ವೈಮನಸ್ಸು ತೊರೆದು ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ರಮೇಶ

Team Udayavani, Apr 23, 2018, 5:08 PM IST

23-April-28.jpg

ಚಿಕ್ಕೋಡಿ: ರಾಜ್ಯದಲ್ಲಿ 5 ವರ್ಷಗಳ ಕಾಲ ಸುಸ್ಥಿರ ಆಡಳಿತ ನೀಡಿರುವ ಕಾಂಗ್ರೆಸ್‌ ಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದ್ದು, ಟಿಕೆಟ್‌ ವಿಷಯವಾಗಿ ಉಂಟಾಗಿರುವ ವೈಮನಸ್ಸು ಮರೆತು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ತಾಲೂಕಿನ ಕರೋಶಿ ಗ್ರಾಮದಲ್ಲಿ ರವಿವಾರ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ ಹಂಚಿಕೆ ವಿಷಯವಾಗಿ ಅತೃಪ್ತಿ ಸಹಜವಾಗಿದ್ದು, ಅತೃಪ್ತರಿಗೆ ಮುಂಬರುವ ದಿನಗಳಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸ್ಥಾನಮಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಆದರೆ ವೈಯಕ್ತಿಕ ಪ್ರತಿಷ್ಠೆಗಾಗಿ ಪಕ್ಷಕ್ಕೆ ದ್ರೋಹ ಮಾಡುವುದು ಸಲ್ಲದು. ರಾಯಬಾಗ ಅಭ್ಯರ್ಥಿ ಪ್ರದೀಪ ಮಾಳಗೆ ಅವರನ್ನು ಅತ್ಯ ಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಉಂಟಾಗಿರುವ ಬಂಡಾಯ ಶಮನಗೊಳಿಸಿ 12ಕ್ಕೂ ಹೆಚ್ಚು ಸ್ಥಾನದಲ್ಲಿ ಕಾಂಗ್ರೆಸ್‌ ಗೆಲ್ಲಿಸಲಾಗುವುದು. 5 ವರ್ಷದ ಜನಪರ ಕಾರ್ಯಗಳೇ ಪ್ರಸಕ್ತ ಚುನಾವಣೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿವೆ. ಬೆಳಗಾವಿ ಜಿಲ್ಲೆಯ ಎಲ್ಲ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ತಮ್ಮಲ್ಲಿರುವ ಸಣ್ಣಪುಟ್ಟ ಬಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದರು.

ನಾಗರಮುನ್ನೋಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಚ್‌.ಪಟೇಲ್‌ ಅವರ ಮನೆಗೆ ಭೇಟಿ ನೀಡಿದ ಸಚಿವ ರಮೇಶ ಜಾರಕಿಹೊಳಿ, ತಮ್ಮಲ್ಲಿರುವ ವೈಮನಸ್ಸು ಬಿಟ್ಟು ಕಾಂಗ್ರೆಸ್‌ ಪಕ್ಷವನ್ನು ಇನ್ನಷ್ಟು ಬಲಪಡಿಸುವಂತೆ ಸೂಚನೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ವಿವೇಕರಾವ ಪಾಟೀಲ, ಎಪಿಎಂಸಿ ಅಧ್ಯಕ್ಷ ಸುಭಾಷಗೌಡ ಪಾಟೀಲ, ರಾಯಬಾಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರದೀಪ ಮಾಳಗೆ, ಗಂಗಾಧರ ದೇವರುಷಿ, ಧನರಾಜ ಶೇಂಡೂರೆ, ಚಂದ್ರಕಾಂತ ಎಲ್ಲಾಯಿಗೋಳ, ವಿಠಲ ಕೇಸ್ತಿ, ಯೂಸುಫ್‌ ಪಟೇಲ್‌, ಓಂಕಾರ ಶೇಂಡೂರೆ, ಸಿದ್ರಾಮ ಹಿರೇಕುರುಬರ, ಬಾಬುರಾವ ಝಿಪರೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.