ ಮೂವ್‌ಮೆಂಟ್‌ ನ ಉತ್ತರ ಕರ್ನಾಟಕ ಭಾಗದ ಮುಖ್ಯಸ್ಥ ಕೆ.ಎಸ್‌. ಜಯಂತ, ಬೆಣಚಿ ಗ್ರಾಪಂ ಅಧ್ಯಕ್ಷ ಉಮೇಶ ಕದಂ, ಮುಖ್ಯಾಧ್ಯಾಪಕ ಕೆ.ಎಂ. ಶೇಖ, ಗಂಗಮ್ಮ ಮುಸ್ಟಗಿ, ಎನ್‌.ಜಿ. ಕಮ್ಮಾರ, ತುಕಾರಾಮ ಪಾಟೀಲ, ಎಸ್‌.ಎಫ್‌. ಸೋಜ, ಲಕ್ಷ್ಮೀ ಸಾತನೂರಿ, ಪರಶುರಾಮ ರೇಡೆಕರ, ಬಸಯ್ಯ ಹಿರೇಮಠ, ಭರತೇಶ ಪಾಟೀಲ, ಬಸವರಾಜ ಬೈಲೂರ, ಮಂಜುನಾಥ ಚೆನ್ನನವರ, ಆನಂದ ಕೆಂಚನ್ನವರ, ಮಲ್ಲನಗೌಡ ಪಾಟೀಲ ಇನ್ನಿತರರಿದ್ದರು. ಪಿ.ಬಿ. ಕಣವಿ ತಂಡದವರು ಪ್ರಾರ್ಥನಾ ಗೀತೆ ಹಾಡಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.